Thursday, November 21, 2024
Homeಜ್ಯೋತಿಷ್ಯ-ರಾಶಿಭವಿಷ್ಯಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (17-10-2024)

ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (17-10-2024)

Today's Horoscope

ನಿತ್ಯ ನೀತಿ : ಒಂದು ಸಣ್ಣ ನಗು ಸ್ನೇಹವನ್ನು ಪ್ರಾರಂಭಿಸುತ್ತದೆ. ಒಂದು ಒಳ್ಳೆಯ ಮಾತು ದ್ವೇಷವನ್ನು ಕೊನೆಗೊಳಿಸುತ್ತದೆ. ಒಳ್ಳೆಯ ಮನಸ್ಸು ಸಂಬಂಧಗಳನ್ನು ಕಾಪಾಡುತ್ತದೆ. ಒಳ್ಳೆಯ ವ್ಯಕ್ತಿತ್ವ ಜೀವನವನ್ನು ಬದಲಾಯಿಸುತ್ತದೆ.

ಪಂಚಾಂಗ : ಗುರುವಾರ , 17-10-2024
ಕ್ರೋಧಿನಾಮ ಸಂವತ್ಸರ / ದಕ್ಷಿಣಾಯಣ / ಶರದ್‌ ಋತು / ಆಶ್ವಯುಜ ಮಾಸ / ಶುಕ್ಲ ಪಕ್ಷ / ತಿಥಿ: ಹುಣ್ಣಿಮೆ / ನಕ್ಷತ್ರ: ರೇವತಿ / ಯೋಗ: ಹರ್ಷಣ / ಕರಣ: ವಿಷ್ಠಿ

ಸೂರ್ಯೋದಯ – ಬೆ.06.10
ಸೂರ್ಯಾಸ್ತ – 06.00
ರಾಹುಕಾಲ – 1.30-3.00
ಯಮಗಂಡ ಕಾಲ – 6.00-7.30
ಗುಳಿಕ ಕಾಲ – 9.00-10.30

ರಾಶಿಭವಿಷ್ಯ :
ಮೇಷ
: ಜೀವನ ಸಂಗಾತಿಯಿಂದ ಆರ್ಥಿಕ ಲಾಭ ಮತ್ತು ಗೌರವ ಪಡೆಯುವಿರಿ.
ವೃಷಭ: ಹಣದ ಕೊರತೆ ಇರುವುದಿಲ್ಲ.
ಮಿಥುನ: ಪತ್ನಿ ಹಾಗೂ ಮಕ್ಕಳ ಸಹಕಾರದಿಂದ ಕೆಲಸ-ಕಾರ್ಯಗಳು ಸುಗಮವಾಗಿ ನೆರವೇರಲಿವೆ.

ಕಟಕ: ವಿದ್ಯಾರ್ಥಿಗಳು ಏಕಾಗ್ರತೆ ಕಾಯ್ದುಕೊಳ್ಳಲು ಹೆಚ್ಚು ಶ್ರಮ ವಹಿಸಬೇಕಾಗುತ್ತದೆ.
ಸಿಂಹ: ಕಷ್ಟ ಎದುರಿಸಬೇಕಾಗುತ್ತದೆ.
ಕನ್ಯಾ: ವಿದ್ಯಾರ್ಥಿಗಳಿಗೆ ಅನುಕೂಲಕರ ವಾತಾವರಣ ನಿರ್ಮಾಣ.

ತುಲಾ: ಹಿತಶತ್ರುಗಳು ನಿಮ್ಮ ಹೆಸರನ್ನು ಹಾಳು ಮಾಡುವ ಪ್ರಯತ್ನ ಮಾಡಬಹುದು.
ವೃಶ್ಚಿಕ: ಸಿಗುವ ಅವಕಾಶ ವನ್ನು ಸದ್ಬಳಕೆ ಮಾಡಿಕೊಳ್ಳಿ.
ಧನುಸ್ಸು: ಕಾಲಕಾಲಕ್ಕೆ ವೈದ್ಯಕೀಯ ತಪಾಸಣೆ ಮಾಡಿಸಿಕೊಳ್ಳಿ.

ಮಕರ: ಉದ್ಯೋಗದಲ್ಲಿ ಒತ್ತಡ ಹೆಚ್ಚಾಗಲಿದೆ.
ಕುಂಭ: ನಿರೀಕ್ಷಿತ ಮೂಲಗಳಿಂದ ಆದಾಯ ಸಿಗಲಿದೆ.
ಮೀನ: ನಿಮ್ಮ ನಡವಳಿಕೆಯಲ್ಲಿನ ಬದಲಾವಣೆ ಇತರರಿಗೆ ಚರ್ಚೆಯ ವಿಷಯವಾಗಲಿದೆ.

RELATED ARTICLES

Latest News