ವರ್ಗಾವಣೆ ದಂಧೆ, ಪ್ರತಿ ಹುದ್ದೆಗೂ ರೇಟ್ ಫಿಕ್ಸ್, ಕರ್ನಾಟಕದಲ್ಲಿ ಹಿಂದೆಂದೂ ಕಾಣದ ಭ್ರಷ್ಟಾಚಾರ: ಬಿಜೆಪಿ ವಾಗ್ದಾಳಿ

ಬೆಂಗಳೂರು,ಮೇ 16- ಇಲಾಖೆಯಲ್ಲಿನ ವರ್ಗಾವಣೆಗೆ ಪ್ರತಿಯೊಂದು ಹುದ್ದೆಗೂ ದರ ನಿಗದಿಪಡಿಸಲಾಗಿದ್ದು, ಕರ್ನಾಟಕದಲ್ಲಿ ಹಿಂದೆಂದೂ ಕಾಣದ ಭ್ರಷ್ಟಾಚಾರ ತಾಂಡವವಾಡುತ್ತಿದೆ ಎಂದು ಬಿಜೆಪಿ ಆರೋಪಿಸಿದೆ. ಪಕ್ಷದ ಕಚೇರಿಯಲ್ಲಿ ಜಂಟಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಸಚಿವ ಡಾ.ಸಿ.ಎನ್‌.ಅಶ್ವತ್ಥನಾರಾಯಣ, ವಿಧಾನಪರಿಷತ್‌ ಸದಸ್ಯ ಛಲವಾದಿ ನಾರಾಯಣ ಸ್ವಾಮಿ, ಮಾಜಿ ಶಾಸಕ ಪಿ.ರಾಜೀವ್‌ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು. ಡಾ.ಸಿ.ಎನ್‌.ಅಶ್ವತ್ಥನಾರಾಯಣ ಮಾತನಾಡಿ, ಸರ್ಕಾರ ಭ್ರಷ್ಟಾಚಾರದಲ್ಲಿ ಮುಳುಗಿ ಹೋಗಿದೆ. ಇಲಾಖೆಯಲ್ಲಿನ ಆಯಕಟ್ಟಿನ ಹುದ್ದೆಗಳಿಗೆ ಇಂತಿಷ್ಟು ಹಣ ನೀಡಿದರೆ ಮಾತ್ರ ವರ್ಗಾವಣೆ ಮಾಡಲಾಗುತ್ತದೆ. ಪ್ರತಿ ಇಲಾಖೆಯಲ್ಲೂ ಒಂದೊಂದು ಹುದ್ದೆಗೆ … Continue reading ವರ್ಗಾವಣೆ ದಂಧೆ, ಪ್ರತಿ ಹುದ್ದೆಗೂ ರೇಟ್ ಫಿಕ್ಸ್, ಕರ್ನಾಟಕದಲ್ಲಿ ಹಿಂದೆಂದೂ ಕಾಣದ ಭ್ರಷ್ಟಾಚಾರ: ಬಿಜೆಪಿ ವಾಗ್ದಾಳಿ