ಸಾರಿಗೆ ನೌಕರರ ವೇತನ ಪರಿಷ್ಕರಣೆಗೆ ಸರ್ಕಾರ ಸಿದ್ದವಿದೆ : ಶ್ರೀರಾಮುಲು

Social Share

ಬಳ್ಳಾರಿ,ಮಾ.15- ಸಾರಿಗೆ ನೌಕರರ ವೇತನವನ್ನು ಪರಿಷ್ಕರಣೆ ಮಾಡಲು ಸರ್ಕಾರ ಸಿದ್ದವಿದೆ. ಯಾವುದೇ ಕಾರಣಕ್ಕೂ ಪ್ರಯಾಣಿಕರಿಗೆ ತೊಂದರೆ ಕೊಟ್ಟು ಸಾರಿಗೆ ನೌಕರರು ಮುಷ್ಕರ ನಡೆಸಬಾರದು ಎಂದು ಸಚಿವ ಬಿ.ಶ್ರೀರಾಮುಲು ಮನವಿ ಮಾಡಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವೇತನ ಪರಿಷ್ಕರಣೆ ಸಂಬಂಧ ಈಗಾಗಲೇ ಸಾರಿಗೆ ನೌಕರರ ಸಂಘಗಳ ಮುಖಂಡರ ಜೊತೆ ಒಂದು ಸುತ್ತಿನ ಮಾತುಕತೆ ನಡೆಸಿದೆ. ಮೊದಲ ಹೆಜ್ಜೆಯಾಗಿ ವೇತನ ಪರಿಷ್ಕರಣೆ ಮಾಡಲು ನಮ್ಮ ಸರ್ಕಾರ ಬದ್ದವಾಗಿದೆ ಎಂದು ಹೇಳಿದರು.

ಶೇ.24ರಷ್ಟು ವೇತನವನ್ನು ಪರಿಷ್ಕರಣೆ ಮಾಡಬೇಕೆಂಬುದು ಸಾರಿಗೆ ನೌಕರರ ಬೇಡಿಕೆಯಾಗಿದೆ. ನಾವು ಶೇ.10ರಿಂದ 12ರಷ್ಟು ವೇತನ ಪರಿಷ್ಕರಣೆಗೆ ಸಮ್ಮತಿಸಿದ್ದೇವೆ. ಅಂತಿಮವಾಗಿ ಎಷ್ಟು ಪ್ರಮಾಣದಲ್ಲಿ ಹೆಚ್ಚಳ ಮಾಡಬೇಕು ಎಂಬುದನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಜೊತೆ ಚರ್ಚಿಸಿದ ನಂತರ ಸೂಕ್ತ ನಿರ್ಧಾರ ತೆಗೆದುಕೊಳ್ಳುವುದಾಗಿ ತಿಳಿಸಿದರು.

ಸತತ 3ನೇ ದಿನವೂ ನಡೆಯದ ಸಂಸತ್ ಕಲಾಪ, ಅಮೂಲ್ಯ ಸಮಯ ವ್ಯರ್ಥ

ಸಾರಿಗೆ ನಿಗಮಗಳು ನಷ್ಟದಲ್ಲಿವೆ. ಬಿಎಂಟಿಸಿ ಹೊರತುಪಡಿಸಿದರೆ ಯಾವ ನಿಗಮಗಳು ಕೂಡ ಲಾಭದಲ್ಲಿಲ್ಲ. ಆದರೂ ನಾವು ನೌಕರರಿಗೆ ತೊಂದರೆಯಾಗಬಾರದು ಎಂಬ ಕಾರಣಕ್ಕೆ ಸರಿಯಾದ ಸಮಯಕ್ಕೆ ವೇತನವನ್ನು ಬಿಡುಗಡೆ ಮಾಡುತ್ತೇವೆ. ಸರ್ಕಾರದ ಪರಿಸ್ಥಿತಿ ಅರ್ಥ ಮಾಡಿಕೊಳ್ಳಬೇಕೆಂದು ರಾಮಲು ಮನವಿ ಮಾಡಿದರು.

