ಬೆಂಗಳೂರು,ಫೆ.20- ಏಳನೇ ವೇತನ ಆಯೋಗ ರಚನೆ ಸೇರಿದಂತೆ ತಮ್ಮ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಮತ್ತೆ ಬೃಹತ್ ಪ್ರತಿಭಟನೆ ನಡೆಸಲು ಸಾರಿಗೆ ನೌಕರರು ತೀರ್ಮಾನಿಸಿದ್ದಾರೆ. ಬಜೆಟ್‍ನಲ್ಲಿ ನಮ್ಮ ಬೇಡಿಕೆ ಈಡೇರಿಕೆಗೆ ಮನ್ನಣೆ ನೀಡುವ ವಿಶ್ವಾಸ ಹೊಂದಿದ್ದ ಸಾರಿಗೆ ನೌಕರು ಬಜೆಟ್‍ನಲ್ಲಿ ಬೇಡಿಕೆ ಈಡೇರಿಸದಿರುವುದರಿಂದ ಕೆರಳಿ ಕೆಂಡವಾಗಿರುವ ಸಾರಿಗೆ ನೌಕರರು ಮತ್ತೆ ಪ್ರತಿಭಟನೆ ನಡೆಸಲು ನಿರ್ಧರಿಸಿದ್ದಾರೆ.
2021ರಲ್ಲಿ ನಡೆಸಿದ್ದ ಬೃಹತ್ ಪ್ರತಿಭಟನೆ ಮಾದರಿಯಲ್ಲೇ ಮಾ.1 ರಿಂದ ಬೃಹತ್ ಪ್ರತಿಭಟನೆ ನಡೆಸಲು ತೀರ್ಮಾನಿಸಿರುವುದರಿಂದ ಚುನಾವಣಾ ಕಾಲದ ಸಂದರ್ಭದಲ್ಲಿ ಸರ್ಕಾರಕ್ಕೆ ಸಾರಿಗೆ ನೌಕರರು ಬಿಸಿ ತುಪ್ಪವಾಗಿ ಪರಿಣಮಿಸಿದ್ದಾರೆ.
ಕಳಚಿತು ಕನ್ನಡ ಚಿತ್ರರಂಗದ ಮತ್ತೊಂದು ಕೊಂಡಿ, ಎಸ್.ಕೆ.ಭಗವಾನ್ ಇನ್ನಿಲ್ಲ
ತಮ್ಮ ಪ್ರಮುಖ ಬೇಡಿಕೆಗಳೊಂದಿಗೆ ಮತ್ತೆ ಬೀದಿಗಿಳಿಯಲು ನಿರ್ಧರಿಸಿರುವ ಸಾರಿಗೆ ನೌಕರರು ಈ ಬಾರಿ ತಮ್ಮ ಕುಟುಂಬ ಸದಸ್ಯರನ್ನು ಪ್ರತಿಭಟನೆಗೆ ಕರೆ ತರುವ ಸಾಧ್ಯತೆಗಳಿವೆ ಎನ್ನಲಾಗಿದೆ.
ಛತ್ತೀಸ್‍ಗಢ ಕಾಂಗ್ರೆಸ್ ನಾಯಕರ ಮನೆಗಳ ಮೇಲೆ ಇಡಿ ದಾಳಿ
ಬೇಡಿಕೆಗಳೇನು?
ಮುಷ್ಕರದ ಸಮಯದಲ್ಲಿ ಆಗಿರುವ ಎಲ್ಲ ಸಮಸ್ಯೆಗಳನ್ನು ನಿವಾರಣೆ ಮಾಡಿ. ಸರ್ಕಾರ ನೀಡಿರುವ ಲಿಖಿತ ಭರವಸೆಯಂತೆ ಸಾರಿಗೆ ನೌಕರರಿಗೂ ವೇತನ ಆಯೋಗದ ಮಾದರಿಯಲ್ಲಿ, ಸರ್ಕಾರಿ ನೌಕರರ ಸರಿ ಸಮಾನ ವೇತನ ನೀಡಬೇಕು, ಕಾರ್ಮಿಕ ಸಂಘಟನೆಗಳ ಚುನಾವಣೆ ನಡೆಸಬೇಕು, ಸಾರಿಗೆ ಸಂಸ್ಥೆಯನ್ನು ಖಾಸಗೀಕರಣ ಮಾಡುವ ಯೋಜನೆ ಕೈಬಿಡಬೇಕು ಎನ್ನುವುದು ಸಾರಿಗೆ ನೌಕರರ ಪ್ರಮುಖ ಬೇಡಿಕೆಗಳಾಗಿವೆ.
Transport, Workers, Union protest, ksrtc, bmtc