ಬೆಂಗಳೂರಿನಲ್ಲಿ ಟೊಮೆಟೊ ಜ್ವರ ಪತ್ತೆಯಾಗಿಲ್ಲ

ಬೆಂಗಳೂರು,ಮೇ16- ಬಿಬಿಎಂಪಿ ವ್ಯಾಪ್ತಿಯಲ್ಲಿ ಮಳೆಗಾಲದಲ್ಲಿ ಡೇಂಘಿ, ಮಲೇರಿಯಾ ಪ್ರಕರಣಗಳು ಹೆಚ್ಚಾಗುತ್ತಿದ್ದು, ಜನರಿಗೆ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಡೆಂಗ್ಯು ಡೇ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ವಿಶೇಷ ಆಯುಕ್ತ ತ್ರಿಲೋಕ್ ಚಂದ್ರ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ವರ್ಷ 331 ಡೆಂಘೀ ಪ್ರಕರಣಗಳು ವರದಿಯಾಗಿದ್ದು, ಜನರಿಗೆ ಅರಿವು ಮೂಡಿಸುವ ನಿಟ್ಟಿನಲ್ಲಿ ಡೆಂಗ್ಯು ಡೇ ಆಚರಣೆ ಮಾಡಲಾಗುತ್ತಿದೆ. 98 ಸಾವಿರ ಮನೆಗಳ ಸಮೀಕ್ಷೆ ಮಾಡಲಾಗಿದೆ ಎಂದರು.

ಟೊಮೊಟೊ ಜ್ವರ ಸರ್ವೆಲೆನ್ಸಿ ಸಕ್ರಿಯವಾಗುತ್ತಿದೆ. ಆದರೆ ಬೆಂಗಳೂರಿನಲ್ಲಿ ಈ ವರೆಗೆ ಯಾವುದೇ ಪ್ರಕರಣ ಪತ್ತೆಯಾಗಿಲ್ಲ ಎಂದು ಹೇಳಿದರು.
ಜೂನ್ ಅಂತ್ಯದ ವೇಳೆಗೆ ಸಮವಸ್ತ್ರ ವಿತರಣೆ: ಬಿಬಿಎಂಪಿ ವ್ಯಾಪ್ತಿಯ 163 ಶಾಲೆಗಳಿದ್ದು, 23 ಸಾವಿರ ವಿದ್ಯಾರ್ಥಿಗಳಿದ್ದಾರೆ. ಜೂನ್ ಅಂತ್ಯದ ವೇಳೆಗೆ ಎಲ್ಲ ಶಾಲಾ ವಿದ್ಯಾರ್ಥಿಗಳಿಗೂ ಸಮವಸ್ತ್ರವನ್ನು ವಿತರಿಸಲಾಗುವುದು ಎಂದು ಅವರು ತಿಳಿಸಿದರು.

ರಸ್ತೆಗುಂಡಿ ಸಮಸ್ಯೆ ನಿವಾರಣೆ: ಬೆಂಗಳೂರಿಗೆ ಮಾರಕವಾಗಿರುವ ರಸ್ತೆಗುಂಡಿ ಸಮಸ್ಯೆ ನಿವಾರಣೆಗೆ ಸಮಾರೋಪದಿಯಲ್ಲಿ ಕಾರ್ಯೋನ್ಮುಖವಾಗಿದ್ದು, ಈಗಾಗಲೆ 9500 ಗುಂಡಿಗಳ ಸಮೀಕ್ಷೆ ಮಾಡಲಾಗಿದೆ. ಮಳೆ ನಿಂತ ಕೂಡಲೇ ಗುಂಡಿ ಮುಚ್ಚುವ ಕಾರ್ಯ ಆರಂಭವಾಗಲಿದೆ ಎಂದು ಹೇಳಿದರು.

ರಾಜಕಾಲುವೆ ಹೂಳೆತ್ತುವ ಸಂಬಂಧ 440 ಕಿ.ಮೀ ಲೈನ್ ಕಾಂಟ್ರಾಕ್ಟ್ ನೀಡಲಾಗಿದೆ ಎಂದು ಹೇಳಿದರು. ಕಸದ ಲಾರಿ ಅಪಘಾತ ವಿಚಾರಕ್ಕೆ ಸಂಬಂಸಿದಂತೆ ಪ್ರತಿಕ್ರಿಯಿಸಿದ ಅವರು, ಬಿಬಿಎಂಪಿಯಲ್ಲಿ ಕಸ ಸಾಗಿಸುವ 58 ಲಾರಿಗಳಿಗೆ ಅಪಘಾತ ಪ್ರಕರಣಗಳು ಹೆಚ್ಚಾದ ಹಿನ್ನೆಲೆಯಲ್ಲಿ ಮತ್ತೆ ಚಾಲಕರಿಗೆ ತರಬೇತಿ ನೀಡಲಾಗುತ್ತಿದೆ ಎಂದು ಅವರು ತಿಳಿಸಿದರು.