ಸಾರಿಗೆ ಮುಷ್ಕರ ಇನ್ನೂ ಅನಿಶ್ಚಿತತೆ

Social Share

ಬೆಂಗಳೂರು,ಮಾ.19- ಸಾರಿಗೆ ನೌಕರರ ಸಂಘಟನೆಗಳಲ್ಲೇ ಭಿನ್ನಾಭಿಪ್ರಾಯ ಉಂಟಾಗಿರುವ ಕಾರಣ ಇದೇ 21ರಿಂದ ನಡೆಸಲು ತೀರ್ಮಾನಿಸಲಾಗಿದ್ದ ಮುಷ್ಕರ ಈಗಲೂ ಅನಿಶ್ಚಿತತೆಯಿಂದ ಕೂಡಿದೆ. ಸರ್ಕಾರದ ಬೇಡಿಕೆಗೆ ಸಮ್ಮತಿಸಿ ಕೆಲವು ಸಂಘಟನೆಗಳು ಮಂಗಳವಾರದಿಂದ ನಡೆಸಲು ಉದ್ದೇಶಿಸಿದ್ದ ಮುಷ್ಕರದಿಂದ ಹಿಂದೆ ಸರಿದು ಕರ್ತವ್ಯಕ್ಕೆ ಹಾಜರಾಗುವುದಾಗಿ ಸ್ಪಷ್ಟಪಡಿಸಿದ್ದಾರೆ.

ಮಾರ್ಚ್ 21 ರಂದು ನಾಲ್ಕು ನಿಗಮಗಳ ಸಾರಿಗೆ ನೌಕರರ ಮುಷ್ಕರಕ್ಕೆ ಕರೆ ನೀಡಿದ್ದ ಅನಂತ ಸುಬ್ಬರಾವ್ ನೇತೃತ್ವದ ಜಂಟಿ ಕ್ರಿಯಾ ಸಮಿತಿ ಮುಷ್ಕರ ವಾಪಸ್ ಪಡೆದುಕೊಂಡಿದ್ದು, ಇದಕ್ಕೆ ಸಾರಿಗೆ ನೌಕರರ ಸಂಘದ ಸಮಾನ ಮನಸ್ಕರ ವೇದಿಕೆ ವಿರೋಧ ವ್ಯಕ್ತಪಡಿಸಿದೆ.

ನಮ್ಮ ಬೇಡಿಕೆ ಸಂಪೂರ್ಣವಾಗಿ ಈಡೇರಿಲ್ಲ. ಹೀಗಾಗಿ 21ರಂದು ನಾವು ಪ್ರತಿಭಟನೆಯನ್ನು ಮುಂದುವರೆಸಿಯೇ ತೀರುತ್ತೇವೆ. ಯಾವುದೇ ಕಾರಣಕ್ಕೂ ಮುಷ್ಕರದಿಂದ ಹಿಂದೆ ಸರಿಯುವುದಿಲ್ಲ ಎಂದು ಪಟ್ಟು ಹಿಡಿದಿದೆ.
ಇದರ ಪರಿಣಾಮ ಮಂಗಳವಾರದಿಂದ ಸಾರಿಗೆ ಮುಷ್ಕರ ಸ್ಥಗಿತವಾಗುತ್ತದೆಯೋ ಇಲ್ಲವೇ ಯಥಾಸ್ಥಿತಿ ಮುಂದುವರೆಯಲಿದೆಯೇ ಎಂಬ ಗೊಂದಲ ಪ್ರಯಾಣಿಕರನ್ನು ಕಾಡುತ್ತಿದೆ.

ಪಾಕಿಸ್ತಾನದಲ್ಲಿ ಇಮ್ರಾನ್‍ಖಾನ್ ಪಕ್ಷವನ್ನೇ ನಿಷೇಧಿಸಲು ಚರ್ಚೆ

ಮುಷ್ಕರ ವಾಪಸ್ ಪಡೆದಿರುವ ಬಗ್ಗೆ ಕೆಎಸ್‍ಆರ್‍ಸಿಟಿ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾಸಮಿತಿ ಸ್ಪಷ್ಟನೆ ನೀಡಿದೆ. ಆದರೆ ಇದಕ್ಕೆ ಸಾರಿಗೆ ನೌಕರರ ಸಂಘದ ಸಮಾನ ಮನಸ್ಕರ ವೇದಿಕೆ ಅಧ್ಯಕ್ಷ ಚಂದ್ರು ಆಕ್ಷೇಪ ವ್ಯಕ್ತಪಡಿಸಿದ್ದು, ಮಾ.24ರಂದು ಮುಷ್ಕರ ನಡೆಸಲಾಗುವುದು ಎಂದು ಸ್ಪಷ್ಟಪಡಿಸಿದ್ದಾರೆ.

