Saturday, April 27, 2024
Homeಜ್ಯೋತಿಷ್ಯ-ರಾಶಿಭವಿಷ್ಯಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ(27-03-2024)

ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ(27-03-2024)

ನಿತ್ಯ ನೀತಿ : ಒಂದು ತಪ್ಪನ್ನು ಕ್ಷಮಿಸುವುದೆಂದರೆ ಇನ್ನಷ್ಟು ತಪ್ಪುಗಳನ್ನು ಮಾಡಲು ಪ್ರೋತ್ಸಾಹಿಸಿದಂತೆ.

ಪಂಚಾಂಗ : ಬುಧವಾರ, 27-03-2024
ಶೋಭಕೃತ್ನಾಮ ಸಂವತ್ಸರ / ಉತ್ತರಾಯಣ / ಶಿಶಿರ ಋತು / ಫಾಲ್ಗುಣ ಮಾಸ / ಕೃಷ್ಣ ಪಕ್ಷ / ತಿಥಿ: ದ್ವಿತೀಯಾ / ನಕ್ಷತ್ರ: ಚಿತ್ತಾ / ಯೋಗ: ವ್ಯಾಘಾತ / ಕರಣ: ವಣಿಜ್

ಸೂರ್ಯೋದಯ : ಬೆ.06.19
ಸೂರ್ಯಾಸ್ತ : 06.31
ರಾಹುಕಾಲ : 12.00-1.30
ಯಮಗಂಡ ಕಾಲ : 7.30-9.00
ಗುಳಿಕ ಕಾಲ : 10.30-12.00

ರಾಶಿಭವಿಷ್ಯ :
ಮೇಷ
: ಹಣ ಹೇಗೆ ವಿನಿಯೋಗ ಆಗಬೇಕು ಎನ್ನುವುದರ ಬಗ್ಗೆ ಸ್ಪಷ್ಟತೆ ಬಹಳ ಮುಖ್ಯ.
ವೃಷಭ: ಮನೆ ನಿರ್ಮಾಣ ಕೆಲಸದಲ್ಲಿರುವ ಅಡೆತಡೆಗಳು ಸಹೋದರರು ನೀಡುವ ಸಲಹೆಗಳಿಂದ ದೂರವಾಗಲಿವೆ.
ಮಿಥುನ: ಗಣ್ಯ ವ್ಯಕ್ತಿಗಳನ್ನು ಸಂಪರ್ಕಿಸುವಿರಿ. ತಾಯಿಯ ಆರೋಗ್ಯದಲ್ಲಿ ಚೇತರಿಕೆ.

ಕಟಕ: ಉದ್ಯೋಗದ ಕಡೆಗೆ ಹೆಚ್ಚಿನ ಗಮನಹರಿಸಿ. ಖರ್ಚು ಹೆಚ್ಚಾಗಲಿದೆ.
ಸಿಂಹ: ನಿಮ್ಮ ಸ್ವಭಾವದಲ್ಲಿ ಮಹತ್ತರವಾದ ಬದಲಾವಣೆಗಳು ಆಗಲಿವೆ.
ಕನ್ಯಾ: ಸಹೋದರರು ಆರ್ಥಿಕ ಸಹಾಯ ಮಾಡುವರು. ಇದರಿಂದ ಆರ್ಥಿಕ ಪರಿಸ್ಥಿತಿ ಸ್ವಲ್ಪ ಮಟ್ಟಿಗೆ ಸುಧಾರಿಸಲಿದೆ.

ತುಲಾ: ಬೇರೆಯವರು ನಿಮ್ಮೊಂದಿಗೆ ಗೆಳೆತನ ಬೆಳೆಸಲು ಬಯಸುತ್ತಾರೆ. ಜಾಗ್ರತೆ ವಹಿಸಿ.
ವೃಶ್ಚಿಕ: ಷೇರು ಮಾರುಕಟ್ಟೆಯಲ್ಲಿ ಹಣ ಹೂಡಿಕೆ ಮಾಡುವವರು ಎಚ್ಚರಿಕೆಯಿಂದಿರಿ.
ಧನುಸ್ಸು: ಹಿರಿಯರ ಸಕಾಲಿಕ ನೆರವಿನಿಂದ ಎದುರಾಗ ಬಹುದಾದ ವಿಪತ್ತುಗಳು ದೂರವಾಗಲಿವೆ.

ಮಕರ: ಕೆಲಸ ಸ್ಥಳದಲ್ಲಿ ಕಿರಿಕಿರಿ ಉಂಟಾಗಿ ಕೆಲಸ ಬಿಡುವ ಮನಸ್ಸು ಕೂಡ ಮಾಡಬಹುದು.
ಕುಂಭ: ಧಾರ್ಮಿಕ ಕಾರ್ಯಗಳತ್ತ ಗಮನ ಹರಿಸುವಿರಿ. ಕೀರ್ತಿ ನಿಮ್ಮನ್ನು ಅರಸಿ ಬರಲಿದೆ.
ಮೀನ: ಉದ್ಯೋಗಸ್ಥ ಮಹಿಳೆಯರಿಗೆ ಶುಭ ದಿನ. ಕೃಷಿಕರಿಗೆ ಶುಭಫಲ ಸಿಗಲಿದೆ. ಉದ್ಯೋಗದಲ್ಲಿ ಲಾಭ.

RELATED ARTICLES

Latest News