Friday, February 14, 2025
Homeರಾಜ್ಯಎಂ.ಎಸ್‌‍.ಕೃಷ್ಣ ಅವರ ನಿಧನಕ್ಕೆ ವಿಧಾನಸಭೆಯಲ್ಲಿ ಶ್ರದ್ದಾಂಜಲಿ ಸಲ್ಲಿಕೆ

ಎಂ.ಎಸ್‌‍.ಕೃಷ್ಣ ಅವರ ನಿಧನಕ್ಕೆ ವಿಧಾನಸಭೆಯಲ್ಲಿ ಶ್ರದ್ದಾಂಜಲಿ ಸಲ್ಲಿಕೆ

Tributes paid to M.S.Krishna in the Assembly

ಬೆಳಗಾವಿ,ಡಿ.10- ರಾಜ್ಯದ ಮಾಜಿ ಮುಖ್ಯಮಂತ್ರಿ, ಮಾಜಿ ಕೇಂದ್ರ ಸಚಿವ ಹಾಗೂ ಮಾಜಿ ರಾಜ್ಯಪಾಲರಾದ ಎಂ.ಎಸ್‌‍.ಕೃಷ್ಣ ಅವರ ನಿಧನಕ್ಕೆ ಇಂದು ವಿಧಾನಸಭೆಯಲ್ಲಿಂದು ಭಾವಪೂರ್ಣ ಶ್ರದ್ದಾಂಜಲಿ ಸಲ್ಲಿಸಲಾಯಿತು.

ಇಂದು ಬೆಳಗ್ಗೆ ಸದನ ಸಮಾವೇಶಗೊಂಡಾಗ ಸಭಾಧ್ಯಕ್ಷರಾದ ಯು.ಟಿ.ಖಾದರ್‌ ಅವರು ಸಂತಾಪ ಸೂಚನ ನಿರ್ಣಯವನ್ನು ಮಂಡಿಸಿ ರಾಜ್ಯದ ಮಾಜಿ ಮುಖ್ಯಮಂತ್ರಿ ಎಸ್‌‍.ಎಂ.ಕೃಷ್ಣ ಅವರು ಇಂದು ನಸುಕಿನ ಜಾವ ನಿಧನ ಹೊಂದಿದ್ದಾರೆ ಎಂದು ಸದನಕ್ಕೆ ಅತ್ಯಂತ ವಿಷಾದದಿಂದ ತಿಳಿಸಿದರು.

ಎಸ್‌‍.ಎಂ.ಕೃಷ್ಣ ಅವರು 1932ರ ಮೇ 1ರಂದು ಮದ್ದೂರು ತಾಲ್ಲೂಕಿನ ಸೋಮನಹಳ್ಳಿಯಲ್ಲಿ ಜನಿಸಿದ್ದರು. ಬಿಎ, ಬಿ.ಎಲ್‌ ಪದವಿ ಪಡೆದಿದ್ದ ಅವರು ನಂತರ ಟೆಕ್ಸಾಸ್‌‍ನಲ್ಲಿ ಎಂಸಿಎಲ್‌ ಪದವಿ, ವಾಷಿಂಗ್ಟನ್‌ ವಿವಿಯ ಲಾ ಸ್ಕೂಲ್‌ನಿಂದಲೂ ಪದವಿ ಪಡೆದಿದ್ದರು. ವೃತ್ತಿಯಲ್ಲಿ ವಕೀಲರಾಗಿದ್ದ ಎಸ್‌‍.ಎಂ.ಕೃಷ್ಣ ಅವರು ಕಾನೂನು ಕಾಲೇಜಿನಲ್ಲಿ ಪ್ರಾಧ್ಯಾಪಕರಾಗಿಯೂ ಕಾರ್ಯ ನಿರ್ವಹಿಸಿದ್ದರು. ನಂತರ 1962ರಲ್ಲಿ ಮೊದಲ ಬಾರಿಗೆ ವಿಧಾನಸಭೆಗೆ ಆಯ್ಕೆಯಾಗಿದ್ದ ಅವರು 1989ರಲ್ಲಿ , 1999ರಲ್ಲಿ ಹಾಗೂ 2004ರಲ್ಲಿ ವಿಧಾನಸಭೆಗೆ ಆಯ್ಕೆಯಾಗಿದ್ದರು.

