Friday, November 22, 2024
Homeಜ್ಯೋತಿಷ್ಯ-ರಾಶಿಭವಿಷ್ಯಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (29-08-2024)

ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (29-08-2024)

Horoscope

ನಿತ್ಯ ನೀತಿ : ನಿನ್ನ ನೀ ಅರಿಯದೆ ಅನ್ಯರನು ದೂರದಿರು. ನಿನ್ನ ನಿಯತ್ತು ಅನ್ಯರಿಗೂ ವರವಾಗುವುದು.

ಪಂಚಾಂಗ : ಗುರುವಾರ , 29-08-2024
ಕ್ರೋಧಿನಾಮ ಸಂವತ್ಸರ / ದಕ್ಷಿಣಾಯಣ / ವರ್ಷ ಋತು / ಶ್ರಾವಣ ಮಾಸ / ಕೃಷ್ಣ ಪಕ್ಷ / ತಿಥಿ: ಏಕಾದಶಿ / ನಕ್ಷತ್ರ: ಆರಿದ್ರಾ / ಯೋಗ: ಸಿದ್ಧಿ / ಕರಣ: ಭವ

ಸೂರ್ಯೋದಯ – ಬೆ.06.09
ಸೂರ್ಯಾಸ್ತ – 06.32
ರಾಹುಕಾಲ – 1.30-3.00
ಯಮಗಂಡ ಕಾಲ – 6.00-7.30
ಗುಳಿಕ ಕಾಲ – 9.00-10.30

ರಾಶಿಭವಿಷ್ಯ :
ಮೇಷ: ಯಾವುದೇ ಅಪಾಯಕಾರಿ ಸವಾಲುಗಳನ್ನು ಮೈ ಮೇಲೆ ಎಳೆದುಕೊಳ್ಳಬೇಡಿ.
ವೃಷಭ: ಚಾಡಿ ಮಾತುಗಳನ್ನು ಕೇಳದಿರಿ. ಉದ್ಯೋಗದ ಕಡೆ ಗಮನ ನೀಡುವುದು ಒಳಿತು.
ಮಿಥುನ: ಕಾನೂನು ತೊಡಕು ಎದುರಿಸಬೇಕಾದ ಸಂದರ್ಭ ಬರಬಹುದು. ಸಾಲಕ್ಕೆ ಜಾಮೀನಾಗಿ ನಿಲ್ಲದಿರಿ.

ಕಟಕ: ನಿಮ್ಮ ಸ್ವಭಾವದಲ್ಲಿ ಬದಲಾವಣೆಯಾಗ ಬೇಕು. ತಾಳ್ಮೆ- ಸಂಯಮ ತಂದುಕೊಳ್ಳಬೇಕು.
ಸಿಂಹ: ಅತಿಯಾದ ಆತ್ಮವಿಶ್ವಾಸ ಹೊಂದುವುದು ಬೇಡ. ಸುಖದಲ್ಲಿ ಮೈ ಮರೆಯದಿರಿ.
ಕನ್ಯಾ: ವಿದ್ಯಾರ್ಥಿಗಳಿಗೆ ವಿದೇಶ ವ್ಯಾಸಂಗಕ್ಕೆ ಅವಕಾಶ ಗಳು ಒದಗಿ ಬರಲಿವೆ.

ತುಲಾ: ಆರೋಗ್ಯಸಮಸ್ಯೆ ಗಳು ಎದುರಾಗಬಹುದು. ಸೂಕ್ತ ಸಮಯಕ್ಕೆ ವೈದ್ಯರ ಸಲಹೆ ಪಡೆಯುವುದು ಒಳಿತು.
ವೃಶ್ಚಿಕ: ಸಂಗಾತಿಯಿಂದ ಸ್ವಲ್ಪ ಮಟ್ಟಿಗೆ ನಷ್ಟವಾಗುತ್ತದೆ. ಯಾವುದೇ ಕಾರಣಕ್ಕೂ ಕೆಲಸ ಬಿಡುವಂತಹ ನಿರ್ಧಾರ ಮಾಡದಿರಿ.
ಧನುಸ್ಸು:ಉದ್ಯೋಗದಲ್ಲಿ ನಿರೀಕ್ಷಿತ ರೀತಿಯಲ್ಲಿ ಪ್ರಗತಿ ಸಾಧಿಸಲು ಸಾಧ್ಯವಾಗುವುದಿಲ್ಲ.

ಮಕರ: ಶತ್ರುಗಳ ಕಾಟ ಇರುತ್ತದೆ. ಆದರೆ ಅವರು ನಿಮ್ಮನ್ನು ಏನೂ ಮಾಡಲು ಆಗುವುದಿಲ್ಲ.
ಕುಂಭ:ವೈದ್ಯಕೀಯ ವೆಚ್ಚಗಳು ವಿಪರೀತವಾಗಲಿವೆ. ನಿಮ್ಮ ಆರೋಗ್ಯದ ಕಡೆಗೆ ಹೆಚ್ಚು ಗಮನ ಹರಿಸಿ.
ಮೀನ: ಸೋದರ ಸಂಬಂಧಿ ಗಳು ಒಡವೆ ಮಾಡಿಸಿಕೊಡುವ ಸಾಧ್ಯತೆ ಇದೆ.

RELATED ARTICLES

Latest News