Friday, July 4, 2025
Homeರಾಜ್ಯವೇತನ ಪರಿಷ್ಕರಣೆಗೆ ಸಾರಿಗೆ ನೌಕರರ ಪಟ್ಟು

ವೇತನ ಪರಿಷ್ಕರಣೆಗೆ ಸಾರಿಗೆ ನೌಕರರ ಪಟ್ಟು

Transport employees demand salary revision

ಬೆಂಗಳೂರು,ಜು.4- ಸಾರಿಗೆ ಇಲಾಖೆ ನೌಕರರ ವೇತನ ಪರಿಷ್ಕರಣೆ ಮಾಡದೇ ಇದ್ದರೆ ಮುಂದಿನ ದಿನಗಳಲ್ಲಿ ರಾಜ್ಯಾದ್ಯಂತ ಬೃಹತ್‌ ಪ್ರತಿಭಟನೆ ನಡೆಸುವ ಎಚ್ಚರಿಕೆಯನ್ನು ಸಾರಿಗೆ ನಿಗಮಗಳ ಕಾರ್ಮಿಕರ ಜಂಟಿ ಕ್ರಿಯಾಸಮಿತಿ ಎಚ್ಚರಿಕೆ ನೀಡಿದೆ.

ರಾಜ್ಯಸರ್ಕಾರ ಜಾರಿಗೊಳಿಸಿ ರುವ ಮಹಿಳೆಯರ ಉಚಿತ ಪ್ರಯಾಣದ ಶಕ್ತಿ ಯೋಜನೆ 2500 ಕೋಟಿ ರೂ. ಬಾಕಿ ಇದೆ. ಅದನ್ನು ಬಿಡುಗಡೆ ಮಾಡಿದರೆ ಸಾರಿಗೆ ನಿಗಮಗಳ ಆರ್ಥಿಕ ಸ್ಥಿತಿ ಸುಧಾರಣೆಯಾಗಲಿದೆ. ಜೊತೆಗೆ ನೌಕರರ ವೇತನವನ್ನು ಪರಿಷ್ಕರಣೆ ಮಾಡಲೇಬೇಕು ಎಂದು ಕಾರ್ಮಿಕ ಸಂಘಟನೆಗಳು ಪಟ್ಟುಹಿಡಿದಿವೆ.

ಈ ಹಿಂದೆ ಮುಷ್ಕರ ನಡೆದಾಗ ಒಪ್ಪಂದವಾಗಿದ್ದಂತೆ 38 ತಿಂಗಳ ಹರಿಯರ್‌ರ‍ಸ ಅನ್ನು ಕೂಡಲೇ ಬಿಡುಗಡೆ ಮಾಡಬೇಕು. 2024 ರ ಜನವರಿ 1 ರಿಂದ ಅನ್ವಯವಾಗುವಂತೆ ಶೇ.25 ರಷ್ಟು ವೇತನವನ್ನು ಪರಿಷ್ಕರಣೆ ಮಾಡಬೇಕು. ಜೊತೆಗೆ ಕಾರ್ಮಿಕರಿಗೆ ಸಂಬಂಧಪಟ್ಟಂತಹ ಇನ್ನೂ ಹಲವಾರು ಬೇಡಿಕೆಗಳನ್ನು ಈಡೇರಿಸಬೇಕು ಎಂದು ಸಂಘಟನೆಗಳು ಪಟ್ಟುಹಿಡಿದಿವೆ.

