ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (20-05-2022)

Spread the love

ನಿತ್ಯ ನೀತಿ : ವರ್ಷವೆಲ್ಲ ಖಾಲಿ ಇದ್ದ ಭೂಮಿಗೆ ಒಂದು ಮಳೆ ಸಾಕು ಹಸಿರಾಗಲು. ಹಾಗೆಯೇ ನಮ್ಮ ಒಂದು ಒಳ್ಳೆಯ ನಿರ್ಧಾರ ಸಾಕು ಜೀವನವನ್ನು ಸುಂದರಮಯವಾಗಿಸಿಕೊಳ್ಳಲು.

# ಪಂಚಾಂಗ : ಶುಕ್ರವಾರ , 20.-05-2022
ಶುಭಕೃತ್ ನಾಮ ಸಂವತ್ಸರ / ಉತ್ತರಾಯಣ / ವಸಂತ ಋತು / ವೈಶಾಖ ಮಾಸ /
ಕೃಷ್ಣ ಪಕ್ಷ / ತಿಥಿ: ಪಂಚಮಿ/ ನಕ್ಷತ್ರ: ಉತ್ತರಾಷಾಢ/ಮಳೆ ನಕ್ಷತ್ರ: ಕೃತ್ತಿಕಾ

* ಸೂರ್ಯೋದಯ : ಬೆ.5.53
* ಸೂರ್ಯಾಸ್ತ : 06.39
* ರಾಹುಕಾಲ :10.30-12.00
* ಯಮಗಂಡ ಕಾಲ : 3.00-4.30
* ಗುಳಿಕ ಕಾಲ : 7.30-9.00

# ಇಂದಿನ ರಾಶಿ ಭವಿಷ್ಯ : 
ಮೇಷ: ಆರೋಗ್ಯದ ಬಗ್ಗೆ ಹೆಚ್ಚು ಕಾಳಜಿ ವಹಿಸುವುದು ಒಳಿತು. ಸಂಗಾತಿಯೊಂದಿಗೆ ಪ್ರವಾಸ ಕೈಗೊಳ್ಳುವಿರಿ.
ವೃಷಭ: ವ್ಯವಹಾರದಲ್ಲಿ ತ್ವರಿತ ನಿರ್ಧಾರ ತೆಗೆದುಕೊಳ್ಳುವಲ್ಲಿ ವಿಫಲವಾದರೆ ಬಹಳ ತೊಂದರೆಗಳನ್ನು ಅನುಭವಿಸಬೇಕಾಗುತ್ತದೆ.
ಮಿಥುನ: ಕುಟುಂಬದಲ್ಲಿ ಪರಿಸ್ಥಿತಿಗಳು ಏರಿಳಿತಗಳಿಂದ ಕೂಡಿರುತ್ತವೆ. ವೈವಾಹಿಕ ಜೀವನದ ಬಗ್ಗೆ ಗಮನ ಕೊಡಿ

ಕಟಕ: ರಕ್ತ ಸಂಬಂಧಿಗಳ ವಿರೋಧ ಎದುರಿಸ ಬೇಕಾಗುತ್ತದೆ.
ಸಿಂಹ: ಹೊಸ ವ್ಯವಹಾರ ಪ್ರಾರಂಭಿಸುವ ಆಲೋಚನೆಗಳು ಮನಸ್ಸಿಗೆ ಬರಬಹುದು.
ಕನ್ಯಾ: ಲಾಭ ಗಳಿಸಲು ಮತ್ತು ಆರ್ಥಿಕ ಸ್ಥಿತಿ ಬಲಪಡಿಸಲು ಅನೇಕ ಅವಕಾಶಗಳು ಸಿಗಲಿವೆ.

ತುಲಾ: ಹಳೆಯ ಕಾನೂನು ವಿಷಯಗಳಿಗೆ ಪರಿಹಾರ ದೊರೆಯಲಿದೆ. ದೂರ ಪ್ರಯಾಣ ಬೇಡ.
ವೃಶ್ಚಿಕ: ವಿವಿಧ ಕ್ಷೇತ್ರ ಗಳಲ್ಲಿ ಅನೇಕ ರೀತಿಯ ಸವಾಲುಗಳನ್ನು ಎದುರಿಸಬೇಕಾಗುತ್ತದೆ.
ಧನುಸ್ಸು: ಉದ್ಯೋಗದಲ್ಲಿ ಬಡ್ತಿ ಮತ್ತು ವೇತನ ಹೆಚ್ಚಳವಾಗುವ ಅವಕಾಶಗಳಿವೆ.

ಮಕರ: ನೀವು ಮಾಡುವ ಒಳ್ಳೆಯ ಕಾರ್ಯಗಳು ನಿಮ್ಮ ಕುಟುಂಬದ ಹಿರಿಮೆಯನ್ನು ಹೆಚ್ಚಿಸುತ್ತದೆ.
ಕುಂಭ: ಪೂರ್ವಜರ ಆಸ್ತಿಯಿಂದ ಲಾಭ ಸಿಗಲಿದೆ. ಕಿರಿಯ ಸಹೋದ್ಯೋಗಿಗಳಿಗೆ ಸಹಾಯ ಮಾಡುವಿರಿ.
ಮೀನ: ಹಣದ ವಿಷಯದಲ್ಲಿ ಸಾಮಾನ್ಯ ದಿನಕ್ಕಿಂತ ಇಂದು ಉತ್ತಮವಾಗಿರುತ್ತದೆ.

Facebook Comments