Sunday, June 30, 2024
Homeಜ್ಯೋತಿಷ್ಯ-ರಾಶಿಭವಿಷ್ಯಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (21-06-2024)

ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (21-06-2024)

ನಿತ್ಯ ನೀತಿ : ಅನುಮಾನ ತಪ್ಪಾಗಬಹುದು. ಆದರೆ, ಅನುಭವ ಎಂದಿಗೂ ತಪ್ಪಾಗಲ್ಲ. ಅನುಮಾನ ಕೇವಲ ನಮ ಮನಸ್ಸಿನ ಕಲ್ಪನೆ. ಅನುಭವ ಜೀವನದಲ್ಲಿ ನಾವು ಕಲಿತ ಪಾಠ.

ಪಂಚಾಂಗ : ಶುಕ್ರವಾರ , 21-06-2024
ಕ್ರೋಧಿನಾಮ ಸಂವತ್ಸರ / ದಕ್ಷಿಣಾಯಣ / ಗ್ರೀಷ್ಮ ಋತು / ಜ್ಯೇಷ್ಠ ಮಾಸ / ಶುಕ್ಲ ಪಕ್ಷ / ತಿಥಿ: ಚತುರ್ದಶಿ/ ನಕ್ಷತ್ರ: ಜ್ಯೇಷ್ಠಾ / ಯೋಗ: ಶುಭ / ಕರಣ: ವಿಷ್ಟಿ
ಸೂರ್ಯೋದಯ – ಬೆ.05.55
ಸೂರ್ಯಾಸ್ತ – 06.48
ರಾಹುಕಾಲ – 10.30-12.00
ಯಮಗಂಡ ಕಾಲ – 3.00-4.30
ಗುಳಿಕ ಕಾಲ – 7.30-9.00

ರಾಶಿಭವಿಷ್ಯ :
ಮೇಷ
: ಸಂಕಷ್ಟಗಳಿಂದ ಮುಕ್ತಿ ದೊರೆಯಲಿದೆ. ಸರ್ಕಾರಿ ನೌಕರರಿಗೆ ಅನುಕೂಲವಾಗಲಿದೆ.
ವೃಷಭ: ಉದ್ಯೋಗ ಕ್ಷೇತ್ರದಲ್ಲಿ ಅಧಿ ಕಾರಿ ವರ್ಗಕ್ಕೆ ಹತ್ತಿರವಾಗಿರುವುದರಿಂದ ಬಡ್ತಿ ಮತ್ತು ವೇತನ ಹೆಚ್ಚಳದ ರೂಪದಲ್ಲಿ ಲಾಭ ದೊರೆಯಲಿದೆ.
ಮಿಥುನ: ವೃತ್ತಿ ಜೀವನದಲ್ಲಿ ಧೈರ್ಯದಿಂದ ಪರಿಣಾಮಕಾರಿ ನಿರ್ಧಾರಗಳನ್ನು ತೆಗೆದುಕೊಳ್ಳಿ.

ಕಟಕ: ನಿಮ್ಮ ವ್ಯವಹಾರಗಳಲ್ಲಿ ಹೊಸ ತಂತ್ರಜ್ಞಾನ ಅಳವಡಿಸಿಕೊಳ್ಳುವುದರಿಂದ ಅಭಿವೃದ್ಧಿ ಸಾಧಿಸುವಿರಿ.
ಸಿಂಹ: ರಫ್ತು ಮಾರಾಟದಲ್ಲಿ ಸ್ವಲ್ಪಮಟ್ಟಿನ ಹಿನ್ನಡೆ ಎದುರಾದರೂ ಆದಾಯಕ್ಕೆ ತೊಂದರೆಯಿಲ್ಲ.
ಕನ್ಯಾ: ನಿರುದ್ಯೋಗಿಗಳಿಗೆ ತಾತ್ಕಾಲಿಕ ಉದ್ಯೋಗ ದೊರೆಯಲಿದೆ.

ತುಲಾ: ವಿದ್ಯಾಭ್ಯಾಸದಲ್ಲಿ ನಿರೀಕ್ಷೆಗೂ ಮೀರಿದ ಫಲಿತಾಂಶ ಹೊಂದುವಿರಿ.
ವೃಶ್ಚಿಕ: ಉದ್ಯೋಗದಲ್ಲಿ ಒತ್ತಡ ಹೆಚ್ಚಾಗಬಹುದು. ಆರೋಗ್ಯದಲ್ಲಿ ಏರುಪೇರಾಗಲಿದೆ.
ಧನುಸ್ಸು: ನೀವು ಮಾಡುವ ಕೆಲಸ-ಕಾರ್ಯಗಳಲ್ಲಿ ಜನಪ್ರಿಯತೆ ಗಳಿಸುವಿರಿ. ಅನಿರೀಕ್ಷಿತ ಧನಲಾಭವಾಗಲಿದೆ.

ಮಕರ: ವಿವಿಧ ಧಾರ್ಮಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸುವುದರಿಂದ ಮನಸ್ಸಿಗೆ ನೆಮ್ಮದಿ ಸಿಗಲಿದೆ.
ಕುಂಭ: ವ್ಯಾವಹಾರಿಕ ಜೀವನದ ಕೆಲವು ಮುಖ್ಯವಾದ ನಿರ್ಧಾರಗಳನ್ನು ಕೈಗೊಳ್ಳುವಿರಿ.
ಮೀನ: ಒಡಹುಟ್ಟಿದವರಲ್ಲಿ ಭಾವನಾತ್ಮಕ ಸಂಬಂಧ ಬೆಳೆಸಿಕೊಳ್ಳಿ. ದೂರ ಪ್ರಯಾಣ ಮಾಡುವುದು ಬೇಡ.

RELATED ARTICLES

Latest News