1968, 1971 ಹಾಗೂ 1980ರಲ್ಲಿ ಲೋಕಸಭೆಗೆ ಚುನಾಯಿತರಾಗಿದ್ದರು. 1972ರಲ್ಲಿ ವಿಧಾನಪರಿಷತ್‌ ಸದಸ್ಯರಾಗಿ ಆಯ್ಕೆಗೊಂಡಿದ್ದ ಅವರು, 1996ರಿಂದ 1999 ಮತ್ತು 2008ರಿಂದ 2014ರ ಅವಧಿಯಲ್ಲಿ ರಾಜ್ಯಸಭಾ ಸದಸ್ಯರಾಗಿಯೂ ಸೇವೆ ಸಲ್ಲಿಸಿದ್ದರು ಎಂದು ಗುಣಗಾನ ಮಾಡಿದರು.

ಅಲ್ಲದೆ ಎಸ್‌‍.ಎಂ.ಕೃಷ್ಣ ಅವರು ವಿಧಾನಸಭೆಯ ಸಭಾಧ್ಯಕ್ಷರಾಗಿ ಕೈಗಾರಿಕೆ, ವಾಣಿಜ್ಯ ಮತ್ತು ಸಂಸದೀಯ ವ್ಯವಹಾರಗಳ ಸಚಿವರಾಗಿ ಉಪಮುಖ್ಯಮಂತ್ರಿಯಾಗಿ, ನಂತರ ರಾಜ್ಯದ 10ನೇ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದ್ದರು.

ಕೇಂದ್ರ ಕೈಗಾರಿಕೆ ರಾಜ್ಯ ಸಚಿವರಾಗಿ, ಹಣಕಾಸು ಖಾತೆಯ ರಾಜ್ಯ ಸಚಿವರಾಗಿ, ವಿದೇಶಾಂಗ ವ್ಯವಹಾರಗಳ ಸಚಿವರಾಗಿ ಕಾರ್ಯ ನಿರ್ವಹಿಸಿದ್ದ ಅವರು 2008ರಲ್ಲಿ ಮಹಾರಾಷ್ಟ್ರದ 18ನೇ ರಾಜ್ಯಪಾಲರಾಗಿ ನೇಮಕಗೊಂಡಿದ್ದರು ಎಂದು ಸರಿಸಿದರು.
ರಾಜ್ಯದ ಸರ್ವೋತ್ತೋಮುಖ ಅಭಿವೃದ್ಧಿಯ ಕನಸು ಕಂಡಿದ್ದ ಕೃಷ್ಣ ಅವರು ಭೂದಾಖಲೆಯನ್ನು ಡಿಜಿಟಲೀಕರಣಗೊಳಿಸುವ, ಸರ್ಕಾರಿ ಮಕ್ಕಳಿಗೆ ಬಿಸಿಯೂಟ ಯೋಜನೆ, ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ, ಬೆಂಗಳೂರು-ಮೈಸೂರು ಹೆದ್ದಾರಿ ಯೋಜನೆ ಸೇರಿದಂತೆ ಹತ್ತು ಹಲವು ಅಭಿವೃದ್ಧಿ ಯೋಜನೆಗಳನ್ನು ಜಾರಿಗೆ ತಂದಿದ್ದರು.

ಮಾಹಿತಿ ಮತ್ತು ತಂತ್ರಜ್ಞಾನಕ್ಕೆ ಹೆಚ್ಚು ಒತ್ತು ಕೊಟ್ಟಿದ್ದ ಅವರು ರಾಜ್ಯದಲ್ಲೇ ಐಟಿಬಿಟಿ ಕ್ರಾಂತಿಯನ್ನೇ ಮಾಡಿದ್ದರು. ಬೆಂಗಳೂರನ್ನು ಸಿಲಿಕಾನ್‌ ಸಿಟಿಯಾಗಿಸಿ ಸಿಂಗಾಪುರ ಮಾದರಿಯಲ್ಲಿ ಅಭಿವೃದ್ಧಿಪಡಿಸುವ ಮಹತ್ವಾಕಾಂಕ್ಷೆ ಹೊಂದಿದ್ದರು.

