ರಾಜ್ಯದಲ್ಲಿ ಇನ್ನೂ ನಾಲ್ಕೈದು ದಿನ ಉತ್ತಮ ಮಳೆ ಸಾಧ್ಯತೆ

ಬೆಂಗಳೂರು, ಜೂ.2- ರಾಜ್ಯದಲ್ಲಿ ಇನ್ನೂ ನಾಲ್ಕೈದು ದಿನ ಉತ್ತಮ ಮಳೆಯಾಗುವ ಮುನ್ಸೂಚನೆಗಳಿವೆ. ನೈರುತ್ಯ ಮುಂಗಾರು ಕೇರಳ ಪ್ರವೇಶಿಸಿ ಮೂರು ದಿನ ಕಳೆದಿದ್ದು, ಮತ್ತೆ ಅಲ್ಲಿ ಮಳೆಯ ಆರ್ಭಟ ಹೆಚ್ಚಾಗಿದೆ. ಕರ್ನಾಟಕಕ್ಕೆ ಇಂದು ಮುಂಗಾರು ಆಗಮನವಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಪ್ರಕಟಿಸಿತ್ತು. ಆದರೆ ಈತನಕ ಮುಂಗಾರು ಪ್ರವೇಶ ಮಾಡಿರುವುದನ್ನು ಅಧಿಕೃತವಾಗಿ ಘೋಷಿಸಿಲ್ಲ. ಆದರೆ ಕರಾವಳಿ, ಮಲೆನಾಡು ಹಾಗೂ ದಕ್ಷಿಣ ಒಳನಾಡು ಭಾಗದಲ್ಲಿ ವ್ಯಾಪಕ ಪ್ರಮಾಣದಲ್ಲಿ ಮಳೆಯಾಗುತ್ತಿದೆ. ಇಂದು ಸಂಜೆ ವೇಳೆಗೆ ಅಥವಾ ನಾಳೆ ಮುಂಗಾರು ಪ್ರವೇಶದ ಬಗ್ಗೆ … Continue reading ರಾಜ್ಯದಲ್ಲಿ ಇನ್ನೂ ನಾಲ್ಕೈದು ದಿನ ಉತ್ತಮ ಮಳೆ ಸಾಧ್ಯತೆ