ನಿತ್ಯ ನೀತಿ : ಯಾವ ಸಮಾಜ ಹೆಣ್ಣನ್ನು ಗೌರವಿಸುವುದಿಲ್ಲವೋ, ಅದು ಬೇಗ ನಾಶವಾಗುತ್ತದೆ.
ಪಂಚಾಂಗ : ಬುಧವಾರ , 25-06-2025
ವಿಶ್ವಾವಸುನಾಮ ಸಂವತ್ಸರ / ದಕ್ಷಿಣಾಯನ / ಸೌರ ವರ್ಷ ಋತು / ಜ್ಯೇಷ್ಠ ಮಾಸ / ಕೃಷ್ಣ ಪಕ್ಷ / ತಿಥಿ: ಅಮಾವಾಸ್ಯೆ / ನಕ್ಷತ್ರ: ಮೃಗಶಿರಾ / ಯೋಗ: ಗಂಡ / ಕರಣ: ಕಿಂಸ್ತುಘ್ನ
ಸೂರ್ಯೋದಯ – ಬೆ.05.56
ಸೂರ್ಯಾಸ್ತ – 06.49
ರಾಹುಕಾಲ – 12.00-1.30
ಯಮಗಂಡ ಕಾಲ – 7.30-9.00
ಗುಳಿಕ ಕಾಲ – 10.30-12.00
ರಾಶಿಭವಿಷ್ಯ :
ಮೇಷ: ಉದ್ಯೋಗದಲ್ಲಿ ಹೆಚ್ಚು ಒತ್ತಡ. ಆರ್ಥಿಕ ಪರಿಸ್ಥಿತಿಯಲ್ಲಿ ಸಂಕಷ್ಟ ಎದುರಾಗಲಿದೆ.
ವೃಷಭ: ವೃತ್ತಿಯಲ್ಲಿ ನಿಮ್ಮ ಅನುಭವ ಹಾಗೂ ಪರಿಶ್ರಮಕ್ಕೆ ಸೂಕ್ತ ಸ್ಥಾನಮಾನ ಸಿಗಲಿದೆ.
ಮಿಥುನ: ಸಹೋದ್ಯೋಗಿಗಳಿಂದ ತೊಂದರೆ. ಆಕಸ್ಮಿಕವಾಗಿ ಆರ್ಥಿಕ ಸಂಕಷ್ಟಕ್ಕೆ ಸಿಲುಕುವಿರಿ.
ಕಟಕ: ಹಣ ಹೇಗೆ ವಿನಿಯೋಗವಾಗಬೇಕು ಎನ್ನುವುದರ ಬಗ್ಗೆ ಸ್ಪಷ್ಟತೆ ಬಹಳ ಮುಖ್ಯ.
ಸಿಂಹ: ಸಂಗಾತಿಯೊಂದಿಗೆ ಹೆಚ್ಚು ಸಮಯ ಕಳೆಯಲು ಬಯಸುವಿರಿ.
ಕನ್ಯಾ: ಆದಾಯಕ್ಕಿಂತ ಖರ್ಚು ಹೆಚ್ಚು. ಹಣಕಾಸು ತೊಂದರೆ ನಿವಾರಣೆಯಾಗಲಿದೆ.
ತುಲಾ: ಮಕ್ಕಳ ಆರೋಗ್ಯದಲ್ಲಿ ಚೇತರಿಕೆ. ನಿವೇಶನ ಖರೀದಿಸುವಿರಿ.
ವೃಶ್ಚಿಕ: ಇಲ್ಲಸಲ್ಲದ ಅಪವಾದಗಳು ನಿಮ್ಮ ಮೇಲೆ ಬರಬಹುದು. ಬಹಳ ಎಚ್ಚರಿಕೆಯಿಂದಿರಿ.
ಧನುಸ್ಸು: ಹೊಸ ವಾಹನ ಖರೀದಿಸುವ ಆಲೋಚನೆಯನ್ನು ಮುಂದೂಡುವುದು ಒಳಿತು.
ಮಕರ: ಸಹಕಾರ ಮನೋಭಾವದಿಂದ ನೆಮ್ಮದಿ ಸಿಗಲಿದೆ. ಆರೋಗ್ಯದ ಬಗ್ಗೆ ಗಮನ ಹರಿಸಿ.
ಕುಂಭ: ಹಣಕಾಸು ಸಮಸ್ಯೆಯಿದ್ದರೂ ಹೇಗಾದರೂ ಹಣ ಹೊಂದಾಣಿಕೆಯಾಗುತ್ತದೆ.
ಮೀನ: ಸಹೋದ್ಯೋಗಿಗಳಿಂದ ಅನುಕೂಲ ವಾಗಲಿದೆ. ವಾಹನ ಚಾಲನೆಯಲ್ಲಿ ಎಚ್ಚರ ವಹಿಸಿ.
- ರಾಜ್ಯದ ಅಧಿಕಾರಕ್ಕಾಗಿ ಕಾನೂನು ಹೋರಾಟ ಅನಿವಾರ್ಯ; ಸ್ಟಾಲಿನ್
- ಟಾರ್ಪಾಲ್ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ
- ಸ್ವಾತಂತ್ರ್ಯೋತ್ಸವ ಭಾಷಣದಲ್ಲಿ ಆರ್ಎಸ್ಎಸ್ ಸಮಾಜ ಸೇವೆಯನ್ನು ಮುಕ್ತ ಕಂಠದಿಂದ ಶ್ಲಾಘಿಸಿದ ಮೋದಿ
- ಠಾತ್ ಹೃದಯಾಘಾತ ತಪ್ಪಿಸಲು ಜಿಲ್ಲೆ ಹಾಗೂ ತಾಲ್ಲೂಕು ಆಸ್ಪತ್ರೆಗಳಲ್ಲೂ ಹೃದಯ ಜ್ಯೋತಿ ಯೋಜನೆ ಅನುಷ್ಠಾನ
- ಸಂವಿಧಾನ ರಕ್ಷಿಸಲು ಪಕ್ಷದ ಕಾರ್ಯಕರ್ತರಿಗೆ 5 ಶಪಥ ಬೋಧಿಸಿದ ಡಿ.ಕೆ.ಶಿವಕುಮಾರ್