Friday, May 3, 2024
Homeಜ್ಯೋತಿಷ್ಯ-ರಾಶಿಭವಿಷ್ಯಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (24-03-2024)

ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (24-03-2024)

ನಿತ್ಯ ನೀತಿ : ಜೀವನದಲ್ಲಿ ಎಲ್ಲ ರೀತಿಯ ಪಾಠವನ್ನೂ ಕಲಿಯುತ್ತೇವೆ. ಆದರೆ ಯಾರನ್ನು ನಂಬಬೇಕು, ಯಾರನ್ನು ನಂಬಬಾರದು ಅನ್ನೋದನ್ನು ಕೊನೆಯವರೆಗೂ ಕಲಿಯುವುದಿಲ್ಲ.

ಪಂಚಾಂಗ : ಭಾನುವಾರ, 24-03-2024
ಶೋಭಕೃತ್‍ನಾಮ ಸಂವತ್ಸರ / ಉತ್ತರಾಯಣ / ಶಿಶಿರ ಋತು / ಫಾಲ್ಗುಣ ಮಾಸ / ಶುಕ್ಲ ಪಕ್ಷ / ತಿಥಿ: ಚತುರ್ದಶಿ / ನಕ್ಷತ್ರ: ಪೂರ್ವಾಭಾದ್ರ / ಯೋಗ: ಗಂಡ / ಕರಣ: ವಿಷ್ಠಿ

ಸೂರ್ಯೋದಯ : ಬೆ.06.21
ಸೂರ್ಯಾಸ್ತ : 06.31
ರಾಹುಕಾಲ : 4.30-6.00
ಯಮಗಂಡ ಕಾಲ : 12.00-1.30
ಗುಳಿಕ ಕಾಲ : 3.00-4.30

ಇಂದಿನ ರಾಶಿಭವಿಷ್ಯ
ಮೇಷ
: ಅಂದುಕೊಂಡ ಕೆಲಸಗಳು ಈಡೇರಲಿವೆ. ಬಂಧುಗಳಿಂದ ಸಹಾಯ ಸಿಗಲಿದೆ.
ವೃಷಭ: ಮಕ್ಕಳಿಂದ ಅನುಕೂಲವಾಗಲಿದೆ. ಗೌರವ- ಸನ್ಮಾನ ಸಮಾರಂಭಗಳಲ್ಲಿ ಪಾಲ್ಗೊಳ್ಳುವಿರಿ.
ಮಿಥುನ: ನಿಮ್ಮ ಮೇಲೆ ಬಾಕಿ ಇರುವ ಕೆಲಸಗಳ ಹೊರೆ ಹೆಚ್ಚಾಗಬಹುದು.

ಕಟಕ: ವೈದ್ಯಕೀಯ ವೆಚ್ಚ ಹೆಚ್ಚಾಗುವುದರಿಂದ ಸಾಲ ಮಾಡಬೇಕಾದ ಸಂದರ್ಭ ಗಳು ಬರಬಹುದು.
ಸಿಂಹ: ವಿವಾಹಿತರು ಸಂಗಾತಿಗೆ ನಿಷ್ಠರಾಗಿರಿ. ಆದಷ್ಟು ಶ್ರಮವಹಿಸಿ ಕೆಲಸ ಮಾಡಬೇಕಾಗುತ್ತದೆ.
ಕನ್ಯಾ: ನಿರುದ್ಯೋಗಿಗಳಿಗೆ ಉದ್ಯೋಗ ಸಿಗಲಿದೆ.

ತುಲಾ: ಸಂಗಾತಿಯೊಡನೆ ಉತ್ತಮ ಬಾಂಧವ್ಯ ಹೊಂದುವಿರಿ. ವಿದ್ಯಾರ್ಥಿಗಳಿಗೆ ಅನುಕೂಲ.
ವೃಶ್ಚಿಕ: ಕುಟುಂಬದವರು ಮತ್ತು ಹಿತೈಷಿಗಳಿಗೆ ಸಂತೋಷವವಾಗಲಿದೆ.
ಧನುಸ್ಸು: ವಿದ್ಯಾರ್ಥಿಗಳು ಶಿಕ್ಷಣ ಕ್ಷೇತ್ರದಲ್ಲಿ ಉತ್ತಮ ಸಾಧನೆ ಮಾಡುವರು. ಇಡೀ ದಿನ ಶುಭವಾಗಿರಲಿದೆ.

ಮಕರ: ಉದ್ಯೋಗದಲ್ಲಿ ಬಡ್ತಿ ಮತ್ತು ವೇತನ ಹೆಚ್ಚಳವಾಗುವ ಅವಕಾಶಗಳಿವೆ.
ಕುಂಭ: ಶಕ್ತಿ ಮತ್ತು ಉತ್ಸಾಹ ತರುವ ಆನಂದಮಯ ಪ್ರವಾಸಕ್ಕೆ ಹೋಗುವಿರಿ.
ಮೀನ: ಮನೆಯಲ್ಲಿ ಜಗಳಗಳು ಉಂಟಾಗ ಬಹುದು. ಆರ್ಥಿಕ ಪರಿಸ್ಥಿತಿ ಹದಗೆಡಬಹುದು.

RELATED ARTICLES

Latest News