ಬೆಂಗಳೂರು, ಮಾ.5- ವೇತನ ಹೆಚ್ಚಳ ಸೇರಿದಂತೆ ತಮ್ಮ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಮಾ.24ರಿಂದ ಅನಿರ್ದಿಷ್ಟಾವ ಮುಷ್ಕರ ನಡೆಸಲು ಸಾರಿಗೆ ನಿಗಮಗಳ ನೌಕರರ ಸಮಾನ ಮನಸ್ಕರ ವೇದಿಕೆ ಕರೆ ನೀಡಿದ್ದು, ಇದರಿಂದ ಸಾವಿರಾರು ಪ್ರಯಾಣಿಕರಿಗೆ ತೊಂದರೆಯಾಗುವ ಸಾಧ್ಯತೆ ಇದೆ.
ಸರ್ಕಾರವು ತಮ್ಮ ವೇತನ ಹೆಚ್ಚಳದ ಬೇಡಿಕೆಗೆ ಸ್ಪಂದಿಸದ ಹಿನ್ನೆಲೆಯಲ್ಲಿ ರಸ್ತೆ ಸಾರಿಗೆ ನೌಕರರ ಒಕ್ಕೂಟ ಕರೆ ನೀಡಿದೆ. ಇದರಿಂದಾಗಿ ಬಿಎಂಟಿಸಿ, ಕೆಎಸ್‍ಆರ್‍ಟಿಸಿ, ಎನ್‍ಡಿಬ್ಲೂಕೆಆರ್‍ಟಿಸಿ, ಕೆಕೆಆರ್‍ಟಿಸಿ ಸೇವೆಗಳ ಮೇಲೆ ಪರಿಣಾಮ ಬೀರಲಿದೆ.
ಸಾರಿಗೆ ನೌಕರರ ಸಮಸ್ಯೆಗಳ ಬಗ್ಗೆ ಸರ್ಕಾರದ ಗಮನ ಸೆಳೆಯಲು ನಾವು ಎಲ್ಲಾ ಪ್ರಯತ್ನ ಮಾಡಿದ್ದೇವೆ. 2016ರಿಂದ ನಮ್ಮ ನೌಕರರಿಗೆ ವೇತನ ಹೆಚ್ಚಳವಾಗಿಲ್ಲ. 2021ರಲ್ಲಿ ನಡೆದ ಮುಷ್ಕರದ ವೇಳೆ ಅಂದಿನ ಸಾರಿಗೆ ಸಚಿವ ಲಕ್ಷ್ಮಣ ಸವದಿ ಅವರು ವೇತನ ಪರಿಷ್ಕರಣೆ ಮಾಡುವುದಾಗಿ ಲಿಖಿತ ಭರವಸೆ ನೀಡಿ ನಮ್ಮ ಇತರೆ ಎಲ್ಲ ಬೇಡಿಕೆಗಳನ್ನು ಈಡೇರಿಸುವುದಾಗಿ ತಿಳಿಸಿದ್ದರು. ಆದರೆ, ಎಲ್ಲಾ ಭರವಸೆಗಳು ಕಾಗದದಲ್ಲಿಯೇ ಉಳಿದಿವೆ ಮತ್ತು ನಮ್ಮ ನೌಕರರು ತೊಂದರೆ ಅನುಭವಿಸುತ್ತಿದ್ದಾರೆ ಎಂದು ಒಕ್ಕೂಟದ ಅಧ್ಯಕ್ಷ ಆರ್.ಚಂದ್ರಶೇಖರ್ ಆರೋಪಿಸಿದ್ದಾರೆ.
ಕೆಲವರು ಭಾರತದ ಘನತೆ ಹಾಳುಮಾಡಲು ಯತ್ನಿಸುತ್ತಿದ್ದಾರೆ : ಕಿರಣ್ ರಿಜಿಜು
ಮಾರ್ಚ್ 1ರಂದು ಕೆಎಸ್‍ಆರ್‍ಟಿಸಿ ಎಂಡಿ ಅನ್ಬುಕುಮಾರ್ ಅವರ ಅಧ್ಯಕ್ಷತೆಯಲ್ಲಿ ಸಭೆಗೆ ಕರೆದಿದ್ದು, ಮುಷ್ಕರಕ್ಕೆ ಕರೆ ನೀಡುತ್ತೇವೆ ಎಂದು ಹೇಳಿದರೂ ಯಾವುದೇ ಪ್ರಯೋಜನವಾಗಲಿಲ್ಲ. ನಾವು ಸೋಮವಾರ ಕಾರ್ಮಿಕ ಆಯುಕ್ತರಿಗೆ 14 ದಿನಗಳ ಪ್ರತಿಭಟನೆಯ ನೋಟಿಸ್ ನೀಡುತ್ತೇವೆ. ಪ್ರಯಾಣಿಕರನ್ನು ತೊಂದರೆಗೆ ಸಿಲುಕಿಸಬಾರದು ಎಂಬುದು ನಮ್ಮ ಉದ್ದೇಶವಾಗಿದೆ ಎಂದು ತಿಳಿಸಿದ್ದಾರೆ.
