Monday, May 6, 2024
Homeಜ್ಯೋತಿಷ್ಯ-ರಾಶಿಭವಿಷ್ಯಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (24-04-2024)

ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (24-04-2024)

ನಿತ್ಯ ನೀತಿ : ನಮ್ಮ ಜೀವನದಲ್ಲಿ ಸಹಾಯ ಅಂತ ಕೇಳಿದ್ರೆ ಯಾರೂ ಮಾಡೋದಿಲ್ಲ. ಆದರೆ, ಸಲಹೆ ಕೊಡೋದಕ್ಕೆ ತುಂಬಾ ಜನ ಮುಂದೆ ಬರ್ತಾರೆ. ಇಷ್ಟೇ ಜೀವನ.

ಪಂಚಾಂಗ : ಬುಧವಾರ, 24-04-2024
ಕ್ರೋನಾಮ ಸಂವತ್ಸರ / ಉತ್ತರಾಯಣ / ವಸಂತ ಋತು / ಚೈತ್ರ ಮಾಸ / ಕೃಷ್ಣ ಪಕ್ಷ / ತಿಥಿ: ಪ್ರತಿಪದ್ / ನಕ್ಷತ್ರ: ಸ್ವಾತಿ / ಯೋಗ: ಸಿದ್ಧಿ / ಕರಣ: ಬಾಲವ
ಸೂರ್ಯೋದಯ : ಬೆ.06.02
ಸೂರ್ಯಾಸ್ತ : 06.34
ರಾಹುಕಾಲ : 12.00-1.30
ಯಮಗಂಡ ಕಾಲ : 7.30-9.00
ಗುಳಿಕ ಕಾಲ :10.30-12.00

ರಾಶಿಭವಿಷ್ಯ :
ಮೇಷ: ಮಕ್ಕಳಿಂದ ಅನುಕೂಲವಾಗಲಿದೆ. ಗೌರವ- ಸನ್ಮಾನ ಸಮಾರಂಭಗಳಲ್ಲಿ ಪಾಲ್ಗೊಳ್ಳುವಿರಿ.
ವೃಷಭ: ಅಂದುಕೊಂಡ ಕೆಲಸಗಳು ಈಡೇರಲಿವೆ. ಬಂಧುಗಳಿಂದ ಸಹಾಯ ಸಿಗಲಿದೆ.
ಮಿಥುನ: ನಿಮ್ಮ ಮೇಲೆ ಬಾಕಿ ಇರುವ ಕೆಲಸಗಳ ಹೊರೆ ಹೆಚ್ಚಾಗಬಹುದು.

ಕಟಕ: ಪೊಷಕರು ಮಕ್ಕಳ ವಿಚಾರದಲ್ಲಿ ಹೆಚ್ಚು ಜಾಗ್ರತೆ ವಹಿಸುವುದು ಸೂಕ್ತ.
ಸಿಂಹ: ವಿವಾಹಿತರು ಸಂಗಾತಿಗೆ ನಿಷ್ಠರಾಗಿರಿ. ಆದಷ್ಟು ಶ್ರಮವಹಿಸಿ ಕೆಲಸ ಮಾಡಬೇಕಾಗುತ್ತದೆ.
ಕನ್ಯಾ: ನಿರುದ್ಯೋಗಿಗಳಿಗೆ ಉದ್ಯೋಗ ಸಿಗಲಿದೆ.

ತುಲಾ: ವೈದ್ಯಕೀಯ ವೆಚ್ಚಗಳು ಹೆಚ್ಚಾಗುವುದರಿಂದ ಸಾಲ ಮಾಡಬೇಕಾದ ಸಂದರ್ಭಗಳು ಬರಬಹುದು.
ವೃಶ್ಚಿಕ: ಮಕ್ಕಳ ಮೂಲಕ ಹಣ ಬರಲಿದೆ. ತೀರ್ಥಯಾತ್ರೆ, ಪ್ರವಾಸ ತೆರಳುವ ಯೋಗಗಳಿವೆ.
ಧನುಸ್ಸು: ವಿದ್ಯಾರ್ಥಿಗಳು ಶಿಕ್ಷಣ ಕ್ಷೇತ್ರದಲ್ಲಿ ಉತ್ತಮ ಸಾಧನೆ ಮಾಡುವರು. ಇಡೀ ದಿನ ಶುಭವಾಗಿರಲಿದೆ.

ಮಕರ: ನಿಮ್ಮ ಮಾತುಗಳಿಂದ ಕುಟುಂಬದವರು ಮತ್ತು ಹಿತೈಷಿಗಳಿಗೆ ಸಂತೋಷವವಾಗಲಿದೆ.
ಕುಂಭ: ಶಕ್ತಿ ಮತ್ತು ಉತ್ಸಾಹ ತರುವ ಆನಂದಮಯ ಪ್ರವಾಸಕ್ಕೆ ಹೋಗುವಿರಿ.
ಮೀನ: ಮನೆಯಲ್ಲಿ ಜಗಳಗಳು ಉಂಟಾಗ ಬಹುದು. ಆರ್ಥಿಕ ಪರಿಸ್ಥಿತಿ ಹದಗೆಡಬಹುದು.

RELATED ARTICLES

Latest News