ಎಸ್‌‍.ಎಂ.ಕೃಷ್ಣ ಅವರು ಅತ್ಯುತ್ತಮ ಆಡಳಿತಗಾರರಾಗಿದ್ದರು. ಎಂತಹ ಕಠಿಣ ಪರಿಸ್ಥಿತಿಯಲ್ಲೂ ಎದೆಗುಂದದ ಅವರು ವರನಟ ಡಾ.ರಾಜ್‌ಕುಮಾರ್‌ ಅವರನ್ನು ಕಾಡುಗಳ್ಳ ವೀರಪ್ಪನ್‌ ಅಪಹರಿಸಿದ ಸಂದರ್ಭದಲ್ಲಿ ಪರಿಸ್ಥಿತಿಯನ್ನು ನಿಭಾಯಿಸಿದ ರೀತಿ ಅಪ್ರತಿಮವಾದುದು. ತೀವ್ರತರವಾದ ಬರಗಾಲದ ಸಂದರ್ಭದಲ್ಲಿ ಅಚ್ಚುಕಟ್ಟಾಗಿ ನಿಭಾಯಿಸಿದ್ದರು. ಅಭಿವೃದ್ಧಿಯ ಚಿಂತಕರಾಗಿದ್ದ ಅವರು ರಾಜ್ಯಕ್ಕೆ ನೀಡಿರುವ ಕೊಡುಗೆ ಅಪಾರವಾದುದು. ಬಹುಮುಖ ಪ್ರತಿಭೆಯಾಗಿದ್ದ ಅವರಿಗೆ 2023ರಲ್ಲಿ ಪದವಿಭೂಷಣ ಪ್ರಶಸ್ತಿಯನ್ನು ಪ್ರದಾನ ಮಾಡಿ ಗೌರವಿಸಲಾಗಿತ್ತು.

ಅಪ್ರತಿಮ ವಾಗಿ, ಸಜ್ಜನಿಕೆಯ ಎಸ್‌‍.ಎಂ.ಕೃಷ್ಣ ಅವರು ನಿಧನರಾಗಿದ್ದಾರೆ. ನಾನು ಹುಟ್ಟುವ ಮ್ನುನವೇ ಕೃಷ್ಣ ಅವರು ಶಾಸಕರಾಗಿದ್ದರು. ಪ್ರತಿಯೊಂದು ಸಾವು ಸಂದೇಶವನ್ನು ಕೊಡುತ್ತದೆ. ಕೃಷ್ಣ ಅವರ ಅಗಲಿಕೆಯೂ ಒಂದು ಸಂದೇಶವನ್ನು ನೀಡಿದೆ. ನಕರಾತಕ ಚಿಂತನೆ ಅವರಲ್ಲಿ ಇರಲಿಲ್ಲ. ರಾಜಕೀಯ ದ್ವೇಷದ ಮಾತು ಕೂಡ ಅವರಲ್ಲಿ ಇರಲಿಲ್ಲ. ಅವರ ವ್ಯಕ್ತಿತ್ವ, ಜೀವನ ಯುವ ರಾಜಕಾರಣಿಗಳಿಗೆ ಉತ್ತಮ ಸಂದೇಶವಾಗಿದೆ. ಉತ್ತಮ ಮುತ್ಸದ್ಧಿ ರಾಜಕಾರಣಿಯಾಗಿದ್ದ ಅವರು ನಮೆಲ್ಲರಿಗೂ ಮಾದರಿಯಾಗಿದ್ದಾರೆ ಎಂದು ತಿಳಿಸಿದರು.

