Friday, November 22, 2024
Homeಜ್ಯೋತಿಷ್ಯ-ರಾಶಿಭವಿಷ್ಯಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (19-05-2024)

ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (19-05-2024)

ನಿತ್ಯ ನೀತಿ : ಜೀವನದ ಮೂರು ಸೂತ್ರಗಳು. ಸಂತೋಷದಲ್ಲಿ ಮಾತು ಕೊಡಬೇಡಿ. ಕೋಪದಲ್ಲಿ ಉತ್ತರ ಕೊಡಬೇಡಿ. ದುಃಖದಲ್ಲಿ ನಿರ್ಧಾರ ಕೈಗೊಳ್ಳಬೇಡಿ.

ಪಂಚಾಂಗ : ಭಾನುವಾರ , 19-05-2024
ಕ್ರೋಧಿನಾಮ ಸಂವತ್ಸರ / ಉತ್ತರಾಯಣ / ವಸಂತ ಋತು / ವೈಶಾಖ ಮಾಸ / ಶುಕ್ಲ ಪಕ್ಷ / ತಿಥಿ: ಏಕಾದಶಿ / ನಕ್ಷತ್ರ: ಹಸ್ತ / ಯೋಗ: ವಜ್ರ / ಕರಣ: ಭವ

ಸೂರ್ಯೋದಯ : ಬೆ.05.53
ಸೂರ್ಯಾಸ್ತ : 06.39
ರಾಹುಕಾಲ : 4.30-6.00
ಯಮಗಂಡ ಕಾಲ : 12.00-1.30
ಗುಳಿಕ ಕಾಲ : 3.00-4.30

ರಾಶಿಭವಿಷ್ಯ :
ಮೇಷ
: ಮನೆ ನಿರ್ಮಾಣ ಕೆಲಸದಲ್ಲಿರುವ ಅಡೆತಡೆಗಳು ಸಹೋದರರು ನೀಡುವ ಸಲಹೆಗಳಿಂದ ದೂರವಾಗಲಿವೆ.
ವೃಷಭ: ಹಣ ಹೇಗೆ ವಿನಿಯೋಗ ಆಗಬೇಕು ಎನ್ನುವುದರ ಬಗ್ಗೆ ಸ್ಪಷ್ಟತೆ ಬಹಳ ಮುಖ್ಯ.
ಮಿಥುನ: ಉದ್ಯೋಗದ ಕಡೆಗೆ ಹೆಚ್ಚಿನ ಗಮನಹರಿಸಿ. ಖರ್ಚು ಹೆಚ್ಚಾಗಲಿದೆ.

ಕಟಕ: ಗಣ್ಯ ವ್ಯಕ್ತಿಗಳನ್ನು ಸಂಪರ್ಕಿಸುವಿರಿ.
ಸಿಂಹ: ನಿಮ್ಮ ಸ್ವಭಾವದಲ್ಲಿ ಮಹತ್ತರವಾದ ಬದಲಾವಣೆಗಳು ಆಗಲಿವೆ.
ಕನ್ಯಾ: ಸಹೋದರರು ಆರ್ಥಿಕ ಸಹಾಯ ಮಾಡುವರು. ಇದರಿಂದ ಆರ್ಥಿಕ ಪರಿಸ್ಥಿತಿ ಸ್ವಲ್ಪ ಮಟ್ಟಿಗೆ ಸುಧಾರಿಸಲಿದೆ.

ತುಲಾ: ಬೇರೆಯವರು ನಿಮ್ಮೊಂದಿಗೆ ಗೆಳೆತನ ಬೆಳೆಸಲು ಬಯಸುತ್ತಾರೆ. ಜಾಗ್ರತೆ ವಹಿಸುವುಉ ಬಹಳ ಸೂಕ್ತ.
ವೃಶ್ಚಿಕ: ಷೇರು ಮಾರುಕಟ್ಟೆಯಲ್ಲಿ ಹಣ ಹೂಡಿಕೆ ಮಾಡುವವರು ಎಚ್ಚರಿಕೆಯಿಂದಿರಿ.
ಧನುಸ್ಸು: ಉದ್ಯೋಗಸ್ಥ ಮಹಿಳೆಯರಿಗೆ ಶುಭ ದಿನ. ಕೃಷಿಕರಿಗೆ ಶುಭಫಲ ಸಿಗಲಿದೆ. ಉದ್ಯೋಗದಲ್ಲಿ ಲಾಭ.

ಮಕರ: ಕೆಲಸ ಸ್ಥಳದಲ್ಲಿ ಕಿರಿಕಿರಿ ಉಂಟಾಗಿ ಕೆಲಸ ಬಿಡುವ ಮನಸ್ಸು ಕೂಡ ಮಾಡಬಹುದು.
ಕುಂಭ: ಹಿರಿಯರ ಸಕಾಲಿಕ ನೆರವಿನಿಂದ ಎದುರಾಗ ಬಹುದಾದ ವಿಪತ್ತುಗಳು ದೂರವಾಗಲಿವೆ.
ಮೀನ: ಧಾರ್ಮಿಕ ಕಾರ್ಯಗಳತ್ತ ಗಮನ ಹರಿಸುವಿರಿ. ಕೀರ್ತಿ ನಿಮ್ಮನ್ನು ಅರಸಿ ಬರಲಿದೆ.

RELATED ARTICLES

Latest News