ಜಂಟಿ ಕ್ರಿಯಾಸಮಿತಿ ಶೇ.20 ರಷ್ಟು ವೇತನ ಹೆಚ್ಚಿಸುವಂತೆ ಒತ್ತಾಯಿಸಿತ್ತು. ಆದರೆ ಶುಕ್ರವಾರ ರಾಜ್ಯ ಸರ್ಕಾರ ಶೇ.15 ರಷ್ಟು ವೇತನ ಹೆಚ್ಚಿಸಿ ಆದೇಶ ಹೊರಡಿಸಿತ್ತು. ವೇತನ ಹೆಚ್ಚಿಸುವ ಭರವಸೆ ಜೊತೆಗೆ ಈ ಹಿಂದಿನ ಎರಡು ಸಾರಿಗೆ ಮುಷ್ಕರದ ವೇಳೆ ವಜಾಗೊಂಡಿದ್ದ ನೌಕರರನ್ನ ಮರುನೇಮಕ ಮಾಡಿಕೊಳ್ಳುವುದು ಹಾಗೂ 3 ವರ್ಷದ ವೇತನ ಬಡ್ತಿ ಹೆಚ್ಚಳಕ್ಕೂ ಸಮ್ಮತಿ ನೀಡಿತ್ತು.

ಈ ಹಿನ್ನೆಲೆಯಲ್ಲಿ ಕೆಎಸ್‍ಆರ್‍ಟಿಸಿ ಎಂಡಿ ಅನ್ಬುಕುಮಾರ್ ಜೊತೆಗೆ ನಡೆದ ಸಾರಿಗೆ ಮುಖಂಡರ ಸಭೆಯಲ್ಲಿ ಮುಷ್ಕರ ವಾಪಸ್ ಪಡೆಯಲು ನಿರ್ಧರಿಸಿದ್ದಾರೆ.

ಬುಧವಾರ ಯುಗಾದಿ ಹಬ್ಬ ಆಗಿರುವುದರಿಂದ ಬಹುತೇಕರು ಕುಟುಂಬ ಸಮೇತ ತಮ್ಮ ತಮ್ಮ ಸ್ವಗ್ರಾಮಗಳಿಗೆ ತೆರಳುತ್ತಾರೆ. ಇಂಥ ಸಂದರ್ಭದಲ್ಲಿ ಸಾರಿಗೆ ನೌಕರರು ಮುಷ್ಕರ ನಡೆಸಿದರೆ ಸಹಜವಾಗಿ ಬಸ್‍ಗಳ ಸಂಚಾರದಲ್ಲಿ ವ್ಯತ್ಯಯ ಉಂಟಾಗಲಿದೆ.

ಇನ್ನು ಕೆಲವರು ಬಸ್‍ಗಳ ಸಂಚಾರದಲ್ಲಿ ತೊಂದರೆ ಉಂಟಾಗಬಹುದೆಂಬ ಕಾರಣಕ್ಕಾಗಿ ಭಾನುವಾರವೇ ಕುಟುಂಬ ಸಮೇತರಾಗಿ ಗ್ರಾಮಗಳತ್ತ ಮುಖ ಮಾಡಿದ್ದಾರೆ. ಕೊನೆ ಕ್ಷಣದಲ್ಲಿ ಮುಷ್ಕರ ಪ್ರಾರಂಭವಾದರೆ ಒಂದಕ್ಕಿಂತ ಮೂರರಿಂದ ನಾಲ್ಕು ಪಟ್ಟು ದರ ನೀಡಿ ಊರಿಗೆ ತೆರಳಬೇಕಾಗುತ್ತದೆ ಎಂಬ ಕಾರಣಕ್ಕಾಗಿ ಭಾನುವಾರದಿಂದಲೇ ಪ್ರಯಾಣಿಕರು ಊರುಗಳಿಗೆ ತೆರಳುತ್ತಿದ್ದಾರೆ.

