Sunday, November 23, 2025
Homeಜ್ಯೋತಿಷ್ಯ-ರಾಶಿಭವಿಷ್ಯಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (21-11-2025)

ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (21-11-2025)

Today's Horoscope

ನಿತ್ಯ ನೀತಿ : `ಎಲ್ಲಿಯತನಕ ನಂಬಿಕೆ ಎಂಬ ಆಯಸ್ಸು ಗಟ್ಟಿಯಾಗಿರುತ್ತದೆಯೋ ಅಲ್ಲಿಯ ತನಕ ಸ್ನೇಹ ಸಂಬಂಧಗಳಿಗೆ ಸಾವಿಲ್ಲ’.

ಪಂಚಾಂಗ : ಶುಕ್ರವಾರ, 21-11-2025
ಶೋಭಕೃತ್‌ನಾಮ ಸಂವತ್ಸರ / ದಕ್ಷಿಣಾಯನ / ಋತು: ಸೌರ ಹೇಮಂತ / ಮಾಸ: ಮಾರ್ಗಶಿರ / ಪಕ್ಷ: ಶುಕ್ಲ / ತಿಥಿ: ಪ್ರತಿಪದಾ / ನಕ್ಷತ್ರ: ಅನುರಾಧಾ / ಯೋಗ: ಅತಿಗಂ / ಕರಣ: ಬಾಲವ
ಸೂರ್ಯೋದಯ – ಬೆ.06.21
ಸೂರ್ಯಾಸ್ತ – 5.50
ರಾಹುಕಾಲ – 10.30-12.00
ಯಮಗಂಡ ಕಾಲ – 3.00-4.30
ಗುಳಿಕ ಕಾಲ – 7.30-9.00

ರಾಶಿಭವಿಷ್ಯ :
ಮೇಷ
: ತಾಯಿಗೆ ಆರೋಗ್ಯ ಸಮಸ್ಯೆಯಿಂದಾಗಿ ಸ್ವಲ್ಪ ತೊಂದರೆ ಅನುಭವಿಸಬೇಕಾಗುತ್ತದೆ.
ವೃಷಭ: ರಿಯಲ್‌ ಎಸ್ಟೇಟ್‌ಗೆ ಸಂಬಂ ಸಿದ ಕ್ಷೇತ್ರಗಳಲ್ಲಿ ಉತ್ತಮ ಲಾಭ ಸಿಗಲಿದೆ.
ಮಿಥುನ: ಮನೆಯ ಎಲ್ಲ ಸದಸ್ಯರೊಂದಿಗೆ ಸಂಯಮದಿಂದ ಕಾಲ ಕಳೆಯಲು ಪ್ರಯತ್ನಿಸುವಿರಿ.

ಕಟಕ: ಕಠಿಣ ಪರಿಶ್ರಮ ದಿಂದ ಮಾತ್ರ ನಿಮ್ಮ ಕೆಲಸದಲ್ಲಿ ಯಶಸ್ವಿಯಾಗಲು ಸಾಧ್ಯವಾಗುತ್ತದೆ.
ಸಿಂಹ: ಆರೋಗ್ಯದ ಬಗ್ಗೆ ಹೆಚ್ಚು ಕಾಳಜಿ ವಹಿಸುವುದು ಬಹಳ ಒಳ್ಳೆಯದು.
ಕನ್ಯಾ: ವಿದ್ಯಾರ್ಥಿಗಳು ಏಕಾಗ್ರತೆ ಕಾಯ್ದುಕೊಳ್ಳಲು ಹೆಚ್ಚು ಶ್ರಮ ಪಡಬೇಕಾಗುತ್ತದೆ.

ತುಲಾ: ಹಿರಿಯರ ಸಕಾಲಿಕ ನೆರವಿನಿಂದ ಎದುರಾಗ ಬಹುದಾದ ವಿಪತ್ತುಗಳು ದೂರವಾಗಲಿವೆ.
ವೃಶ್ಚಿಕ: ಹಿಂದೆ ಹೂಡಿಕೆ ಮಾಡಿದ್ದ ಹಣದಿಂದ ಲಾಭ ಬರುವ ನಿರೀಕ್ಷೆಯಿದೆ.
ಧನುಸ್ಸು: ನೀವು ಮಾಡುವ ಕೆಲಸಗಳಿಂದ ಸಮಾಜ ದಲ್ಲಿ ಉತ್ತಮ ಸ್ಥಾನಮಾನ ದೊರೆಯಲಿದೆ.

ಮಕರ: ನಿಮ್ಮ ಶಕ್ತಿ-ಸಾಮರ್ಥ್ಯವನ್ನು ನೋಡಿ ಶತ್ರುಗಳು ದೂರ ಉಳಿಯುತ್ತಾರೆ.
ಕುಂಭ: ಬೇರೆಯವರು ನಿಮ್ಮೊಂದಿಗೆ ಗೆಳೆತನ ಬೆಳೆಸಲು ಬಯಸುತ್ತಾರೆ. ಜಾಗ್ರತೆ ವಹಿಸಿ.
ಮೀನ: ಆರ್ಥಿಕ ಸಮಸ್ಯೆಗಳಿಗೆ ಪರಿಹಾರ ಕಂಡು ಕೊಳ್ಳುವಿರಿ. ಎಲ್ಲೋ ಸಿಲುಕಿಕೊಂಡಿದ್ದ ಹಣ ಕೈ ಸೇರಲಿದೆ.

RELATED ARTICLES
- Advertisment -

Latest News