ಶೇ.24ರಷ್ಟು ವೇತನ ಪರಿಷ್ಕರಣೆ ಮಾಡುವುದು ನಿಗಮಗಳಿಗೆ ಹೊರೆಯಾಗಲಿದೆ. ಸಾರಿಗೆ ಸಾರ್ವಜನಿಕರಿಗೆ ಸೇವೆ ಒದಗಿಸುವ ಇಲಾಖೆಯಾಗಿದೆ. ಆರ್ಥಿಕ ಪರಿಸ್ಥಿತಿ ಸಿರಿ ಇಲ್ಲದಿರುವಾಗ ವೇತನವನ್ನು ಪರಿಷ್ಕರಣೆ ಮಾಡುವಂತೆ ಪಟ್ಟು ಹಿಡಿಯುವುದು ಸರಿಯಲ್ಲ ಎಂದು ಆಕ್ಷೇಪಿಸಿದರು.

ಒಂದೇ ಹಂತದಲ್ಲಿ ಎಲ್ಲ ಬೇಡಿಕೆಗಳನ್ನು ಕಾಲಮಿತಿಯೊಳಗೆ ಈಡೇರಿಸಲು ಸಾಧ್ಯವಿಲ್ಲ. ಹಂತ ಹಂತವಾಗಿ ಅನುಷ್ಠಾನ ಮಾಡಲು ಸರ್ಕಾರ ಬದ್ದವಾಗಿದೆ. ನಾವು ಈಗಲೂ ಕೂಡ ಸಂಘಟನೆಯ ಮುಖಂಡರ ಜೊತೆ ನಿರಂತರ ಸಂಪರ್ಕದಲ್ಲಿದ್ದೇವೆ ಎಂದರು.

ನರೇಗಾ ಯೋಜನೆ ಸ್ಥಗಿತಗೊಳಿಸುವ ಹುನ್ನಾರ : ಕೇಂದ್ರದ ವಿರುದ್ಧ ವ್ಯಾಪಕ ಆಕ್ರೋಶ

ಪ್ರಯಾಣಿಕರಿಗೆ ತೊಂದರೆ ಕೊಟ್ಟು ಮುಷ್ಕರ ನಡೆಸುವುದು ಯಾರಿಗೂ ಶೋಭೆ ತರುವುದಿಲ್ಲ. ಅಲ್ಲದೆ ಹೊಸ ವರ್ಷವಾದ ಯುಗಾದಿ ಹಬ್ಬಕ್ಕೆ ಲಕ್ಷಾಂತರ ಜನರು ಕುಟುಂಬ ಸಮೇತರಾಗಿ ತಮ್ಮ ತಮ್ಮ ಗ್ರಾಮಗಳಿಗೆ ತೆರಳುತ್ತಾರೆ. ಇಂಥ ಸಂದರ್ಭದಲ್ಲಿ ಮುಷ್ಕರ ನಡೆಸುವುದು ಸರಿಯೇ ಎಂದು ಪ್ರಶ್ನೆ ಮಾಡಿದರು.

ನನಗೆ ಖಂಡಿತವಾಗಿಯೂ ಸಾರಿಗೆ ನೌಕರರು ಮುಷ್ಕರ ನಡೆಸುವುದಿಲ್ಲ ಎಂಬ ಅಚಲವಾದ ವಿಶ್ವಾಸವಿದೆ. ನಿಮ್ಮ ಏನೇ ಸಮಸ್ಯೆಯಿದ್ದರೂ ನಾವು ಈಡೇರಿಸಲು ಬದ್ದರಿದ್ದೇವೆ ದಯಮಾಡಿ ಮುಷ್ಕರ ನಡೆಸಬೇಡಿ ಎಂದು ಅವರು ಮನವಿ ಮಾಡಿದರು.

transport, employees, salary, revise, Minister, Sriramulu,

Articles You Might Like

Share This Article