ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (31-07-2022)

Social Share

#ನಿತ್ಯ ನೀತಿ :
ಬದುಕಿನಲ್ಲಿ ಕೆಲವು ಸಾರಿ ಪರಿಸ್ಥಿತಿಯನ್ನು ಬದಲಾಯಿಸುವುದಕ್ಕಿಂತ ಮನಸ್ಥಿತಿಯನ್ನು ಬದಲಾಯಿಸುವುದು ಉತ್ತಮ.

# ಪಂಚಾಂಗ : ಭಾನುವಾರ , 31-07-2022

ಶುಭಕೃತ್ ನಾಮ ಸಂವತ್ಸರ / ದಕ್ಷಿಣಾಯನ / ವರ್ಷ ಋತು / ಶ್ರಾವಣ ಮಾಸ / ಶುಕ್ಲ ಪಕ್ಷ / ತಿಥಿ: ತೃತೀಯಾ / ನಕ್ಷತ್ರ: ಮಘಾ / ಮಳೆ ನಕ್ಷತ್ರ: ಪುಷ್ಯ

  • ಸೂರ್ಯೋದಯ – ಬೆ.06.05
  • ಸೂರ್ಯಾಸ್ತ – 06.47
  • ರಾಹುಕಾಲ – 4.30-6.00
  • ಯಮಗಂಡ ಕಾಲ – 12.00-1.30
  • ಗುಳಿಕ ಕಾಲ – 3.00-4.30

# ಇಂದಿನ ರಾಶಿಭವಿಷ್ಯ :

ಮೇಷ: ಮನೆ ನಿಮಾರಣ ಕೆಲಸದಲ್ಲಿ ಇರುವ ಅಡೆತಡೆಗಳು ಸಹೋದರರು ನೀಡುವ ಸಲಹೆಗಳಿಂದ ದೂರವಾಗಲಿವೆ.
ವೃಷಭ: ಹಣ ಹೇಗೆ ವಿನಿಯೋಗ ಆಗಬೇಕು ಎನ್ನುವುದರ ಬಗ್ಗೆ ಸ್ಪಷ್ಟತೆ ಬಹಳ ಮುಖ್ಯ.
ಮಿಥುನ: ಉದ್ಯೋಗದ ಕಡೆಗೆ ಹೆಚ್ಚಿನ ಗಮನ ಹರಿಸಿ. ನಿರೀಕ್ಷೆಗೂ ಮೀರಿ ಖರ್ಚು ಹೆಚ್ಚಾಗಲಿದೆ.

ಕಟಕ: ಹೊಸ ವ್ಯವಹಾರವನ್ನು ಪ್ರಾರಂಭಿಸಿದ್ದರೆ, ಪ್ರಚಾರ ಮಾಡುವ ಬಗ್ಗೆ ಹೆಚ್ಚು ಗಮನ ಹರಿಸಿ.
ಸಿಂಹ: ಸಹೋದರರು ಆರ್ಥಿಕ ಸಹಾಯ ಮಾಡುವರು. ಇದರಿಂದ ಆರ್ಥಿಕ ಪರಿಸ್ಥಿತಿ ಸ್ವಲ್ಪ ಮಟ್ಟಿಗೆ ಸುಧಾರಿಸಲಿದೆ.
ಕನ್ಯಾ: ನಿಮ್ಮ ಸ್ವಭಾವದಲ್ಲಿ ಮಹತ್ತರವಾದ ಬದಲಾವಣೆಗಳು ಆಗಲಿವೆ.

ತುಲಾ: ಬೇರೆಯವರು ನಿಮ್ಮೊಂದಿಗೆ ಗೆಳೆತನ ಬೆಳೆಸಲು ಬಯಸುತ್ತಾರೆ. ಜಾಗ್ರತೆ ವಹಿಸಿ. ಖರ್ಚು ಸ್ವಲ್ಪ ಹೆಚ್ಚಾಗಬಹುದು.
ವೃಶ್ಚಿಕ: ಷೇರು ಮಾರುಕಟ್ಟೆಯಲ್ಲಿ ಹಣ ಹೂಡಿಕೆ ಮಾಡುವವರು ಎಚ್ಚರಿಕೆಯಿಂದಿರಿ.
ಧನುಸ್ಸು: ಹಿರಿಯರ ಸಕಾಲಿಕ ನೆರವಿನಿಂದ ಎದುರಾಗ ಬಹುದಾದ ವಿಪತ್ತುಗಳು ದೂರವಾಗಲಿವೆ.

ಮಕರ: ತಂದೆಯವರ ಕಠಿಣ ನಡವಳಿಕೆ ನಿಮಗೆ ಸಿಟ್ಟು ಬರಿಸುತ್ತದೆ. ಶಾಂತವಾಗಿರುವುದು ಒಳಿತು.
ಕುಂಭ: ಕೆಲಸ ಸ್ಥಳದಲ್ಲಿ ಕಿರಿಕಿರಿ ಉಂಟಾಗಿ ಕೆಲಸ ಬಿಡುವ ಮನಸ್ಸು ಕೂಡ ಮಾಡಬಹುದು.
ಮೀನ: ಧಾರ್ಮಿಕ ಕಾರ್ಯಗಳತ್ತ ಗಮನ ಹರಿಸುವಿರಿ. ಕೀರ್ತಿ ನಿಮ್ಮನ್ನು ಅರಸಿ ಬರಲಿದೆ.

Articles You Might Like

Share This Article