ನಿತ್ಯ ನೀತಿ : ಜವಾಬ್ದಾರಿಗಳ ಮುಂದೆ ಕನಸುಗಳು ಸೋತಾಗ, ತನಗಿಲ್ಲದ ನಗು ಪರರಿಗೆ ಮಾರಾಟವಾಗುತ್ತದೆ.
ಪಂಚಾಂಗ : ಶನಿವಾರ, 23-11-2024
ಕ್ರೋಧಿನಾಮ ಸಂವತ್ಸರ / ದಕ್ಷಿಣಾಯಣ / ಶರದ್ ಋತು / ಕಾರ್ತಿಕ ಮಾಸ / ಕೃಷ್ಣ ಪಕ್ಷ / ತಿಥಿ: ಅಷ್ಟಮಿ / ನಕ್ಷತ್ರ: ಮಘಾ / ಯೋಗ: ಐಂದ್ರ / ಕರಣ: ಬಾಲವ
ಸೂರ್ಯೋದಯ – ಬೆ.06.22
ಸೂರ್ಯಾಸ್ತ – 05.50
ರಾಹುಕಾಲ – 9.00-10.30
ಯಮಗಂಡ ಕಾಲ – 1.30-3.00
ಗುಳಿಕ ಕಾಲ – 6.00-7.30
ರಾಶಿಭವಿಷ್ಯ :
ಮೇಷ: ನಿಮ್ಮ ಸ್ವಭಾವದಲ್ಲಿ ಬದಲಾವಣೆಯಾಗ ಬೇಕು. ತಾಳ್ಮೆ- ಸಂಯಮ ತಂದುಕೊಳ್ಳಬೇಕು.
ವೃಷಭ: ಕಾನೂನು ತೊಡಕು ಎದುರಿಸಬೇಕಾದ ಸಂದರ್ಭ ಬರಬಹುದು. ಸಾಲಕ್ಕೆ ಜಾಮೀನಾಗಿ ನಿಲ್ಲದಿರಿ.
ಮಿಥುನ: ಯಾವುದೇ ಅಪಾಯಕಾರಿ ಸವಾಲುಗಳನ್ನು ಮೈ ಮೇಲೆ ಎಳೆದುಕೊಳ್ಳಬೇಡಿ.
ಕಟಕ: ಚಾಡಿ ಮಾತುಗಳನ್ನು ಕೇಳದಿರಿ. ಉದ್ಯೋಗದ ಕಡೆ ಗಮನ ನೀಡುವುದು ಒಳಿತು.
ಸಿಂಹ: ಅತಿಯಾದ ಆತ್ಮವಿಶ್ವಾಸ ಹೊಂದುವುದು ಬೇಡ. ಸುಖದಲ್ಲಿ ಮೈ ಮರೆಯದಿರಿ.
ಕನ್ಯಾ: ವಿದ್ಯಾರ್ಥಿಗಳಿಗೆ ವಿದೇಶ ವ್ಯಾಸಂಗಕ್ಕೆ ಅವಕಾಶ ಗಳು ಒದಗಿ ಬರಲಿವೆ.
ತುಲಾ: ಆರೋಗ್ಯಸಮಸ್ಯೆ ಗಳು ಎದುರಾಗಬಹುದು. ಸೂಕ್ತ ಸಮಯಕ್ಕೆ ವೈದ್ಯರ ಸಲಹೆ ಪಡೆಯುವುದು ಒಳಿತು.
ವೃಶ್ಚಿಕ: ಉದ್ಯೋಗದಲ್ಲಿ ನಿರೀಕ್ಷಿತ ರೀತಿಯಲ್ಲಿ ಪ್ರಗತಿ ಸಾಧಿಸಲು ಸಾಧ್ಯವಾಗುವುದಿಲ್ಲ.
ಧನುಸ್ಸು: ಶತ್ರುಗಳ ಕಾಟ ಇರುತ್ತದೆ. ಆದರೆ ಅವರು ನಿಮ್ಮನ್ನು ಏನೂ ಮಾಡಲು ಆಗುವುದಿಲ್ಲ.
ಮಕರ: ಸಂಗಾತಿಯಿಂದ ಸ್ವಲ್ಪ ಮಟ್ಟಿಗೆ ನಷ್ಟವಾಗುತ್ತದೆ. ಯಾವುದೇ ಕಾರಣಕ್ಕೂ ಕೆಲಸ ಬಿಡುವಂತಹ ನಿರ್ಧಾರ ಮಾಡದಿರಿ.
ಕುಂಭ: ಸೋದರ ಸಂಬಂಧಿ ಗಳು ಒಡವೆ ಮಾಡಿಸಿಕೊಡುವ ಸಾಧ್ಯತೆ ಇದೆ.
ಮೀನ: ವೈದ್ಯಕೀಯ ವೆಚ್ಚಗಳು ವಿಪರೀತವಾಗಲಿವೆ. ನಿಮ್ಮ ಆರೋಗ್ಯದ ಕಡೆಗೆ ಹೆಚ್ಚು ಗಮನ ಹರಿಸಿ.