ನಿತ್ಯ ನೀತಿ : ಒಳ್ಳೆಯವರಿಂದ ಒಳ್ಳೆಯದೇ ಆಗುತ್ತದೆ. ಆದರೆ, ಒಳ್ಳೆಯವರಿಗೆ ಒಳ್ಳೆಯದೇ ಆಗುತ್ತದೆ ಅನ್ನೋಕೆ ಸಾಧ್ಯವಿಲ್ಲ.
ಪಂಚಾಂಗ : ಭಾನುವಾರ, 27-07-2025
ವಿಶ್ವಾವಸುನಾಮ ಸಂವತ್ಸರ, ದಕ್ಷಿಣಾಯನ, ಸೌರ ವರ್ಷ ಋತು, ಶ್ರಾವಣ ಮಾಸ, ಶುಕ್ಲ ಪಕ್ಷ, ತಿಥಿ: ತೃತೀಯಾ, ನಕ್ಷತ್ರ: ಮಘಾ, ಯೋಗ: ವರೀಯಾನ್, ಕರಣ: ತೈತಿಲ
ಸೂರ್ಯೋದಯ: ಬೆ.06.04
ಸೂರ್ಯಾಸ್ತ: 06.48
ರಾಹುಕಾಲ: 4.30-6.00
ಯಮಗಂಡ ಕಾಲ: 12.00-1.30
ಗುಳಿಕ ಕಾಲ: 3.00-4.30
ಇಂದಿನ ರಾಶಿ ಭವಿಷ್ಯ
ಮೇಷ: ನೀವು ಮಾಡುವ ಒಳ್ಳೆಯ ಕಾರ್ಯಗಳು ನಿಮ್ಮ ಕುಟುಂಬದ ಹಿರಿಮೆಯನ್ನು ಹೆಚ್ಚಿಸುತ್ತದೆ.
ವೃಷಭ: ವ್ಯವಹಾರದಲ್ಲಿ ಸ್ವಂತ ನಿರ್ಧಾರ ತೆಗೆದುಕೊಳ್ಳುವ ಸಾಮರ್ಥ್ಯವನ್ನು ಹೊಂದುತ್ತೀರಿ.
ಮಿಥುನ: ಶತ್ರುಗಳ ಬಲೆಗೆ ಬೀಳದಂತೆ ಎಚ್ಚರ ವಹಿಸಬೇಕು. ದೂರ ಸಂಚಾರ ಮಾಡದಿರಿ.
ಕಟಕ: ವಿದ್ಯಾರ್ಥಿಗಳು ಏಕಾಗ್ರತೆ ಕಾಯ್ದುಕೊಳ್ಳಲು ಹೆಚ್ಚು ಶ್ರಮ ವಹಿಸಬೇಕಾಗುತ್ತದೆ.
ಸಿಂಹ: ಖರ್ಚಿನ ಮೇಲೆ ನಿಯಂತ್ರಣವಿರಲಿ.
ಕನ್ಯಾ: ಪೋಷಕರಿಂದ ಆಶೀರ್ವಾದ ಪಡೆದ ನಂತರ ಮನೆಯಿಂದ ಹೊರಬನ್ನಿ.
ತುಲಾ: ಜೀವನ ಸಂಗಾತಿ ಯಿಂದ ಆರ್ಥಿಕ ಲಾಭ ಮತ್ತು ಗೌರವ ಪಡೆಯುವಿರಿ.
ವೃಶ್ಚಿಕ: ಮಸಾಲೆಯುಕ್ತ ಆಹಾರವನ್ನು ಹೆಚ್ಚಾಗಿ ಸೇವಿಸದಿರುವುದು ಒಳಿತು.
ಧನುಸ್ಸು: ಹಿರಿಯರ ಸಕಾಲಿಕ ನೆರವಿನಿಂದ ಎದುರಾಗಬಹುದಾದ ವಿಪತ್ತುಗಳು ದೂರವಾಗಲಿವೆ.
ಮಕರ: ನಿಮ್ಮ ಬೇಜವಾಬ್ದಾರಿತನದಿಂದಾಗಿ ಸಂಕಷ್ಟಕ್ಕೆ ಸಿಲುಕುವಿರಿ. ವ್ಯಾಸಂಗದಲ್ಲಿ ತೊಂದರೆ.
ಕುಂಭ: ಕಲಾವಿದರುಗಳಿಗೆ, ಪತ್ರಕರ್ತರಿಗೆ ಪ್ರಶಂಸೆಯ ಮಾತುಗಳು ಕೇಳಿಬರುವುವು.
ಮೀನ: ಹಣಕಾಸು ವ್ಯವಹಾರದಲ್ಲಿ ನಷ್ಟ ತಪ್ಪಿಸುವ ಉದ್ದೇಶದಿಂದ ಜಾಗರೂಕತೆಯಿಂದ ಇರಿ.
- ಬೆಂಗಳೂರು : ಟೆಕ್ಕಿ ಮನೆಯಲ್ಲಿ 30 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಕಳವು
- ಕುಡುಕ ಗಂಡನ ಕಾಟ ಮತ್ತು ಬಡತನಕ್ಕೆ ಬೇಸತ್ತು ಮೂವರು ಹೆಣ್ಣು ಮಕ್ಕಳಿಗೆ ವಿಷವಿಟ್ಟು ಕೊಂದ ತಾಯಿ
- SHOCKING : ಮೈಸೂರಿನಲ್ಲಿ ಡ್ರಗ್ಸ್ ಫ್ಯಾಕ್ಟರಿ ಪತ್ತೆ, ಕೋಟ್ಯಂತರ ರೂ. ಬೆಲೆಯ ಮಾದಕ ವಸ್ತು ವಶ
- ಅಮೆರಿಕದಲ್ಲಿ 11 ಮಂದಿಗೆ ಇರಿದ ಯುವಕ, 6 ಜನರ ಸ್ಥಿತಿ ಗಂಭೀರ
- ರಾಜ್ಯದಲ್ಲಿ ಗೊಬ್ಬರ ಅಭಾವ : ನಾಳೆಯಿಂದ ಬಿಜೆಪಿ ಹೋರಾಟ