ನಿತ್ಯ ನೀತಿ : ಹಣದಿಂದ ಮಾಡಿದ್ದು ಮಾತ್ರ ಸಹಾಯವಲ್ಲ, ಸದುದ್ದೇಶದಿಂದ ಹೇಳುವ ನಾಲ್ಕು ಒಳ್ಳೆಯ ಮಾತುಗಳೂ ಇತರರ ಬದುಕನ್ನು ಬೆಳಗಿಸಬಲ್ಲವು.
ಪಂಚಾಂಗ : ಸೋಮವಾರ, 19-05-2025
ವಿಶ್ವಾವಸುನಾಮ ಸಂವತ್ಸರ / ಉತ್ತರಾಯಣ / ಸೌರ ಗ್ರೀಷ ಋತು / ವೈಶಾಖ ಮಾಸ / ಕೃಷ್ಣ ಪಕ್ಷ / ತಿಥಿ: ಷಷ್ಠಿ / ನಕ್ಷತ್ರ: ಶ್ರವಣ / ಯೋಗ: ಬ್ರಹಾ / ಕರಣ: ವಿಷ್ಠಿ
ಸೂರ್ಯೋದಯ – ಬೆ.05.54
ಸೂರ್ಯಾಸ್ತ – 06.39
ರಾಹುಕಾಲ – 7.30-9.00
ಯಮಗಂಡ ಕಾಲ – 10.30-12.00
ಗುಳಿಕ ಕಾಲ – 1.30-3.00
ರಾಶಿಭವಿಷ್ಯ :
ಮೇಷ: ಕಚೇರಿ ಕೆಲಸವನ್ನು ಮನಃಪೂರ್ವಕವಾಗಿ ಮಾಡಿ. ಅನ್ಯರಿಗೆ ಉಪಕಾರ ಮಾಡುವಿರಿ.
ವೃಷಭ: ಪದೇ ಪದೇ ಅನಾರೋಗ್ಯಕ್ಕೆ ತುತ್ತಾಗುವ ನೀವು ಆರೋಗ್ಯದ ಬಗ್ಗೆ ಹೆಚ್ಚು ಕಾಳಜಿ ವಹಿಸಿ.
ಮಿಥುನ: ಬಂಧುಗಳನ್ನು ವಿನಾಕಾರಣ ದ್ವೇಷಿಸುವಿರಿ.
ಕಟಕ: ಶತ್ರುಗಳನ್ನು ಜಯಿಸುವಿರಿ. ನಿಮ್ಮ ಪ್ರತಿಭೆಗೆ ಸೂಕ್ತ ಮನ್ನಣೆ ಸಿಗಲಿದೆ.
ಸಿಂಹ: ಶ್ರಮ ಹೆಚ್ಚಿದ್ದರೂ ದುಡಿಮೆ ಲಾಭದಾಯಕ ವಾಗಿರುವುದರಿಂದ ಮನಸ್ಸಿಗೆ ನೆಮ್ಮದಿ ಸಿಗಲಿದೆ.
ಕನ್ಯಾ: ಉನ್ನತ ಅಧಿಕಾರಿ ಭೇಟಿಗಾಗಿ ದಿನವಿಡೀ ಓಡಾಡಬೇಕಾದ ಪರಿಸ್ಥಿತಿ ಎದುರಾಗುವುದು.
ತುಲಾ: ಗಣ್ಯ ವ್ಯಕ್ತಿಗಳನ್ನು ಸಂಪರ್ಕಿಸುವಿರಿ. ತಾಯಿಯ ಆರೋಗ್ಯದಲ್ಲಿ ಚೇತರಿಕೆ.
ವೃಶ್ಚಿಕ: ಯಾರದ್ದೋ ಮಾತು ಕೇಳಿ ನಿಮ್ಮ ಅಮೂಲ್ಯ ಸಮಯ ಹಾಳುಮಾಡಿಕೊಳ್ಳದಿರಿ.
ಧನುಸ್ಸು: ನಕಾರಾತ್ಮಕವಾಗಿ ಮಾತನಾಡುವ ಜನರಿಂದ ದೂರವಿರುವುದು ಬಹಳ ಒಳ್ಳೆಯದು.
ಮಕರ: ಕಣ್ಣಿನ ದೃಷ್ಟಿಯಲ್ಲಿ ಬದಲಾವಣೆ ಯಾಗುವುದರಿಂದ ವೈದ್ಯರನ್ನು ಭೇಟಿ ಮಾಡಿ.
ಕುಂಭ: ಪ್ರಯತ್ನಗಳು ಫಲ ನೀಡುವ ಸಾಧ್ಯತೆಗಳಿವೆ. ಪ್ರಮುಖ ನಿರ್ಧಾರ ಕೈಗೊಳ್ಳಲು ಉತ್ತಮ ಸಮಯ.
ಮೀನ: ಸಮಾಧಾನದಿಂದ ಕಾರ್ಯನಿರ್ವಹಿಸಿದರೆ ಜಯ ಕಟ್ಟಿಟ್ಟ ಬುತ್ತಿ ಎಂಬ ಅರಿವು ಇರಲಿ.