ಈ ಮೊದಲು ಡಿ.31ಕ್ಕೆ ಸಾರಿಗೆ ಮುಷ್ಕರಕ್ಕೆ ಕರೆ ನೀಡಲಾಗಿತ್ತು. ಆ ವೇಳೆ ಪತ್ರ ಬರೆದಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಸಂಕ್ರಾಂತಿ ಬಳಿಕ ಎಲ್ಲಾ ಬೇಡಿಕೆಗಳಿಗೂ ಸಕಾರಾತಕವಾಗಿ ಸ್ಪಂದಿಸುವುದಾಗಿ ಹೇಳಿದ್ದರು. ಆದರೆ ಅದು ಜಾರಿಯಾಗಲಿಲ್ಲ. ಸಾರಿಗೆ ನಿಗಮಗಳ ಸಂಘಟನೆಗಳ ಪದಾಧಿಕಾರಿಗಳು ಮುಖ್ಯಮಂತ್ರಿಯವರ ಮನೆ ಎದುರು ಧರಣಿ ಆರಂಭಿಸಿದಾಗ ಏ.15 ರಂದು ಸುದೀರ್ಘ ಸಭೆ ನಡೆಸಲಾಯಿತು.

ಅಲ್ಲಿ ಬೇಡಿಕೆಗಳನ್ನು ಮಂಡಿಸಿದ್ದೇವೆ ಎಂದು ಸಾರಿಗೆ ನಿಮಗಳ ಕಾರ್ಮಿಕ ಸಂಘಟನೆ ಮುಖಂಡರು ತಿಳಿಸಿದ್ದಾರೆ.ಬೇಡಿಕೆಗಳು ಈಡೇರುವ ನಿರೀಕ್ಷೆ ಇಲ್ಲವಾಗಿದೆ. ಕೊನೆ ಹಂತದಲ್ಲಿ ಇಂದು ಮತ್ತೊಂದು ಸುತ್ತಿನ ಚರ್ಚೆ ನಡೆಸಲಾಗುವುದು. ಸರ್ಕಾರ ನಮ ಬೇಡಿಕೆಗಳನ್ನು ಈಡೇರಿಸಿದರೆ ಮುಖ್ಯಮಂತ್ರಿಯವರನ್ನು ಅಭಿನಂದಿಸಿ ಕೆಲಸ ಮುಂದುವರೆಸುತ್ತೇನೆ. ಇಲ್ಲವಾದರೆ ಮುಂದಿನ ಹೋರಾಟದ ರೂಪುರೇಷೆಗಳನ್ನು ಚರ್ಚಿಸಬೇಕಾಗುತ್ತದೆ ಎಂದು ಕಾರ್ಮಿಕ ಸಂಘಟನೆಗಳ ಮುಖಂಡರು ಎಚ್ಚರಿಕೆ ನೀಡಿದ್ದಾರೆ.

ಈ ಮೊದಲು ನಡೆದ ಸಭೆಯಲ್ಲಿ ಶೇ.15 ರಷ್ಟು ಬಸ್‌‍ ಪ್ರಯಾಣ ದರ ಬೆಲೆ ಏರಿಕೆಗೆ ಅವಕಾಶ ಮಾಡಿಕೊಟ್ಟರೆ ನೌಕರರ ವೇತನ ಪರಿಷ್ಕರಣೆ ಸಾಧ್ಯವಾಗಲಿದೆ ಎಂದು ಸಾರಿಗೆ ನಿಗಮಗಳು ಹೇಳಿದ್ದವು. ಅದರಂತೆ ಬಸ್‌‍ ಪ್ರಯಾಣ ದರ ಹೆಚ್ಚಳವಾಗಿದೆ. ಸಂಸ್ಥೆ ಆರ್ಥಿಕವಾಗಿ ಸುಸ್ಥಿತಿಯಲ್ಲಿದೆ. ಹಲವು ರೀತಿಯ ನೇಮಕಾತಿಗಳು ಕೂಡ ನಡೆಯುತ್ತಿವೆ. ಹೀಗಿರುವಾಗ ವೇತನ ಪರಿಷ್ಕರಣೆಗೆ ಹಿಂದೇಟು ಹಾಕುತ್ತಿರುವುದೇಕೆ ಎಂದು ಕಾರ್ಮಿಕ ಮುಖಂಡರು ಪ್ರಶ್ನಿಸಿದ್ದಾರೆ.

RELATED ARTICLES

Latest News