Thursday, November 6, 2025
Homeರಾಜ್ಯಕೆಂಪೇಗೌಡ ಬಸ್‌‍ ನಿಲ್ದಾಣಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ದಿಢೀರ್‌ ಭೇಟಿ

ಕೆಂಪೇಗೌಡ ಬಸ್‌‍ ನಿಲ್ದಾಣಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ದಿಢೀರ್‌ ಭೇಟಿ

Transport Minister Ramalinga Reddy makes a surprise visit to Kempegowda Bus Stand

ಬೆಂಗಳೂರು, ನ.6-ಕೆಂಪೇಗೌಡ ಬಸ್‌‍ ನಿಲ್ದಾಣ(ಕೆಎಸ್‌‍ಆರ್‌ಟಿಸಿ) ಕ್ಕೆ ಇಂದು ದಿಢೀರ್‌ ಭೇಟಿ ನೀಡಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ(Ramalinga Reddy) ಅವರು, ಕಾಮಗಾರಿಗಳನ್ನು ಪರಿಶೀಲಿಸಿದರು. ಕೆಂಪೇಗೌಡ ಬಸ್‌‍ ನಿಲ್ದಾಣದಲ್ಲಿ ವಾಹನಗಳ ನಿಲುಗಡೆಗಾಗಿ ಮೀಸಲಿರುವ ಪ್ರದೇಶವು ಸಮತಟ್ಟಾಗಿರದೇ, ಮಳೆ ಬಂದ ಸಂದರ್ಭದಲ್ಲಿ ನೀರು ನಿಂತು ವಾಹನಗಳ ಸುಗಮ ಸಂಚಾರಕ್ಕೆ ತೊಂದರೆ ಉಂಟಾಗುತ್ತಿರುವ ಬಗ್ಗೆ ಪ್ರಯಾಣಿಕರು ಸಚಿವರ ಗಮನಕ್ಕೆ ತಂದಿದ್ದರು.

ಈ ಬಗ್ಗೆ ಕೂಡಲೇ ಕಾಮಗಾರಿ ಕೈಗೆತ್ತಿಕೊಂಡು ಬಸ್‌‍ಗಳ ಸುಗಮ ಸಂಚಾರಕ್ಕೆ ಕ್ರಮ ತೆಗೆದುಕೊಳ್ಳಲು ಸಚಿವರು ಸೂಚಿಸಿದ್ದರು. ಈ ಸಂಬಂಧ ತೆಗೆದುಕೊಂಡಿರುವ ಕ್ರಮವನ್ನು ಪರಿಶೀಲಿಸಲು ಬಸ್‌‍ನಿಲ್ದಾಣಕ್ಕೆ ದಿಢೀರ್‌ ಭೇಟಿ ನೀಡಿ ಪರಾಮರ್ಶೆ ನಡೆಸಿದ್ದಾರೆ.

ಮೊದಲ ಹಂತದ ಕಾಮಗಾರಿಯನ್ನು ಪೂರ್ಣಗೊಳಿಸಿ, ಮುಂದಿನ ಹಂತದಲ್ಲಿ ಇನ್ನೆರಡು ಸ್ಥಳಗಳಲ್ಲಿ ಕಾಮಗಾರಿ ಕೈಗೊಳ್ಳಲು ಸೂಚನೆ ನೀಡಿದ್ದಾರೆ. ಇದೇ ಸಂದರ್ಭದಲ್ಲಿ ಬಸ್‌‍ ನಿಲ್ದಾಣದ ಎಲ್ಲಾ ಟರ್ಮಿನಲ್‌ಗಳ ಪರಿವೀಕ್ಷಣೆ ನಡೆಸಿದ ಅವರು, ಸಾರ್ವಜನಿಕ ಪ್ರಯಾಣಿಕರಿಗೆ ಸಮರ್ಪಕ ಸಾರಿಗೆ ಸೌಲಭ್ಯ ಒದಗಿಸುವುದರ ಜೊತೆಗೆ ವಾಣಿಜ್ಯ ಮಳಿಗೆಗಳು ಖಾಲಿ ಉಳಿಯದಂತೆ ಕ್ರಮವಹಿಸಲು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಸಾರ್ವಜನಿಕ ಪ್ರಯಾಣಿಕರಿಗೆ ಹಾಗೂ ಚಾಲನಾ ಸಿಬ್ಬಂದಿಗಳಿಗೆ ಮೂಲಭೂತ ಸೌಕರ್ಯಗಳಾದ ಕುಡಿಯುವ ನೀರು, ವಿದ್ಯುತ್‌ ದೀಪದ ಹಾಗೂ ಶೌಚಾಲಯದ ವ್ಯವಸ್ಥೆಯನ್ನು ಸಮರ್ಪಕವಾಗಿ ನಿರ್ವಹಿಸಲು ಸೂಚಿಸಿದರು. ಅಲ್ಲದೇ, ಬಿಎಂಟಿಸಿ ಬಸ್‌‍ ನಿಲ್ದಾಣಕ್ಕೂ ಭೇಟಿ ನೀಡಿ, ಕಟ್ಟಡದ ಮೇಲೆ ಬೆಳೆದಿರುವ ಗಿಡಗಳನ್ನು ತೆಗಿಸಿ, ಸ್ವಚ್ಛಗೊಳಿಸಲು ಸೂಚಿಸಿದರು.
ಕೆಎಸ್‌‍ಆರ್‌ಟಿಸಿ ಹಿರಿಯ ಅಧಿಕಾರಿಗಳು, ಕೇಂದ್ರ ಕಚೇರಿಯ ಇಲಾಖಾ ಮುಖ್ಯಸ್ಥರು ಕೆಂಪೇಗೌಡ ಬಸ್‌‍ ನಿಲ್ದಾಣ ವಿಭಾಗದ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

RELATED ARTICLES

Latest News