ರಾಜ್ಯದ ಹಲವೆಡೆ ಇನ್ನೂ ನಾಲ್ಕೈದು ದಿನ ಮಳೆ ಸಾಧ್ಯತೆ

ಬೆಂಗಳೂರು, ಮೇ 3- ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಕೆಲವು ಕಡೆಗಳಲ್ಲಿ ಚದುರಿದಂತೆ ನಿನ್ನೆ ಮಳೆಯಾಗಿದ್ದು, ಇನ್ನೂ ನಾಲ್ಕೈದು ದಿನಗಳ ಕಾಲ ಮಳೆ ಮುಂದುವರೆಯುವ ಮುನ್ಸೂಚನೆಗಳಿವೆ. ಬಿಸಿಲಿನ ಬೇಗೆಯಿಂದ ಬಸವಳಿದ್ದಿದ್ದ ಬೆಂಗಳೂರಿಗೆ ನಿನ್ನೆ ಸಂಜೆ ಬಿದ್ದ ಮಳೆ ಮುದ ನೀಡಿದೆ. ಕೋಲಾರದ ಕೆಜಿಎಫ್‌, ಮುಳಬಾಗಿಲು, ಚನ್ನಪಟ್ಟಣ, ಬೆಂಗಳೂರಿನ ಪೂರ್ವ ಹಾಗೂ ದಕ್ಷಿಣ ಭಾಗದಲ್ಲಿ ಮಳೆಯಾಗಿದೆ. ಬೆಂಗಳೂರಿನ ಉತ್ತರ ಭಾಗದಲ್ಲಿ ಮಳೆಯಾಗಿಲ್ಲ. ಮಿಂಚು, ಗುಡುಗು ಹಾಗೂ ಗಾಳಿ ಸಹಿತ ಮಳೆಯಾಗುವುದು ವಾಡಿಕೆಯಾದರೂ ಮುಂಗಾರು ಪೂರ್ವ ಮಳೆಯು ವ್ಯಾಪಕವಾಗಿ ಬೀಳುವುದಿಲ್ಲ. … Continue reading ರಾಜ್ಯದ ಹಲವೆಡೆ ಇನ್ನೂ ನಾಲ್ಕೈದು ದಿನ ಮಳೆ ಸಾಧ್ಯತೆ