Friday, November 22, 2024
Homeಜ್ಯೋತಿಷ್ಯ-ರಾಶಿಭವಿಷ್ಯಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (18-09-2024)

ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (18-09-2024)

Horoscope

ನಿತ್ಯ ನೀತಿ : ಎಲ್ಲರಿಗೂ ಪದಗಳು ಉಚಿತವಾಗಿ ಸಿಗುತ್ತವೆ. ಆದರೆ, ಅವುಗಳನ್ನು ಹೇಗೆ ಬಳಸುತ್ತೇವೆ ಎಂಬುದರ ಮೇಲೆ ಮಾನವೀಯ ಮೌಲ್ಯ ನಿರ್ಧಾರವಾಗುತ್ತದೆ.

ಪಂಚಾಂಗ : ಬುಧವಾರ, 18-09-2024
ಕ್ರೋಧಿನಾಮ ಸಂವತ್ಸರ / ದಕ್ಷಿಣಾಯಣ / ವರ್ಷ ಋತು / ಭಾದ್ರಪದ ಮಾಸ / ಶುಕ್ಲ ಪಕ್ಷ / ತಿಥಿ: ಹುಣ್ಣಿಮೆ / ನಕ್ಷತ್ರ: ಪೂರ್ವಾಭಾದ್ರ / ಯೋಗ: ಗಂಡ / ಕರಣ: ಬಾಲವ

ಸೂರ್ಯೋದಯ – ಬೆ.06.09
ಸೂರ್ಯಾಸ್ತ – 06.18
ರಾಹುಕಾಲ – 12.00-1.30
ಯಮಗಂಡ ಕಾಲ – 7.30-9.00
ಗುಳಿಕ ಕಾಲ – 10.30-12.00

ರಾಶಿಭವಿಷ್ಯ :
ಮೇಷ
: ವಸ್ತ್ರಾಭರಣ ಖರೀದಿಸುವ ಸಾಧ್ಯತೆ ಇದೆ. ಅವಿವಾಹಿತರಿಗೆ ಶೀಘ್ರ ವಿವಾಹ ಯೋಗ.
ವೃಷಭ: ಅಪರೂಪದ ಅತಿಥಿ ಆಗಮನದಿಂದ ಮನಸ್ಸಿಗೆ ಸಂತೋಷವಾಗಲಿದೆ.
ಮಿಥುನ: ಕಾರ್ಯ ಸಾಮರ್ಥ್ಯವನ್ನು ಅರ್ಥಮಾಡಿ ಕೊಂಡು ಆದಾಯ ಹೆಚ್ಚಿಸುವ ಕೆಲಸ ಮಾಡಿ.

ಕಟಕ: ಕಷ್ಟದ ಕೆಲಸವನ್ನು ಇಷ್ಟದಿಂದ ಮಾಡಿ. ಮನಸ್ಸು ಸಮಾಧಾನ ದಿಂದಿರುತ್ತದೆ.
ಸಿಂಹ: ವ್ಯವಹಾರದಲ್ಲಿ ಶತ್ರು ಗಳಿಂದ ತೊಂದರೆ. ಅವಿವಾಹಿತರಿಗೆ ವಿವಾಹ ನಿಶ್ಚಯ.
ಕನ್ಯಾ: ಷೇರು ಮಾರುಕಟ್ಟೆ ಯಲ್ಲಿ ಹಣ ಹೂಡಿಕೆ ಮಾಡು ವವರು ಎಚ್ಚರಿಕೆಯಿಂದಿರಿ.

ತುಲಾ: ನಂಬಿದ ಜನರಿಂದ ಮೋಸ ಹೋಗುವ ಸಾಧ್ಯತೆಗಳು ಹೆಚ್ಚಾಗಿವೆ. ಎಚ್ಚರಿಕೆಯಿಂದಿರಿ.
ವೃಶ್ಚಿಕ: ವ್ಯಾಪಾರದಲ್ಲಿ ಶತ್ರುಗಳ ಕಾಟ. ನಿವೇಶನ ಖರೀದಿಗೆ ನಿರ್ಧಾರ ಮಾಡುವಿರಿ.
ಧನುಸ್ಸು: ವಿವಾಹಿತ ದಂಪತಿ ಸ್ಮರಣೀಯ ಕ್ಷಣ ಗಳನ್ನು ಕಳೆಯಲು ಸಣ್ಣ ಪ್ರವಾಸಕ್ಕೆ ಹೋಗಬಹುದು.

ಮಕರ: ಯೋಗ ಧ್ಯಾನ ಮಾಡುವುದರಿಂದ ಹೆಚ್ಚು ಪ್ರಯೋಜನಕಾರಿಯಾಗಿದೆ.
ಕುಂಭ: ಕೌಟುಂಬಿಕ ಕಲಹ ಬೀದಿಗೆ ಬರುವ ಸಾಧ್ಯತೆ ಇದೆ. ಮಾತಿಗಿಂತ ವೌನವಾಗಿರಿ.
ಮೀನ: ಜವಾಬ್ದಾರಿ ಸ್ವೀಕರಿಸುವ ಮೊದಲು ಅದನ್ನು ನಿಭಾಯಿಸುವ ಬಗ್ಗೆ ಯೋಚಿಸಿ.

RELATED ARTICLES

Latest News