ಬೆಂಗಳೂರು ನಗರದೊಳಗೆ ಟ್ರಾಕ್ಟರ್ ಸಂಚಾರ ನಿರ್ಬಂಧ ವಿರೋಧಿಸಿ ಬಾರಿ ಪ್ರತಿಭಟನೆ

Social Share

ಬೆಂಗಳೂರು,ಫೆ.9- ನಗರದ ರಸ್ತೆಗಳಲ್ಲಿ ಟ್ರಾಕ್ಟರ್ ಸಂಚಾರ ನಿಷೇಧಿಸಿರುವ ಕ್ರಮವನ್ನು ಖಂಡಿಸಿ ಇಂದು ಬೃಹತ್ ಪ್ರತಿಭಟನೆ ನಡೆಸಲಾಯಿತು. ಟ್ರಾಕ್ಟರ್‍ಗಳ ಸಮೇತ ಫ್ರೀಡಂ ಪಾರ್ಕ್‍ಗೆ ಆಗಮಿಸಿದ ನೂರಾರು ಟ್ರಾಕ್ಟರ್ ಚಾಲಕರು ಹಾಗೂ ಮಾಲೀಕರು ಸರ್ಕಾರದ ವಿರುದ್ಧ ಘೋಷಣೆ ಕೂಗಿದರು.

ಸರ್ಕಾರದ ಈ ನಿರ್ಧಾರ ಖಂಡಿಸಿ ಕಳೆದ ರಾತ್ರಿಯೇ ರಾಜ್ಯದ ನಾನಾ ಮೂಲೆಗಳಿಂದ ನೂರಾರು ಟ್ರಾಕ್ಟರ್‍ಗಳು ನಗರ ಪ್ರವೇಶಿಸಲು ಮುಂದಾದವು . ಆದರೆ, ಪೊಲೀಸರು ಟ್ರಾಕ್ಟರ್‍ಗಳ ಪ್ರವೇಶಕ್ಕೆ ಅವಕಾಶ ನೀಡದ ಹಿನ್ನಲೆಯಲ್ಲಿ ಚಾಲಕರು ಸ್ಥಳದಲ್ಲೇ ಟ್ರಾಕ್ಟರ್ ನಿಲ್ಲಿಸಿ ರಸ್ತೆಯಲ್ಲೇ ಮಲಗಿ ಪ್ರತಿಭಟನೆ ನಡೆಸಿದ್ದಾರೆ.

“ರಷ್ಯಾ ತೈಲ ಖರೀದಿಸುವ ಭಾರತದ ಮೇಲೆ ನಿರ್ಬಂಧ ವಿಧಿಸಲ್ಲ”

ಟ್ರಾಕ್ಟರ್ ಚಾಲಕರ ಪ್ರತಿಭಟನೆಯಿಂದ ಬೆಚ್ಚಿಬಿದ್ದ ಪೊಲೀಸರು ಕೊನೆಗೂ ಟ್ರಾಕ್ಟರ್‍ಗಳನ್ನು ಫ್ರೀಡಂ ಪಾರ್ಕ್‍ವರೆಗೆ ತೆಗೆದುಕೊಂಡು ಹೋಗಿ ನಿಲ್ಲಿಸಲು ಅನುಮತಿ ನೀಡಬೇಕಾಯಿತು. ಕರ್ನಾಟಕ ಸೇನೆ ರಾಜ್ಯಧ್ಯಕ್ಷ ಬಸವರಾಜ್ ಪಡುಕೋಟಿ ನೇತೃತ್ವದಲ್ಲಿ ನೂರಾರು ಮಂದಿ ಇಂದು ಫ್ರೀಡಂಪಾರ್ಕ್ ಬಳಿ ಜಮಾಯಿಸಿ ಪ್ರತಿಭಟನೆ ನಡೆಸಿದರು.

ನಗರದ ರಸ್ತೆಗಳಲ್ಲಿ ಟ್ರಾಕ್ಟರ್ ಸಂಚಾರಕ್ಕೆ ನಿಷೇಧ ವಿಧಿಸಿದರೆ 40 ಸಾವಿರಕ್ಕೂ ಹೆಚ್ಚಿರುವ ಟ್ರಾಕ್ಟರ್‍ಗಳು, ಮಾಲೀಕರು, ಚಾಲಕರು ಹಾಗೂ ಕಟ್ಟಡ ಕಾರ್ಮಿಕರು ಬೀದಿಪಾಲಾಗಲಿದ್ದಾರೆ ಎಂದು ಪ್ರತಿಭಟನಾಕಾರರು ಆಕ್ರೋಶ ಹೊರ ಹಾಕಿದರು.

8 ವರ್ಷದ ವಿದ್ಯಾರ್ಥಿ ಮೇಲೆ ಲೈಂಗಿಕ ದೌರ್ಜನ್ಯ, ಸಿಕ್ಕಿಬಿದ್ದ ಶಿಕ್ಷಕ

ಟ್ರಾಕ್ಟರ್ ಚಾಲಕರ ಈ ಹೋರಾಟಕ್ಕೆ ಬಿಗ್‍ಬಾಸ್ ಖ್ಯಾತಿಯ ರೂಪೇಶ್ ರಾಜಣ್ಣ, ಹರೀಶ್ ಬೈರಪ್ಪ ಮತ್ತಿತರರು ಬೆಂಬಲ ವ್ಯಕ್ತಪಡಿಸಿದ್ದಾರೆ.

tractor, drivers, owners, protest, Freedom Park,

Articles You Might Like

Share This Article