ಖ್ಯಾತ ಉದ್ಯಮಿ ವಿಕ್ರಮ್ ಕಿರ್ಲೋಸ್ಕರ್ ನಿಧನ

Social Share

ಬೆಂಗಳೂರು,ನ.30- ಖ್ಯಾತ ಉದ್ಯಮಿ, ಟೊಯೊಟಾ ಕಿರ್ಲೋಸ್ಕರ್ ಮೋಟಾರ್ಸ್‍ನ ಉಪಾಧ್ಯಕ್ಷ ವಿಕ್ರಮ್ ಎಸ್ ಕಿರ್ಲೋಸ್ಕರ್(64) ನಿಧನರಾಗಿದ್ದಾರೆ.

ಇಂದು ಮುಂಜಾನೆ ಮಲ್ಲೇಶ್ವರದ ನಿವಾಸದಲ್ಲಿ ಉಸಿರಾಟದ ತೊಂದರೆ ಕಾಣಿಸಿಕೊಂಡು ಕುಸಿದು ಬಿದ್ದ ತಕ್ಷಣ ಅವರನ್ನು ಎಚ್‍ಎಎಲ್ ವಿಮಾನ ನಿಲ್ದಾಣ ರಸ್ತೆಯಲ್ಲಿರುವ ಮಣಿಪಾಲ್ ಆಸ್ಪತ್ರೆಗೆ ಸಾಗಿಸಲಾಯಿತು. ಆದರೆ, ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಪತ್ನಿ ಗೀತಾಂಜಲಿ ಕಿರ್ಲೋಸ್ಕರ್ ಮತ್ತು ಮಗಳು ಮಾನಸಿ ಕಿರ್ಲೋಸ್ಕರ್ ಹಾಗೂ ಅಪಾರ ಅಭಿಮಾನಿಗಳನ್ನು ಅಗಲಿದ್ದಾರೆ. ವಿಕ್ರಮ್ ಎಸ್. ಕಿರ್ಲೋಸ್ಕರ್ ಅವರ ಅಕಾಲಿಕ ನಿಧನಕ್ಕೆ ಉದ್ಯಮಿಗಳು ದಿಗ್ಭ್ರಮೆ ವ್ಯಕ್ತಪಡಿಸಿದ್ದಾರೆ.
ಕಳೆದ ನ.25 ರಂದು ಮುಂಬೈನಲ್ಲಿ ನಡೆದ ಟೊಯೊಟಾ ಇನ್ನೋವಾ ಹೈಕ್ರಾಸ್ ಅನಾವರಣದಲ್ಲಿ ಅವರು ಭಾಗವಹಿಸಿದ್ದರು.

ಸಲಿಂಗ ವಿವಾಹ ಮಸೂದೆಗೆ ಅಮೆರಿಕ ಸೆನೆಟ್ ಅಂಗೀಕಾರ

ವಿಕ್ರಮ್ ಅವರು ಕಿರ್ಲೋಸ್ಕರ್ ಗ್ರೂಪ್‍ನ ನಾಲ್ಕನೇ ತಲೆಮಾರಿನ ಮುಖ್ಯಸ್ಥರಾಗಿದ್ದರು. ಅವರು ಕಿರ್ಲೋಸ್ಕರ್ ಸಿಸ್ಟಮ್ಸ ಲಿಮಿಟೆಡ್‍ ಅಧ್ಯಕ್ಷ ಮತ್ತು ವ್ಯವಸ್ಥಾಪಕ ನಿರ್ದೇಶಕರಾಗಿದ್ದರು. ನಂತರ ಟೊಯೊಟಾ ಮತ್ತು ಕಿರ್ಲೋಸ್ಕರ್ ಜಂಟಿಯಾಗಿ ವಾಹನ ಉದ್ಯಮ ಭಾರತದಲ್ಲಿ ಆರಂಭಿಸಿ ಯಶಸ್ಸು ಕಂಡಿದ್ದರು ಹಾಗೂ ಪಾಲುದಾರರಾಗಿ ನಂತರ ಉಪಾಧ್ಯಕ್ಷರೂ ಆಗಿದ್ದರು.

ಮೆಕ್ಯಾನಿಕಲ್ ಇಂಜಿನಿಯರಿಂಗ್‍ನಲ್ಲಿ ಪದವೀಧರಾದ ಅವರು ಭಾರತೀಯ ಆಟೋ ವಲಯದಲ್ಲಿ ಅತ್ಯಂತ ಪ್ರಭಾವಶಾಲಿ ವ್ಯಕ್ತಿಗಳಲ್ಲಿ ಒಬ್ಬರಾಗಿದ್ದರು.

ಭಾರಿ ವೈರಲ್ ಆಯ್ತು ಸೈನಿಕರ ಫೈಟಿಂಗ್ ವೀಡಿಯೋ

ಇಂದು ಹೆಬ್ಬಾಳ ಚಿತಾಗಾರದಲ್ಲಿ ಅಂತ್ಯ ಸಂಸ್ಕಾರ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.
ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ, ಭಾರೀ ಕೈಗಾರಿಕೆ ಸಚಿವ ಮುರುಗೇಶ್ ನಿರಾಣಿ ಹಾಗೂ ಹಲವು ಗಣ್ಯರು ಮೃತರ ನಿಧನಕ್ಕೆ ಸಂತಾಪ ವ್ಯಕ್ತಪಡಿಸಿದ್ದಾರೆ.

Toyota, Kirloskar Motor, Vice Chairman, Vikram Kirloskar, dies,

Articles You Might Like

Share This Article