ಕೆಂಪೇಗೌಡ ಬಸ್ ನಿಲ್ದಾಣ, ಶಾಂತಿನಗರ, ಯಶವಂತಪುರ, ಸ್ಯಾಟಲೈಟ್ ಸೇರಿದಂತೆ ಬಹುತೇಕ ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರು ಗಿಜಿಗಿಡುತ್ತಿದ್ದ ದೃಶ್ಯ ಸರ್ವೆ ಸಾಮಾನ್ಯವಾಗಿತ್ತು. ಶನಿವಾರ ರಾತ್ರಿ 8 ಸಾರಿಗೆ ನೌಕರರ ಸಂಘಟನೆಗಳ ಜೊತೆ ಕೆಎಸ್‍ಆರ್‍ಟಿಸಿ ವ್ಯವಸ್ಥಾಪಕ ನಿರ್ದೇಶಕ ಅನ್ಬುಕುಮಾರ್ ನಡೆಸಿದ ಮಾತುಕತೆ ಸಫಲವಾಗಿತ್ತು.

20 ವರ್ಷದಿಂದ ಮನೆಯಲ್ಲೇ ಬಂಧಿಯಾಗಿದ್ದ ಅಣ್ಣ-ತಂಗಿಯ ರಕ್ಷಣೆ

ಬೇಡಿಕೆಗಳನ್ನು ಈಡೇರಿಸಲು ಸರ್ಕಾರ ಸಮ್ಮತಿಸಿದ ಪರಿಣಾಮ ಮಾ.21ಕ್ಕೆ ಎಂಟು ಟ್ರೇಡ್ ಯೂನಿಯನ್‍ಗಳು ಕರೆ ಕೊಟ್ಟಿದ್ದ ಮುಷ್ಕರವನ್ನು ವಾಪಸ್ ಪಡೆಯಲಾಗಿತ್ತು. ಈ ಕುರಿತು ಮಾತನಾಡಿರುವ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನೌಕರರ ಕೂಟದ ಅಧ್ಯಕ್ಷ ಚಂದ್ರಶೇಖರ್, ಸರ್ಕಾರ ಹೊರಡಿಸಿದ ಆದೇಶದಲ್ಲಿ ಬೇಡಿಕೆ ಈಡೇರಿಲ್ಲ. ಅರಿಯರ್ಸ್, ವೇತನ ಹೆಚ್ಚಳ ವಿಚಾರವಾಗಿ ಗೊಂದಲ ಇತ್ತು.

ಶೇ.15 ಏರಿಕೆ ಮಾಡಿದ ಕೂಡಲೇ ಜಂಟಿ ಕ್ರಿಯಾ ಸಮಿತಿ ಯಾವುದೇ ಕಾನೂನಡಿ ಪ್ರಕ್ರಿಯೆಗಳನ್ನು ಪಾಲನೆ ಮಾಡದೇ ಮುಷ್ಕರ ವಾಪಸ್ ಪಡೆದಿದ್ದಾರೆ. ಇವರ ನಡೆ ನೋಡಿದರೆ 24ರ ಮುಷ್ಕರ ದಾರಿ ತಪ್ಪಿಸುವ ಹುನ್ನಾರ ಎನ್ನಿಸುತ್ತಿದೆ ಎಂದು ಹೇಳಿದ್ದಾರೆ.

ಭಾರತ-ಬಾಂಗ್ಲಾ ನಡುವೆ ರೈಲ್ವೆ ಮಾರ್ಗ ಕಾಮಗಾರಿ ಚುರುಕುಗೊಳಿಸಲು ಕ್ರಮ

ಇವರು ಸರ್ಕಾರದ ಜೊತೆ ಏನು ಮಾತುಕತೆ ನಡೆಸಿದ್ದಾರೋ ಗೊತ್ತಿಲ್ಲ. ಸರ್ಕಾರದ ಆದೇಶ ಪ್ರತಿ ಬರುವ ತನಕ ನಾವು ಕಾದು ನೋಡುತ್ತೇವೆ. ಒಂದೊಮ್ಮೆ ಆದೇಶದಲ್ಲಿ ನಮ್ಮ ಬೇಡಿಕೆ ಈಡೇರಿಕೆ ಬಗ್ಗೆ ಸ್ಪಷ್ಟತೆ ಇದ್ದರೆ, ಮುಷ್ಕರ ವಾಪಸ್ ಪಡೆಯುತ್ತೇವೆ. ಇಲ್ಲದಿದ್ದರೇ ಯಾವುದೇ ಕಾರಣಕ್ಕೂ ಮುಷ್ಕರ ವಾಪಸ್ ಪಡೆಯುವ ಮಾತೇ ಇಲ್ಲ. ಮಾರ್ಚ್ 24 ರಂದು ಸಾರಿಗೆ ನೌಕರರ ಮುಷ್ಕರ ಮಾಡುತ್ತೇವೆ ಎಂದು ತಿಳಿಸಿದ್ದಾರೆ.

Transport, workers, strike, KSRTC,

Articles You Might Like

Share This Article