ನಾಳೆಯಿಂದ ಭಾರತ-ಲಂಕಾ ಚುಟುಕು ಸರಣಿ

Social Share

ಮುಂಬೈ, ಜ. 2- ಭಾರತ ಹಾಗೂ ಶ್ರೀಲಂಕಾ ನಡುವೆ ನಡೆಯಲಿರುವ 3 ಪಂದ್ಯಗಳ ಚುಟುಕು ಸರಣಿಯು ನಾಳೆ ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆಯಲಿದೆ.

ಈ ಸರಣಿಯ ಮೂಲಕ ಟೀಮ್ ಇಂಡಿಯಾವು 2023ರಲ್ಲಿ ತಮ್ಮ ಅಭಿಯಾನವನ್ನು ಆರಂಭಿಸಲಿದ್ದು ಸ್ಟಾರ್ ಆಟಗಾರರಾದ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಕನ್ನಡಿಗ ಕೆ.ಎಲ್.ರಾಹುಲ್ ಅವರ ಅನುಪಸ್ಥಿತಿಯಲ್ಲಿ ತಂಡವನ್ನು ಐಪಿಎಲ್ ವಿಜೇತ ನಾಯಕ ಹಾರ್ದಿಕ್ ಪಾಂಡ್ಯ ಅವರು ಮುನ್ನಡೆಸಲಿದ್ದು, ಟ್ವೆಂಟಿ-20 ಸ್ಪೆಷಾಲಿಸ್ಟ್ ಆಟಗಾರ ಸೂರ್ಯಕುಮಾರ್ ಯಾದವ್ ಅವರು ಉಪನಾಯಕನ ಜವಾಬ್ದಾರಿಯನ್ನು ಹೊತ್ತಿದ್ದಾರೆ.

ಕಳೆದ ವರ್ಷ ಶ್ರೀಲಂಕಾದಲ್ಲಿ ನಡೆದ 3 ಪಂದ್ಯಗಳ ಟ್ವೆಂಟಿ-20 ಸರಣಿಯನ್ನು ಟೀಮ್ ಇಂಡಿಯಾವು ಕ್ಲೀನ್ ಸ್ವೀಪ್ ಮಾಡಿತ್ತು. ಈಗ ತವರಿನಲ್ಲಿ ನಡೆಯಲಿರುವ 3 ಪಂದ್ಯಗಳ ಸರಣಿಯನ್ನೂ ಕ್ಲೀನ್ ಸ್ವೀಪ್ ಮಾಡುವತ್ತ ಹಾರ್ದಿಕ್ ಪಾಂಡ್ಯ ಗಮನ ಹರಿಸಿದ್ದಾರೆ.

ಮತ್ತೆ ಬಿಜೆಪಿ ಅಧಿಕಾರಕ್ಕೆ ಬಂದೇ ಬರುತ್ತದೆ : ಸಿಎಂ ಬೊಮ್ಮಾಯಿ

ರೋಹಿತ್ ಶರ್ಮಾ ಹಾಗೂ ಕೆ.ಎಲ್.ರಾಹುಲ್ ಅವರ ಅನುಪಸ್ಥಿತಿಯಲ್ಲಿ ಯುವ ಆಟಗಾರರಾದ ದ್ವಿಶತತಕ ವೀರ ಇಶಾನ್ ಕಿಶಾನ್ ಹಾಗೂ ಶುಭಮನ್ ಗಿಲ್ ಅವರು ಆರಂಭಿಕರಾಗಿ ಅಖಾಡಕ್ಕೆ ಇಳಿಯುವ ಸಾಧ್ಯತೆಗಳು ಹೆಚ್ಚಾಗಿದೆ.

ಭಾರತದ ಸಂಭಾವ್ಯ ತಂಡ:
ಇಶಾನ್ ಕಿಶನ್, ಶುಭಮನ್ ಗಿಲ್, ಸೂರ್ಯಕುಮಾರ್ ಯಾದವ್, ದೀಪಕ್ ಹೂಡ, ಹಾರ್ದಿಕ್ ಪಾಂಡ್ಯ (ನಾಯಕ), ಸಂಜು ಸ್ಯಾಮ್ಸನ್, ವಾಷಿಂಗ್ಟನ್ ಸುಂದರ್, ಹರ್ಷಲ್ ಪಟೇಲï, ಯುಜ್ವೇಂದ್ರ ಚಹಲ್, ಅರ್ಷದೀಪ್ ಸಿಂಗ್, ಉಮ್ರಾನ್ ಮಲಿಕ್.
ಚೇಸಿಂಗ್ ಬೆಸ್ಟ್:
ಮುಂಬೈನ ವಾಂಖೆಡೆ ಕ್ರೀಡಾಂಗಣ ದಲ್ಲಿ ಇಬ್ಬನಿ ಬೀಳುವುದರಿಂದ 2ನೆ ಪಾಳೆಯದಲ್ಲಿ ಬ್ಯಾಟಿಂಗ್ ಮಾಡುವ ತಂಡ ಗೆಲ್ಲುವ ಸಾಧ್ಯತೆ ಹೆಚ್ಚಿದೆ.

tomorrow, Sri Lanka, India, 1st T20, Wankhede Stadium,

Articles You Might Like

Share This Article