ಜೋಗ ಜಲಪಾತ, ಅಂಜನಾದ್ರಿ ಬೆಟ್ಟ ಮತ್ತು ಚಾಮುಂಡಿ ಬೆಟ್ಟಕ್ಕೆ ರೂಪ್‍ವೇ

Social Share

ಬೆಂಗಳೂರು,ಮಾ.4- ಪ್ರವಾಸೋದ್ಯಮವನ್ನು ಉತ್ತೇಜಿಸಲು ಹಂಪಿ-ಬಾದಾಮಿ, ಐಹೋಳೆ-ಪಟ್ಟದಕಲ್ಲು, ವಿಜಯಪುರ ಪ್ರವಾಸಿ ವೃತ್ತವನ್ನು ಮತ್ತು ಮೈಸೂರು-ಶ್ರೀರಂಗಪಟ್ಟಣ, ಹಾಸನ-ಬೇಲೂರು-ಹಳೇಬೀಡು ಪ್ರವಾಸಿ ವೃತ್ತವನ್ನು ಸಾರ್ವಜನಿಕ ಖಾಸಗೀ ಸಹಭಾಗಿತ್ವದಲ್ಲಿ ಅಭಿವೃದ್ಧಿ ಪಡಿಸಲು ಉದ್ದೇಶಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
( ಇಲ್ಲಿದೆ ಕಂಪ್ಲೀಟ್ ಬಜೆಟ್ ಹೈಲೈಟ್ಸ್ )
ಬಜೆಟ್‍ನಲ್ಲಿ ಈ ವಿಷಯ ಪ್ರಸ್ತಾಪಿಸಿದ ಅವರು, ಬೇಲೂರು, ಹಳೇಬೀಡು, ಸೋಮನಾಥಪುರಗಳನ್ನು ಒಳಗೊಂಡಂತೆ ಹೊಸ್ಸಳರ ಪವಿತ್ರ ತಾಣಗಳಲ್ಲಿ ವ್ಯಾಪ್ತಿಯಲ್ಲಿ ಬರುವ ಸ್ಮಾರಕಗಳನ್ನ ಪ್ರಸಕ್ತ ಸಾಲಿನಲ್ಲಿ ಯುನೆಸ್ಕೋವಿಶ್ವಪರಂಪರೆ ತಾಣಗಳ ಪಟ್ಟಿಗೆ ಸೇರಿಸಲು ಕ್ರಮ ಕೈಗೊಳ್ಳಲಾಗುವುದು.
ಜೋಗ ಜಲಪಾತದಲ್ಲಿ ರೂಪ್‍ವೇ ಹಾಗೂ ಅಭಿವೃದ್ಧಿ ಕಾಮಗಾರಿಗಳನ್ನು 116 ಕೋಟಿ ರೂ.ಗಳ ಅಂದಾಜು ವೆಚ್ಚದಲ್ಲಿ ಕೈಗೊಳ್ಳಲಾಗುವುದು ಎಂದು ಹೇಳಿದರು.
ನಂದಿಬೆಟ್ಟದಲ್ಲಿ ಪಿಪಿಪಿ ಅಡಿ ರೂಪ್‍ವೇ ಅನ್ನು 93 ಕೋಟಿ ವೆಚ್ಚದಲ್ಲಿ ನಿರ್ಮಿಸಲು ಅನುಮೋದನೆ ನೀಡಲಾಗಿದೆ. ಉತ್ತರ ಕನ್ನಡ ಜಿಲ್ಲೆಯ ಯಾಣ, ಕೊಪ್ಪಳದ ಅಂಜನಾದ್ರಿ ಬೆಟ್ಟದಲ್ಲಿ ರೂಪ್‍ವೇ ನಿರ್ಮಾಣಕ್ಕೆ ಯೋಜನೆ ನಿರ್ಮಾಣ ಮಾಡಲಾಗಿದೆ.
ಮೈಸೂರು ಚಾಮುಂಡಿ ಬೆಟ್ಟದಲ್ಲಿ ರೂಪ್‍ವೇ ನಿರ್ಮಿಸಲು ಕೇಂದ್ರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಅವರು ಹೇಳಿದರು. ಪಾರಂಪರಿಕ ಪ್ರವಾಸಿ ತಾಣಗಳಾದ ಬೀದರ್, ಕಲಬುರಗಿ ಕೋಟೆಗಳನ್ನು ಪುನರುಜ್ಜೀವಗೊಳಿಸಲಾಗುವುದು ಎಂದರು.

Articles You Might Like

Share This Article