Friday, October 11, 2024
Homeರಾಜ್ಯಇಬ್ಬರು ಹಿರಿಯ ಐಪಿಎಸ್‌‍ ಅಧಿಕಾರಿಗಳ ವರ್ಗಾವಣೆ ಮಾಡಿ ಸರ್ಕಾರ ಆದೇಶ

ಇಬ್ಬರು ಹಿರಿಯ ಐಪಿಎಸ್‌‍ ಅಧಿಕಾರಿಗಳ ವರ್ಗಾವಣೆ ಮಾಡಿ ಸರ್ಕಾರ ಆದೇಶ

transfer of two senior IPS officers

ಬೆಂಗಳೂರು, ಸೆ.13- ಇಬ್ಬರು ಹಿರಿಯ ಐಪಿಎಸ್‌‍ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.ಗುಪ್ತಚರ ವಿಭಾಗದ ಎಡಿಜಿಪಿಯಾಗಿದ್ದ ಕೆ.ವಿ.ಶರತ್‌ಚಂದ್ರ ಅವರನ್ನು ಪೊಲೀಸ್‌‍ ನೇಮಕಾತಿ ವಿಭಾಗದ ಎಡಿಜಿಪಿಯಾಗಿ ವರ್ಗಾವಣೆ ಮಾಡಲಾಗಿದೆ ಮತ್ತು ಹೆಚ್ಚುವರಿಯಾಗಿ ಸಂಚಾರ ಹಾಗೂ ರಸ್ತೆ ಸುರಕ್ಷತಾ ಮುಖ್ಯಸ್ಥರಾಗಿಯೂ ಜವಾಬ್ದಾರಿ ನೀಡಲಾಗಿದೆ.

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಆಯುಕ್ತರಾಗಿದ್ದ ಹೇಮಂತ್‌ ಎಂ.ನಿಂಬಾಳ್ಕರ್‌ ಅವರನ್ನು ರಾಜ್ಯ ಪೊಲೀಸ್‌‍ ಗುಪ್ತಚರ ವಿಭಾಗದ ಎಡಿಜಿಪಿಯಾಗಿ ವರ್ಗಾವಣೆ ಮಾಡಲಾಗಿದೆ. ಇದರ ಜತೆಗೆ ವಾರ್ತಾ ಇಲಾಖೆಯ ಆಯುಕ್ತರ ಜವಾಬ್ದಾರಿಯನ್ನೂ ಕೂಡ ಹೆಚ್ಚುವರಿಯಾಗಿ ನೀಡಲಾಗಿದೆ. ಎಡಿಜಿಪಿ ಅಲೋಕ್‌ಕುಮಾರ್‌ ಅವರನ್ನು ರಸ್ತೆ ಸುರಕ್ಷತೆ ಮತ್ತು ಸಂಚಾರ ವಿಭಾಗದಿಂದ ಬಿಡುಗಡೆ ಮಾಡಲಾಗಿದೆ.

RELATED ARTICLES

Latest News