ಚೈಬಾಸಾ ,ಸೆ.7 – ಜಾರ್ಖಂಡ್‌ನ ಪಶ್ಚಿಮ ಸಿಂಗ್‌ಭೂಮ್ ಜಿಲ್ಲೆಯಲ್ಲಿ ಭದ್ರತಾ ಪಡೆಗಳೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ತಲೆಗೆ 10 ಲಕ್ಷ ರೂ. ಬಹುಮಾನ ಹೊಂದಿದ್ದ ಮಾವೋವಾದಿಯಬ್ಬ ಸಾವನ್ನಪ್ಪಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಗೋಲ್‌ಕೇರಾ ಪೊಲೀಸ್ ಠಾಣೆ ಪ್ರದೇಶದ ಬುರ್ಜುವಾ ಬೆಟ್ಟದಲ್ಲಿ ಬೆಳಿಗ್ಗೆ ಈ ಘಟನೆ ನಡೆದಿದೆ. ಶೋಧ ಕಾರ್ಯಾಚರಣೆಯ ಸಮಯದಲ್ಲಿ ಒಂದು ಶವ ಪತ್ತೆಯಾಗಿದೆ ಎಂದು ಐಜಿಪಿ (ಕಾರ್ಯಾಚರಣೆ) ಮತ್ತು ಜಾರ್ಖಂಡ್ ಪೊಲೀಸ್ ವಕ್ತಾರ ಮೈಕೆಲ್ ರಾಜ್ ಎಸ್ ತಿಳಿಸಿದರು,
ಮೃತನನ್ನು ಸಿಪಿಐ (ಮಾವೋವಾದಿ) ನ ಸ್ವಯಂ ಘೋಷಿತ ವಲಯ ಕಮಾಂಡರ್ ಅಮಿತ್ ಹನ್ಸ್ದಾ ಅಲಿಯಾಸ್ ಆಪ್ತಾನ್ ಎಂದು ಗುರುತಿಸಲಾಗಿದೆ, ಈ ಪ್ರದೇಶದಲ್ಲಿ ಇನ್ನೂ ಶೋಧ ಕಾರ್ಯಾಚರಣೆ ನಡೆಯುತ್ತಿದೆ ಎಂದು ಅವರು ಹೇಳಿದರು.
ಗೋಯಿಲ್ಕೆರಾ ಪೊಲೀಸ್ ಠಾಣೆ ವ್ಯಾಪ್ತಿಯ ರೆಲಾಪರಲ್ ಪ್ರದೇಶದಲ್ಲಿ ಮಾವೋವಾದಿಗಳು ಇರುವ ಬಗ್ಗೆ ಚೈಬಾಸಾ ಪೊಲೀಸ್ ವರಿಷ್ಠಾಧಿಕಾರಿಗೆ ಸುಳಿವು ಸಿಕ್ಕಿತ್ತು ಎಂದು ಮತ್ತೊಬ್ಬ ಅಧಿಕಾರಿ ತಿಳಿಸಿದ್ದಾರೆ.
ಮಾಹಿತಿಯ ಆಧಾರದ ಮೇಲೆ, ಭದ್ರತಾ ಪಡೆಗಳ ತಂಡಗಳು ಬೆಳಿಗ್ಗೆ ಶೋಧ ಕಾರ್ಯಾಚರಣೆ ನಡೆಸಿದ್ದು, ಬೆಳಿಗ್ಗೆ 6 ಗಂಟೆ ಸುಮಾರಿಗೆ ಎನ್‌ಕೌಂರ್ಟ ನಡೆದಿದೆ ಎಂದು ಅವರು ಹೇಳಿದರು.
ಭದ್ರತಾ ಪಡೆಗಳು ತಮ ಮೇಲೆ ಹಿಡಿತ ಸಾಧಿಸುತ್ತಿರುವುದನ್ನು ಗಮನಿಸಿದ ಮಾವೋವಾದಿಗಳು ದಟ್ಟವಾದ ಕಾಡಿಗೆ ಓಡಿಹೋದರು ಮತ್ತು ನಂತರದ ಶೋಧ ಕಾರ್ಯಾಚರಣೆಯ ಸಮಯದಲ್ಲಿ, ಹನ್ಸ್ದಾ ಅವರ ಮೃತದೇಹವು ಬಂದೂಕಿನೊಂದಿಗೆ ಪತ್ತೆಯಾಗಿದೆ ಎಂದು ಅಧಿಕಾರಿ ಹೇಳಿದರು