Sunday, September 8, 2024
Homeಜ್ಯೋತಿಷ್ಯ-ರಾಶಿಭವಿಷ್ಯಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ(28-05-2024)

ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ(28-05-2024)

ನಿತ್ಯ ನೀತಿ : ನಂಬಿಕೆಗಿಂತ ಸಂದೇಹವೇ ಹೆಚ್ಚಾದರೆ ಯಾವ ಸಂಬಂಧವೂ ಉಳಿಯಲ್ಲ. ಆದರೆ ಸಂದೇಹದ ನಡುವೆ ನಂಬಿಕೆ ಗಟ್ಟಿಯಾದರೆ ಯಾವ ಮನಸ್ಸೂ ಮುರಿಯಲ್ಲ.
ಪಂಚಾಂಗ : ಮಂಗಳವಾರ , 28-05-2024
ಕ್ರೋಧಿನಾಮ ಸಂವತ್ಸರ / ಉತ್ತರಾಯಣ / ವಸಂತ ಋತು / ವೈಶಾಖ ಮಾಸ / ಕೃಷ್ಣ ಪಕ್ಷ
ತಿಥಿ: ಪಂಚಮಿ / ನಕ್ಷತ್ರ: ಉತ್ತರಾಷಾಢ / ಯೋಗ: ಬ್ರಹ್ಮ / ಕರಣ: ಗರಜೆ

ಸೂರ್ಯೋದಯ : ಬೆ.05.52
ಸೂರ್ಯಾಸ್ತ : 06.42
ರಾಹುಕಾಲ : 3.00-4.30
ಯಮಗಂಡ ಕಾಲ : 9.00-10.30
ಗುಳಿಕ ಕಾಲ : 12.00-1.30

ರಾಶಿಭವಿಷ್ಯ :
ಮೇಷ
: ಮನೆ ನಿರ್ಮಾಣ ಕೆಲಸದಲ್ಲಿರುವ ಅಡೆತಡೆಗಳು ಸಹೋದರರು ನೀಡುವ ಸಲಹೆಗಳಿಂದ ದೂರವಾಗಲಿವೆ.
ವೃಷಭ: ಕಷ್ಟದ ಕೆಲಸವನ್ನು ಇಷ್ಟದಿಂದ ಮಾಡಿ. ಮನಸ್ಸು ಸಮಾಧಾನ ದಿಂದಿರುತ್ತದೆ.
ಮಿಥುನ: ಸಮಾಜದಲ್ಲಿ ಕೀರ್ತಿ, ಗೌರವ ದೊರೆಯ ಲಿದೆ. ಮಾನಸಿಕ ಒತ್ತಡ ನಿಯಂತ್ರಿಸಲು ಧ್ಯಾನ ಮಾಡಿ.

ಕಟಕ: ಕಾಲಕಾಲಕ್ಕೆ ವೈದ್ಯಕೀಯ ತಪಾಸಣೆ ಮಾಡಿಸಿಕೊಳ್ಳಿ
ಸಿಂಹ: ಮದುವೆಯ ಸಲುವಾಗಿ ವಸಾ್ತ್ರಭರಣ ಖರೀದಿ ಮಾಡುವಿರಿ.
ಕನ್ಯಾ: ಹತ್ತಿರದ ಸ್ನೇಹಿತ ರಿಂದಲೇ ನಿಮ್ಮ ಬಗ್ಗೆ ಕೆಟ್ಟ ಮಾತುಗಳು ಕೇಳಿಬರಲಿವೆ.

ತುಲಾ: ವ್ಯವಹಾರದಲ್ಲಿ ಮೂರನೆ ವ್ಯಕ್ತಿಯೊಬ್ಬರ ಆಗಮನವಾಗುವುದರಿಂದ ಅಪಾಯ ಹೆಚ್ಚಾಗಲಿದೆ.
ವೃಶ್ಚಿಕ: ದಾಂಪತ್ಯದಲ್ಲಿ ಅನ್ಯೋನ್ಯತೆ ಇರಲಿದೆ. ಕೆಟ್ಟ ಆಲೋಚನೆ ಬೇಡ.
ಧನುಸ್ಸು: ಯಾರದ್ದೋ ಮಾತು ಕೇಳಿ ನಿಮ್ಮ ಅಮೂಲ್ಯ ಸಮಯ ಹಾಳುಮಾಡಿಕೊಳ್ಳದಿರಿ.

ಮಕರ: ವ್ಯವಹಾರದಲ್ಲಿ ಸ್ವಂತ ನಿರ್ಧಾರ ತೆಗೆದು ಕೊಳ್ಳುವ ಸಾಮರ್ಥ್ಯವನ್ನು ಹೊಂದಿರುತ್ತೀರಿ.
ಕುಂಭ: ಜವಾಬ್ದಾರಿ ನಿಭಾಯಿಸುವಲ್ಲಿ ಯಶಸ್ವಿಯಾಗುವಿರಿ. ಚಿಂತೆಗೆ ಅವಕಾಶವಿಲ್ಲ.
ಮೀನ: ವ್ಯಾಪಾರ-ವ್ಯವಹಾರಗಳಲ್ಲಿ ಅಲ್ಪ ಪ್ರಗತಿ ಸಾಧಿಸುವಿರಿ. ಅಧಿ ಕ ಖರ್ಚು ಮಾಡುವಿರಿ.

RELATED ARTICLES

Latest News