Friday, July 18, 2025
Homeರಾಜ್ಯಆ.5 ರಿಂದ ಸಾರಿಗೆ ನೌಕರ ಮುಷ್ಕರ

ಆ.5 ರಿಂದ ಸಾರಿಗೆ ನೌಕರ ಮುಷ್ಕರ

Transport employees to strike from August 5

ಬೆಂಗಳೂರು,ಜು.16- ವೇತನ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಮುಂದಿನ ಆ.5 ರಿಂದ ಕೆಎಸ್‌‍ಆರ್‌ಟಿಸಿ , ಬಿಎಂಟಿಸಿ ಸೇರಿದಂತೆ ನಾಲ್ಕು ನಿಗಮಗಳ ನೌಕರರ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಕರೆ ನೀಡಲಾಗಿದೆ. ಸಾರಿಗೆ ನಿಗಮಗಳ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿ ಆ.5ರಂದು ಬೆಳಿಗ್ಗೆ 6 ಗಂಟೆಯಿಂದ ಮುಷ್ಕರ ಆರಂಭವಾಗಲಿದೆ.

ಕಳೆದ ಜನವರಿಯಲ್ಲೇ 4 ನಿಗಮದ ಸಾರಿಗೆ ನೌಕರರಿಗೆ 38 ತಿಂಗಳ ಭತ್ಯೆಹೆಚ್ಚಳ ಮಾಡಬೇಕಿತ್ತು ಆದರೆ ಈವರೆಗೆ ಮಾಡಿಲ್ಲ. ಹೀಗಾಗಿ ಸರ್ಕಾರದ ನಡೆ ಖಂಡಿಸಿ ಮುಷ್ಕರಕ್ಕೆ ಕರೆ ನೀಡಲಾಗಿದೆ.
ಮುಷ್ಕರದ ಬಗ್ಗೆ ಈಗಾಗಲೆ ನಿಯಮಾನುಸಾರ ಸಿಎಂ ಸಿದ್ದರಾಮಯ್ಯಗೆ ನೋಟಿಸ್‌‍ ಕಳಿಸಿದ್ದೇವೆ ಎಂದು ಕಾರ್ಮಿಕ ಮುಖಂಡ ಅನಂತ ಸುಬ್ಬರಾವ್‌ ತಿಳಿಸಿದ್ದಾರೆ.

ಸಾರಿಗೆ ಮುಷ್ಕರದ ಬಗ್ಗೆ ಸಿಎಂಗೆ ಮಂಗಳವಾ ಮುಷ್ಕರದ ಕೈಗೊಳ್ಳುತ್ತಿರುವ ಬಗ್ಗೆ ತಿಳಿಸಿದ್ದೇವೆ ಈ ಭಾರಿ ಯಾವುದೇ ರಾಜಿ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. 4 ನಿಗಮದಲ್ಲಿ 1 ಲಕ್ಷದ 15 ಸಾವಿರ ನೌಕರರಿಗೆ 38 ತಿಂಗಳ ಭತ್ಯೆ ನೀಡಬೇಕಿತ್ತು. ಆದರೆ 2025 ಜುಲೈ ಬಂದರೂ ಇನ್ನೂ ಸಂಬಳ ಹೆಚ್ಚಳ ಮಾಡಲು ಮುಂದಾಗಿಲ್ಲ ಎಂದು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕಳೆದ ಜುಲೈ 7ರಂದು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿ ಪದಾಧಿಕಾರಿಗಳ ಜೊತೆ ಸಿಎಂ ಸಿದ್ದರಾಮಯ್ಯ ಸಭೆ ಮಾಡಿದ್ದರು. ಈ ಸಭೆಯಲ್ಲಿ ನೌಕರರ ವೇತನ ಪರಿಷ್ಕರಣೆಯ 38 ತಿಂಗಳ ಹಿಂಬಾಕಿ ಪಾವತಿ ಮತ್ತು ವೇತನ ಹೆಚ್ಚಳ ಬಗ್ಗೆ ಒಂದು ವಾರದೊಳಗೆ ಸಭೆ ಮಾಡುವುದಾಗಿ ಹೇಳಿದ್ದರು.ಆದರೆ ಇದರ ಬಗ್ಗೆ ಯಾವುದೇ ಪ್ರಕಿಯೇ ನಡೆಯದ ಕಾರಂ 20 ದಿನದ ಮುಂಚೆಯೇ ನೋಟೀಸ್‌‍ ಕಳಿಸಿ ಮುಷ್ಕರಕ್ಕೆ ಮುಂದಾಗಿರುವುದಾಗಿ ಹೇಳಿದರು.

RELATED ARTICLES

Latest News