ನಿತ್ಯ ನೀತಿ : ಇನ್ನೊಬ್ಬರನ್ನು ಬೆಳೆಸು ತಪ್ಪಿಲ್ಲ. ಆದರೆ, ಅವರು ಎದ್ದು ನಿಂತು ನಿನ್ನನ್ನೇ ತುಳಿದು ಬದುಕುವಷ್ಟು ಬೆಳೆಸಬೇಡ.
ಪಂಚಾಂಗ : ಮಂಗಳವಾರ, 20-08-2024
ಕ್ರೋಧಿನಾಮ ಸಂವತ್ಸರ / ದಕ್ಷಿಣಾಯಣ / ವರ್ಷ ಋತು / ಶ್ರಾವಣ ಮಾಸ / ಕೃಷ್ಣ ಪಕ್ಷ / ತಿಥಿ: ಪ್ರತಿಪದ್ / ನಕ್ಷತ್ರ: ಶತಭಿಷಾ / ಯೋಗ: ಅತಿಗಂಡ / ಕರಣ: ಬಾಲವ /
ಸೂರ್ಯೋದಯ – ಬೆ.06.08
ಸೂರ್ಯಾಸ್ತ – 06.38
ರಾಹುಕಾಲ – 3.00-4.30
ಯಮಗಂಡ ಕಾಲ – 9.00-10.30
ಗುಳಿಕ ಕಾಲ – 12.00-1.30
ರಾಶಿಭವಿಷ್ಯ :
ಮೇಷ: ವೃತ್ತಿ ಜೀವನದಲ್ಲಿ ಉತ್ತಮ ಪ್ರಗತಿ ಸಾಧಿಸುವಿರಿ. ಆರೋಗ್ಯದ ಕಡೆ ಗಮನ ಹರಿಸಿ.
ವೃಷಭ: ಆಸ್ತಿ ವಿಚಾರದಲ್ಲಿ ಕಲಹ. ಸಹೋದರತ್ವ ದಲ್ಲಿ ದ್ವೇಷ ಉಂಟಾಗಲಿದೆ.
ಮಿಥುನ: ಉದ್ಯೋಗದಲ್ಲಿ ಹೆಚ್ಚು ಒತ್ತಡ. ಆರ್ಥಿಕ ಪರಿಸ್ಥಿತಿಯಲ್ಲಿ ಸಂಕಷ್ಟ ಎದುರಾಗಲಿದೆ.
ಕಟಕ: ಒತ್ತಡದ ಜೀವನ, ದೃಢ ನಿರ್ಧಾರದಿಂದ ಅಭಿವೃದ್ಧಿ.
ಸಿಂಹ: ಖಾಸಗಿ ಉದ್ಯೋಗಿ ಗಳಿಗೆ ಬಡ್ತಿ ದೊರೆಯಲಿದೆ.
ಕನ್ಯಾ: ಸಂಗಾತಿಗೆ ನಿಮ್ಮೊಂದಿಗೆ ತಮ್ಮ ಅಭಿಪ್ರಾಯ ವ್ಯಕ್ತಪಡಿಸಲು ಅವಕಾಶ ಮಾಡಿಕೊಡಿ.
ತುಲಾ: ಅನವಶ್ಯಕ ವಿವಾದಗಳಿಗೆ ಸಿಲುಕಿ ತೊಂದರೆ ಅನುಭವಿಸುವಿರಿ.
ವೃಶ್ಚಿಕ: ತಂದೆ-ತಾಯಿ ಆಶೀರ್ವಾದಿಂದ ಉತ್ತಮ ಸ್ಥಾನ. ಕುಲದೇವತೆ ದರ್ಶನ.
ಧನುಸ್ಸು: ಸ್ನೇಹಿತರಿಗೆ ಸಹಕಾರ. ಹಣಕಾಸಿನ ವಿಚಾರ ದಲ್ಲಿ ಶುಭ ಸುದ್ದಿ. ಸ್ವಯಂ ಉದ್ಯೋಗಸ್ಥರಿಗೆ ಶುಭ.
ಮಕರ: ಉತ್ತಮ ಆರೋಗ್ಯ. ಧಾರ್ಮಿಕ ಕಾರ್ಯ ಗಳಿಗೆ ಹೆಚ್ಚು ಒತ್ತು. ತಾಯಿಯಿಂದ ಸಹಾಯ ಸಿಗಲಿದೆ.
ಕುಂಭ: ರಿಯಲ್ ಎಸ್ಟೇಟ್ ವ್ಯಾಪಾರಿಗಳಿಗೆ ಲಾಭದಾಯಕವಾದ ದಿನ.
ಮೀನ: ದಾಂಪತ್ಯ ಜೀವನದಲ್ಲಿ ಕಲಹ. ಗೊಂದಲದ ವಾತಾವರಣ ನಿರ್ಮಾಣವಾಗಬಹುದು.