Sunday, September 8, 2024
Homeಜ್ಯೋತಿಷ್ಯ-ರಾಶಿಭವಿಷ್ಯಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (29-05-2024)

ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (29-05-2024)

ನಿತ್ಯ ನೀತಿ : ಹೇಗೆ ಒಬ್ಬ ಕುಡುಕನಿಗೆ ಸರಿ, ಕೆಟ್ಟದ್ದು ಗೊತ್ತಾಗುವುದಿಲ್ಲವೋ ಅದೇ ರೀತಿ ಒಬ್ಬ ಸ್ವಾರ್ಥ ಆಸೆಗಳ ಸಾಧಕನಿಗೆ ಸರಿ, ಕೆಟ್ಟದ್ದು ಸ್ವಲ್ಪವೂ ಗೊತ್ತಾಗುವುದಿಲ್ಲ.

ಪಂಚಾಂಗ : 29-05-2024, ಬುಧವಾರ
ಕ್ರೋಧಿನಾಮ ಸಂವತ್ಸರ / ಉತ್ತರಾಯಣ / ವಸಂತ ಋತು / ವೈಶಾಖ ಮಾಸ / ಕೃಷ್ಣ ಪಕ್ಷ / ತಿಥಿ: ಷಷ್ಠಿ / ನಕ್ಷತ್ರ: ಶ್ರವಣ / ಯೋಗ: ಐಂದ್ರ / ಕರಣ: ವಿಷ್ಟಿ

ಸೂರ್ಯೋದಯ : ಬೆ.05.52
ಸೂರ್ಯಾಸ್ತ : 06.42
ರಾಹುಕಾಲ : 12.00-1.30
ಯಮಗಂಡ ಕಾಲ : 7.30-9.00
ಗುಳಿಕ ಕಾಲ : 10.30-12.00

ರಾಶಿಭವಿಷ್ಯ :
ಮೇಷ
: ಕಾಲೇಜು ಉಪನ್ಯಾಸಕರಿಗೆ ಅಧಿಕ ಒತ್ತಡ. ಸ್ವಯಂಕೃತ ಅಪರಾಧದಿಂದ ನಷ್ಟ ಸಂಭವಿಸಲಿದೆ.
ವೃಷಭ: ವಿದೇಶ ಪ್ರಯಾಣಕ್ಕೆ ಅನುಕೂಲ ಒದಗಿ ಬರಲಿದೆ. ಪಿತ್ರಾರ್ಜಿತ ಆಸ್ತಿ ಬರಬೇಕಿದ್ದಲ್ಲಿ ತಡವಾಗಲಿದೆ.
ಮಿಥುನ: ಹಳೆ ಮಿತ್ರರ ಆಗಮನವಾಗಲಿದೆ. ಉದ್ಯಮಗಳ ಬೆಳವಳಿಗೆಗೆ ಸಿದ್ಧತೆ ನಡೆಯಲಿದೆ.

ಕಟಕ: ವೈಯಕ್ತಿಕ ಮತ್ತು ವೃತ್ತಿಪರ ಜೀವನದಲ್ಲಿ ಸಮಸ್ಯೆಗಳನ್ನು ಎದುರಿಸಬೇಕಾಗಬಹುದು.
ಸಿಂಹ: ಪರಿಶ್ರಮಕ್ಕೆ ತಕ್ಕ ಪ್ರತಿಫಲ ಸಿಗಲಿದೆ.
ಕನ್ಯಾ: ಕೌಟುಂಬಿಕ ಸಮಸ್ಯೆ ಪರಿಹರಿಸಿಕೊಳ್ಳಲು ಉತ್ತಮ ಸಮಯವಾಗಿದೆ.

ತುಲಾ: ಅಸಾಧ್ಯವಾದ ಅನಗತ್ಯ ಚಿಂತನೆಯಲ್ಲಿ ನಿಮ್ಮ ಶಕ್ತಿ ವ್ಯರ್ಥ ಮಾಡುವ ಬದಲು ಅದನ್ನು ಸರಿಯಾದ ದಿಕ್ಕಿನಲ್ಲಿ ಬಳಸಿ
ವೃಶ್ಚಿಕ: ವಿವಾಹಿತ ದಂಪತಿ ಸ್ಮರಣೀಯ ಕ್ಷಣಗಳನ್ನು ಕಳೆಯಲು ಸಣ್ಣ ಪ್ರವಾಸಕ್ಕೆ ಹೋಗಬಹುದು.
ಧನುಸ್ಸು: ರಕ್ತದೊತ್ತಡದ ಸಮಸ್ಯೆ ಕಾಣಿಸಿ ಕೊಳ್ಳಬಹುದು ಹಾಗೂ ಉಲ್ಬಣಿಸಬಹುದು.

ಮಕರ: ವೈದ್ಯಕೀಯ ವೃತ್ತಿಯಲ್ಲಿ ಕೀರ್ತಿ ಗಳಿಸುವಿರಿ.
ಕುಂಭ: ಕೆಲಸದ ಸ್ಥಳದಲ್ಲಿ ಅನುಕೂಲಕರ ಸನ್ನಿವೇಶಗಳನ್ನು ಸೃಷ್ಟಿಸಲು ಸಾಧ್ಯವಾಗುತ್ತದೆ.
ಮೀನ: ಮಕ್ಕಳ ನಡವಳಿಕೆಯಿಂದ ಬೇಸರ.

RELATED ARTICLES

Latest News