Thursday, July 4, 2024
Homeಜ್ಯೋತಿಷ್ಯ-ರಾಶಿಭವಿಷ್ಯಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ(27-05-2024)

ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ(27-05-2024)

ನಿತ್ಯ ನೀತಿ : ಒಳ್ಳೆಯ ಜನರು ನಿಮಗೆ ಸಂತೋಷ ಕೊಟ್ಟರೆ, ಕೆಟ್ಟ ಜನರು ನಿಮಗೆ ಅನುಭವ ಕೊಡುತ್ತಾರೆ ಎಂಬುದನ್ನು ಯಾವಾಗಲೂ ನೆನಪಿಡಿ.

ಪಂಚಾಂಗ : ಸೋಮವಾರ, 27-05-2024
ಕ್ರೋಧಿನಾಮ ಸಂವತ್ಸರ / ಉತ್ತರಾಯಣ / ವಸಂತ ಋತು / ವೈಶಾಖ ಮಾಸ / ಕೃಷ್ಣ ಪಕ್ಷ / ತಿಥಿ: ಚತುರ್ಥಿ / ನಕ್ಷತ್ರ: ಪೂರ್ವಾಷಾಢ / ಯೋಗ: ಶುಭ / ಕರಣ: ಕೌಲವ /

ಸೂರ್ಯೋದಯ – ಬೆ.05.53
ಸೂರ್ಯಾಸ್ತ – 06.41
ರಾಹುಕಾಲ – 7.30-9.00
ಯಮಗಂಡ ಕಾಲ – 10.30-12.00
ಗುಳಿಕ ಕಾಲ – 1.30-3.00

ರಾಶಿಭವಿಷ್ಯ :
ಮೇಷ
: ಕೆಲಸದ ಒತ್ತಡ ಸ್ವಲ್ಪ ಕಡಿಮೆಯಾಗಿ ಉದ್ಯೋಗ ಸ್ಥಳದಲ್ಲಿ ನೆಮ್ಮದಿಯ ವಾತಾವರಣ ಇರಲಿದೆ.
ವೃಷಭ: ವ್ಯವಹಾರದಲ್ಲಿ ಮೋಸವಾಗಬಹುದು. ಶತ್ರುಗಳ ವಿರುದ್ಧ ಜಯ ಸಾಧಿಸುವಿರಿ.
ಮಿಥುನ: ದೊಡ್ಡ ತೊಂದರೆಯಲ್ಲಿ ಸಿಲುಕಿಸಿಕೊಳ್ಳುವ ಸಾಧ್ಯತೆಗಳಿವೆ. ಬಹಳ ಎಚ್ಚರಿಕೆಯಿಂದಿರಿ.

ಕಟಕ: ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ಮಾಡಿಕೊಳ್ಳುವ ವಿದ್ಯಾರ್ಥಿಗಳಿಗೆ ಉತ್ತಮ ದಿನ.
ಸಿಂಹ: ಕೋಪ ಅನರ್ಥಕ್ಕೆ ಕಾರಣವಾಗುತ್ತದೆ. ಉದ್ಯೋಗ ಸ್ಥಳದಲ್ಲಿ ತೊಂದರೆಯಾಗುವುದು.
ಕನ್ಯಾ: ಸಾಲ ಮರು ಪಾವತಿ ಮಾಡುವಲ್ಲಿ ಯಶಸ್ವಿ ಯಾಗುವಿರಿ.

ತುಲಾ: ವೃತ್ತಿಜೀವನದಲ್ಲಿ ಕೆಲವು ಸಂದಿಗ್ಧ ಪರಿಸ್ಥಿತಿಗಳು ಎದುರಾಗಲಿವೆ.
ವೃಶ್ಚಿಕ: ವಿದ್ಯಾರ್ಥಿಗಳು ಸಾಧ್ಯವಾದರೆ ಸ್ನೇಹಿತರೊಂದಿಗೆ ಅಧ್ಯಯನ ಮಾಡಿ. ದೂರ ಪ್ರಯಾಣ ಬೇಡ.
ಧನುಸ್ಸು: ಮನೆಯ ಸದಸ್ಯರಿಂದ ದೂರ ಹೋಗುವ ನಿರ್ಧಾರ ತೆಗೆದುಕೊಳ್ಳುವ ಸಾಧ್ಯತೆಗಳಿವೆ.

ಮಕರ: ಲಾಭ ಗಳಿಸಲು ಮತ್ತು ಆರ್ಥಿಕ ಸ್ಥಿತಿ ಬಲಪಡಿಸಲು ಅನೇಕ ಅವಕಾಶಗಳು ಸಿಗಲಿವೆ.
ಕುಂಭ: ಕಠಿಣ ಪರಿಶ್ರಮ ಪಡುವುದರಿಂದ ಮಾತ್ರ ನಿಮಗೆ ಯಶಸ್ಸು ದೊರೆಯಲಿದೆ.
ಮೀನ: ಕುಟುಂಬಕ್ಕೆ ಸಂಬಂಧಿಸಿದ ಯಾವುದೇ ನಿರ್ಧಾರ ಕೈಗೊಳ್ಳುವ ಮುನ್ನ ಹಲವು ಬಾರಿ ಯೋಚಿಸಿ.

RELATED ARTICLES

Latest News