ಗ್ರಾಮೀಣ ಮಕ್ಕಳಿಗೆ ಕಂಪ್ಯೂಟರ್‌ ಶಿಕ್ಷಣ ದೊರೆಯಲು ತಾಲೂಕು ಮಟ್ಟದಲ್ಲಿ ಕಂಪ್ಯೂಟರ್‌ ಕೇಂದ್ರಗಳನ್ನು ಪ್ರಾರಂಭಿಸಿದರು. ಬೆಂಗಳೂರು ಅಭಿವೃದ್ಧಿ ಮೂಲಕ ಕರ್ನಾಟಕವನ್ನು ರಾಷ್ಟ್ರ ಮಟ್ಟದಲ್ಲಿ ಗುರುತಿಸುವ ರೀತಿಯಲ್ಲಿ ಮುನ್ನಡೆಸಿದರು. ಅವರ ಕೊಡುಗೆ ಅಪಾರವಾದುದು. ಅವರೊಬ್ಬ ಮಹಾನ್‌ ಚೇತನ ಎಂದು ಗುಣಗಾನ ಮಾಡಿದರು.

ಹುಟ್ಟುವಾಗ ಉಸಿರು ಇರುತ್ತದೆ. ದೇಹ ಬಿಟ್ಟು ಹೋಗುವಾಗ ಉಸಿರು ಇರುವುದಿಲ್ಲ. ಹೆಸರು ಮಾತ್ರ ಇರುತ್ತದೆ. ಶಾಶ್ವತವಾದ ದೊಡ್ಡ ಮಟ್ಟದ ಹೆಸರು ಅವರು ಪಡೆದಿದ್ದಾರೆ. ಅವರ ಆತಕ್ಕೆ ಶಾಂತಿ ಸಿಗಲಿ, ಅವರ ಕುಟುಂಬ ವರ್ಗದವರಿಗೆ ಅಗಲಿಕೆಯ ನೋವು ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಮಾತನಾಡಿ, ಎಸ್‌‍.ಎಂ.ಕೃಷ್ಣ ಅವರು, ಮುತ್ಸದ್ದಿ, ದೂರದೃಷ್ಟಿ ಉಳ್ಳವರಾಗಿದ್ದರು. ದೀರ್ಘಕಾಲ ರಾಜಕಾರಣ ಮಾಡಿದ್ದರು. ನಾನು ವಿದ್ಯಾರ್ಥಿ ಆಗಿದ್ದಾಗ ಎಸ್‌‍.ಎಂ.ಕೃಷ್ಣ ಅವರು ಕರೆದಿದ್ದ ಪ್ರಜಾ ಸೋಷಿಯಲಿಸ್ಟ್‌ ಪಾರ್ಟಿಯ ಸಭೆಯಲ್ಲಿ ಭಾಗವಹಿಸಿದ್ದೆ. ಬಳಿಕ ನಾನು ಲೋಹಿಯಾ ಅವರ ಸಮಾಜವಾದಿ ಪಕ್ಷ ಸೇರ್ಪಡೆಯಾದೆ ಎಂದರು.
ಎಸ್‌‍.ಎಂ.ಕೃಷ್ಣ ಅವರು 1962ರಲ್ಲೇ ಸ್ವತಂತ್ರವಾಗಿ ವಿಧಾನಸಭೆಗೆ ಸ್ಪರ್ಧಿಸಿದ್ದರು.

ವಿಧಾನಸಭೆ, ವಿಧಾನ ಪರಿಷತ್‌, ರಾಜ್ಯಸಭೆ, ಲೋಕಸಭೆ ನಾಲ್ಕೂ ಸದನಗಳ ಸದಸ್ಯರೂ ಆಗಿದ್ದು, ರಾಜ್ಯದ ಮುಖ್ಯಮಂತ್ರಿ, ವಿಧಾನಸಭೆ ಸ್ಪೀಕರ್‌, ಕೇಂದ್ರ ಸಚಿವರು ಹಾಗೂ ರಾಜ್ಯಪಾಲರೂ ಆಗಿದ್ದ ಅಪರೂಪದ ರಾಜಕಾರಣಿ ಎಂದು ಬಣ್ಣಿಸಿದರು.

