Thursday, September 19, 2024
Homeರಾಷ್ಟ್ರೀಯ | Nationalಛತ್ತೀಸ್‌‍ಗಢದಲ್ಲಿ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ

ಛತ್ತೀಸ್‌‍ಗಢದಲ್ಲಿ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ

ಇಡಿ ದೇಶದಲ್ಲೇ ಸಂಚಲನ ಸೃಷ್ಟಿಸಿರುವ ಆರ್‌ಜಿಕರ್‌ ಆಸ್ಪತ್ರೆಯಲ್ಲಿ ನಡೆದ ವೈದ್ಯೆ ಮೇಲಿನ ಅತ್ಯಾಚಾರ ಮತ್ತು ಹತ್ಯೆಯ ನಂತರವೂ ದೇಶದಲ್ಲಿ ಅತ್ಯಾಚಾರ ಪ್ರಕರಣಗಳು ಹೆಚ್ಚಾಗುತ್ತಲೆ ಇವೆ.

ರಾಯ್‌ಗಢ,ಆ.21- ಇಡಿ ದೇಶದಲ್ಲೇ ಸಂಚಲನ ಸೃಷ್ಟಿಸಿರುವ ಆರ್‌ಜಿಕರ್‌ ಆಸ್ಪತ್ರೆಯಲ್ಲಿ ನಡೆದ ವೈದ್ಯೆ ಮೇಲಿನ ಅತ್ಯಾಚಾರ ಮತ್ತು ಹತ್ಯೆಯ ನಂತರವೂ ದೇಶದಲ್ಲಿ ಅತ್ಯಾಚಾರ ಪ್ರಕರಣಗಳು ಹೆಚ್ಚಾಗುತ್ತಲೆ ಇವೆ. ಛತ್ತೀಸ್‌‍ಗಢದ ರಾಯಗಢ ಜಿಲ್ಲೆಯಲ್ಲಿ 27 ವರ್ಷದ ಬುಡಕಟ್ಟು ಮಹಿಳೆ ಮೇಲೆ ಆರು ಮಂದಿ ಅತ್ಯಾಚಾರವೆಸಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಪುಸೌರ್‌ ಪೊಲೀಸ್‌‍ ಠಾಣೆ ವ್ಯಾಪ್ತಿಯ ಗ್ರಾಮದಲ್ಲಿ ಮಹಿಳೆ ರಕ್ಷಾಬಂಧನ ಹಬ್ಬವನ್ನು ಆಚರಿಸಿದ ನಂತರ ಸ್ಥಳೀಯ ಜಾತ್ರೆಗೆ ಭೇಟಿ ನೀಡಲು ತೆರಳುತ್ತಿದ್ದಾಗ ಈ ಘಟನೆ ನಡೆದಿದೆ.ಈ ಸಂಬಂಧ ಮಂಗಳವಾರ ಮಹಿಳೆ ದೂರು ನೀಡಿದ್ದು, ಪೊಲೀಸರು ಎಫ್‌ಐಆರ್‌ ದಾಖಲಿಸಿಕೊಂಡು ಕ್ರಮ ಕೈಗೊಂಡಿದ್ದಾರೆ ಎಂದು ಅವರು ಹೇಳಿದರು.

ದೂರಿನ ಪ್ರಕಾರ, ಕೆಲವು ವ್ಯಕ್ತಿಗಳು ಆಕೆಯನ್ನು ಅಡ್ಡಗಟ್ಟಿ ಬಲವಂತವಾಗಿ ಹತ್ತಿರದ ಕೊಳದ ದಡಕ್ಕೆ ಕರೆದೊಯ್ದು ಅತ್ಯಾಚಾರವೆಸಗಿದ್ದಾರೆ ಎಂದು ಅವರು ಹೇಳಿದ್ದಾರೆ. ಸಂತ್ರಸ್ತೆಯ ದೂರಿನ ಆಧಾರದ ಮೇಲೆ, ಇದುವರೆಗೆ ಆರು ಆರೋಪಿಗಳನ್ನು ಬಂಧಿಸಲಾಗಿದೆ ಮತ್ತು ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.

ಆರೋಪಿಗಳ ವಿರುದ್ಧ ಭಾರತೀಯ ನ್ಯಾಯ ಸಂಹಿತೆಯ ಸೆಕ್ಷನ್‌ 70(1) ಮತ್ತು 351(2) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಅವರು ಹೇಳಿದರು.ಛತ್ತೀಸ್‌‍ಗಢದ ಮಾಜಿ ಮುಖ್ಯಮಂತ್ರಿ ಭೂಪೇಶ್‌ ಬಘೇಲ್‌ ಅವರು ಘಟನೆಯನ್ನು ಅತ್ಯಂತ ಗಂಭೀರವಾಗಿದೆ ಮತ್ತು ಎಲ್ಲಾ ಆರೋಪಿಗಳನ್ನು ತಕ್ಷಣ ಬಂಧಿಸಬೇಕೆಂದು ಒತ್ತಾಯಿಸಿದ್ದಾರೆ.

ರಾಯಗಢ್‌ನ ಪುಸೌರ್‌ ಪ್ರದೇಶದಲ್ಲಿ ನಡೆದ ಅತ್ಯಾಚಾರ ಘಟನೆಯು ತುಂಬಾ ಗಂಭೀರವಾಗಿದೆ. ತಪ್ಪಿತಸ್ಥರನ್ನು ತಕ್ಷಣವೇ ಬಂಧಿಸಬೇಕು ಮತ್ತು ಆರೋಪಿಗಳಿಗೆ ಶಿಕ್ಷೆಯಾಗುವವರೆಗೆ ಸಂತ್ರಸ್ತೆಗೆ ರಕ್ಷಣೆ ನೀಡಬೇಕು. ಸಂತ್ರಸ್ತೆಗೆ ಸಾಧ್ಯವಿರುವ ಎಲ್ಲ ಸಹಾಯವನ್ನು ನೀಡಬೇಕು ಎಂದು ಬಘೇಲ್‌ ಎಕ್‌್ಸ ಮಾಡಿದ್ದಾರೆ.

RELATED ARTICLES

Latest News