ಆರನೇ ವೇತನ ಆಯೋಗದ ಮಾದರಿಯಲ್ಲಿ ಸಾರಿಗೆ ನೌಕರರಿಗೆ ವೇತನ ನೀಡುವುದಾಗಿ 2021ರ ಏಪ್ರಿಲ್‍ನಲ್ಲಿ ಸರ್ಕಾರ ಲಿಖಿತ ಭರವಸೆ ನೀಡಿತ್ತು. ಎರಡು ವರ್ಷ ಕಳೆದರೂ ಯಾವುದೇ ಬೇಡಿಕೆ ಈಡೇರಿಸಿಲ್ಲ. ಬಜೆಟ್‍ನಲ್ಲಿಯೂ ಸಾರಿಗೆ ನೌಕರರ ಬೇಡಿಕೆಗಳ ಬಗ್ಗೆ ಉಲ್ಲೇಖಿಸಿಲ್ಲ.
ಹೀಗಾಗಿ ಮುಷ್ಕರ ನಡೆಸಲಾಗುವುದು. ಸಾರಿಗೆಯ ನಾಲ್ಕೂ ನಿಗಮಗಳ ನೌಕರರ ನ್ಯಾಯಯುತ ಬೇಡಿಕೆಗಳ ಈಡೇರಿಕೆಗಾಗಿ ಮತ್ತು ಸಮಸ್ಯೆಗಳ ಶಾಶ್ವತ ಪರಿಹಾರಕ್ಕಾಗಿ ಸತತ ಮೂರು ವರ್ಷಗಳಿಂದ ಹೋರಾಟ ಮಾಡುತ್ತಿದ್ದರೂ ಕೂಡ 2023-24 ರ ರಾಜ್ಯ ಸರ್ಕಾರದ ಬಜೆಟ್‍ನಲ್ಲಿ ಸರ್ಕಾರ ಕೊಟ್ಟ ಲಿಖಿತ ಭರವಸೆ ಈಡೇರಿಸದ ಕಾರಣ ಅನಿವಾರ್ಯವಾಗಿ ಮಾ.24ರಿಂದ ಅನಿರ್ದಿಷ್ಟಾವ ಸಾರಿಗೆ ಮುಷ್ಕರ ಮಾಡಲು ತೀರ್ಮಾನಿಸಿದ್ದೇವೆ ಎಂದು ತಿಳಿಸಿದರು.
ಚೀನಾ ರಕ್ಷಣಾ ಬಜೆಟ್ ಮತ್ತಷ್ಟು ಹೆಚ್ಚಳ
ನೌಕರರ ಸಮಸ್ಯೆಗಳ ಪರಿಹಾರಕ್ಕೆ ವಿವಿಧ ರೀತಿಯ ಹೋರಾಟ ನಡೆಸಿದ್ದರೂ ಸ್ಪಂದಿಸಿಲ್ಲ. ಮಾರ್ಚ್ 1ರಿಂದ ಫ್ರೀಡಂ ಪಾರ್ಕ್‍ನಲ್ಲಿ ಪ್ರತಿಭಟನೆ ನಡೆಸುತ್ತಿದ್ದರೂ ಯಾವೊಬ್ಬ ಅಧಿಕಾರಿ, ಜನಪ್ರತಿನಿಧಿ ಸ್ಥಳಕ್ಕೆ ಬಂದು ಸಮಸ್ಯೆ ಆಲಿಸಿಲ್ಲ. ಹೀಗಾಗಿ ಮಾರ್ಚ್ 24 ರಿಂದ ಬಸ್ ಸೇವೆ ಸ್ಥಗಿತಗೊಳಿಸಿ ಅನಿರ್ದಿಷ್ಟಾವಧಿ ಮುಷ್ಕರ ಕೈಗೊಳ್ಳಲು ನಿರ್ಧರಿಸಲಾಗಿದೆ ಎಂದರು.
Transport, workers, strike, March 24,