ಎಸ್‌‍.ಎಂ.ಕೃಷ್ಣ ಅವರು ಮಹಾರಾಷ್ಟ್ರ ರಾಜ್ಯಪಾಲರಾಗಿದ್ದಾಗಲೇ ನಾನು ಕಾಂಗ್ರೆಸ್‌‍ ಸೇರಿದ್ದು. ಅವರು ರಾಜ್ಯಪಾಲರಾಗಿದ್ದಾಗ ನಾನು ಅವರನ್ನು ಭೇಟಿಯಾಗಿ, ನಾನು ಕಾಂಗ್ರೆಸ್‌‍ ಸೇರುವ ತೀರ್ಮಾನವನ್ನು ಅವರಿಗೆ ತಿಳಿಸಿದೆ. ಅವರು ನನ್ನ ತೀರ್ಮಾನವನ್ನು ಸ್ವಾಗತಿಸಿದ್ದರು ಎಂದು ಸರಿಸಿದರು.

ಒಳ್ಳೆ ಸಂಸದೀಯ ಪಟು, ಎಲ್ಲರನ್ನೂ ಗೌರವದಿಂದ ಕಾಣುತ್ತಿದ್ದರು. ಯಾವತ್ತೂ ದ್ವೇಷದ ರಾಜಕಾರಣ ಮಾಡಿದವರಲ್ಲ. ಅವರ ಕಾಲದಲ್ಲೇ ಡಾ.ರಾಜ್‌ ಕುಮಾರ್‌ ಅವರ ಅಪಹರಣ ಆಗಿ ಆ ಸಂದರ್ಭದ ದೊಡ್ಡ ಸವಾಲನ್ನು ಎದುರಿಸಿದ್ದರು. ಅದನ್ನು ನಿಭಾಯಿಸಿದ್ದರು ಎಂದು ಹೇಳಿದರು.

ಬೆಂಗಳೂರನ್ನು ಅಂತಾರಾಷ್ಟ್ರೀಯ ಮಟ್ಟಕ್ಕೆ ಸಿಂಗಾಪುರದಂತೆ ಮಾಡಬೇಕು ಎನ್ನುವ ಉದ್ದೇಶ ಹೊಂದಿದ್ದರು. ಬೆಂಗಳೂರಿಗೆ ಸಿಲಿಕಾನ್‌ ವ್ಯಾಲಿ ಆಫ್‌ ಇಂಡಿಯಾ ಎನ್ನುವ ಹೆಗ್ಗಳಿಕೆ ಬರಲು ಎಸ್‌‍.ಎಂ.ಕೃಷ್ಣ ಅವರ ಕೊಡುಗೆ ಅಪಾರ. ಕಾಂಗ್ರೆಸ್‌‍ ಮೂಲಕ ಸುದೀರ್ಘ ರಾಜಕಾರಣ ಮಾಡಿ ಬಿಜೆಪಿ ಸೇರಿ ಒಂದು ವರ್ಷಕ್ಕೆ ರಾಜಕೀಯ ನಿವೃತ್ತಿ ಘೋಷಿಸಿದ ದಕ್ಷ ಆಡಳಿತಗಾರ, ಸಜ್ಜನ-ಮುತ್ಸದ್ದಿ ರಾಜಕಾರಣಿ ಆಗಿದ್ದರು ಎಂದು ಗುಣಗಾನ ಮಾಡಿದರು.

ವಿರೋಧ ಪಕ್ಷದ ನಾಯಕ ಅಶೋಕ್‌ ಸೇರಿದಂತೆ ಪಕ್ಷ ಬೇಧ ಮರೆತು ಹಲವು ಶಾಸಕರು ಕೃಷ್ಣ ಅವರ ಗುಣಗಾನಮಾಡಿ ತೀವ್ರ ಸಂತಾಪ ಸೂಚಿಸಿದರು.
ಮೃತರ ಗೌರವಾರ್ಥವಾಗಿ ಸದನದಲ್ಲಿ ಎಲ್ಲರೂ ಒಂದು ನಿಮಿಷ ಕಾಲ ಮೌನಾಚರಣೆ ಮಾಡಿ ಸಂತಾಪ ಸೂಚಿಸಿದರು.

RELATED ARTICLES

Latest News