ನಿತ್ಯ ನೀತಿ :ನೀನು ಒಳ್ಳೆಯವನಾಗಲು ಇಚ್ಛಿಸುವೆಯಾದರೆ ನೀನು ಕೆಟ್ಟವನು ಎಂಬುದನ್ನು ಮೊದಲು ನಂಬಬೇಕು.
# ಪಂಚಾಂಗ : ಶನಿವಾರ , 19-02-2022
ಪ್ಲವನಾಮ ಸಂವತ್ಸರ | ಉತ್ತರಾಯಣ | ಶಿಶಿರ ಋತು | ಮಾಘ ಮಾಸ | ಕೃಷ್ಣ ಪಕ್ಷ | ತಿಥಿ: ತೃತೀಯಾ| ನಕ್ಷತ್ರ: ಉತ್ತರಾಭಾದ್ರ| ಮಳೆ ನಕ್ಷತ್ರ: ಶತಭಿಷ
* ಸೂರ್ಯೋದಯ : ಬೆ.06.41
* ಸೂರ್ಯಾಸ್ತ : 06.27
* ರಾಹುಕಾಲ : 9.00-10.30
* ಯಮಗಂಡ ಕಾಲ : 1.30-3.00
* ಗುಳಿಕ ಕಾಲ : 6.00-7.30
# ರಾಶಿಭವಿಷ್ಯ
ಮೇಷ: ಅದೃಷ್ಟವು ನಿಮಗೆ ಎದುರಾಗುವ ಯಾವುದೇ ಸವಾಲನ್ನು ನಿಭಾಯಿಸಲು ಅನುಕೂಲ ಮಾಡಿಕೊಡಲಿದೆ.
ವೃಷಭ: ವೃತ್ತಿಪರರು ವೃತ್ತಿಜೀವನದಲ್ಲಿ ಸಕಾರಾತ್ಮಕ ಫಲಿತಾಂಶ ಪಡೆಯಲು ಗಮನ ಹರಿಸಬೇಕು.
ಮಿಥುನ: ಸ್ರ್ಪಧಿಗಳನ್ನು ಸೋಲಿಸಲು ಸಾಧ್ಯವಾಗುತ್ತದೆ ಮತ್ತು ಕಚೇರಿಯಲ್ಲಿ ಪರಿಸ್ಥಿತಿ ಸುಗಮವಾಗಿರುತ್ತದೆ.
ಕಟಕ: ಅಧಿಕೃತ ಪ್ರಯಾಣ ಕೈಗೊಳ್ಳುವಿರಿ ಮತ್ತು ಅದರಿಂದ ಪ್ರಯೋಜನ ಸಿಗಲಿದೆ.
ಸಿಂಹ: ಆರೋಗ್ಯದ ಬಗ್ಗೆ ಹೆಚ್ಚು ಕಾಳಜಿ ವಹಿಸಿ. ಸಮಯಕ್ಕೆ ಸರಿಯಾಗಿ ಔಷಧಿ ತೆಗೆದುಕೊಳ್ಳಬೇಕು.
ಕನ್ಯಾ: ಕಚೇರಿಯಲ್ಲಿ ಉನ್ನತ ಅಧಿಕಾರಿಯೊಂದಿಗೆ ವಾದ-ವಿವಾದ ನಡೆಯುವ ಸಾಧ್ಯತೆಗಳು ಹೆಚ್ಚಾಗಿವೆ.
ತುಲಾ: ಉದ್ಯೋಗಿಗಳಿಗೆ ಕಠಿಣ ಪರಿಶ್ರಮದಿಂದ ಉತ್ತಮ ಪ್ರತಿಫಲ ಸಿಗಲಿದೆ.
ವೃಶ್ಚಿಕ: ಹೆಜ್ಜೆಹೆಜ್ಜೆಗೂ ಅಡೆತಡೆ ಉಂಟಾಗುವುದ ರಿಂದ ಮಾನಸಿಕ ನೆಮ್ಮದಿ ಹಾಳಾಗಲಿದೆ.
ಧನುಸ್ಸು: ಶತ್ರುಗಳ ಕಾಟ ಅಧಿಕವಿರುತ್ತದೆ. ಆದರೆ ಅವರು ನಿಮ್ಮನ್ನು ಏನೂ ಮಾಡಲು ಆಗುವುದಿಲ್ಲ.
ಮಕರ: ಸ್ಪರ್ಧಾತ್ಮಕ ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳು ಉತ್ತಮ ಸಾಧನೆ ಮಾಡುವರು.
ಕುಂಭ: ಎಲ್ಲರೊಂದಿಗೆ ಸೌಹಾರ್ದಯುತ ಸಂಬಂಧ ಉಳಿಸಿಕೊಳ್ಳಲು ನಿರಂತರವಾಗಿ ಪ್ರಯತ್ನಿಸಿ.
ಮೀನ: ಹಿಡಿದ ಕೆಲಸ ಗಳನ್ನು ಒಂದೇ ಬಾರಿಗೆ ಪೂರ್ಣಗೊಳಿಸುವುದು ಕಷ್ಟಸಾಧ್ಯವಾಗಲಿದೆ.
