ಬೆಂಗಳೂರು,ಜ.11-ರಾಜಕಾರಣಿಗಳು ಆಯ್ತು ಇದೀಗ ಅಧಿಕಾರಿಗಳಿಗೂ ಕೊರೊನಾ ಸೋಂಕಿನ ಕಾಟ ಶುರುವಾಗಿದೆ. ಬಿಬಿಎಂಪಿ ಆರೋಗ್ಯ ವಿಭಾಗದ ವಿಶೇಷ ಆಯುಕ್ತ ತ್ರಿಲೋಕ್ಚಂದ್ ಅವರಿಗೂ ಕೊರೊನಾ ಪಾಸಿಟಿವ್ ಆಗಿದೆ. ಕೊರೊನಾ ಸೋಂಕು ನಿಯಂತ್ರಣದಲ್ಲಿ ಪ್ರಮುಖ ಪಾತ್ರ ನಿರ್ವಹಿಸುತ್ತಿದ್ದ ತ್ರಿಲೋಕ್ಚಂದ್ ಅವರಿಗೆ ಪಾಸಿಟಿವ್ ಆಗಿರುವುದರಿಂದ ಬಿಬಿಎಂಪಿ ಆರೋಗ್ಯ ವಿಭಾಗದ ಅಧಿಕಾರಿಗಳನ್ನು ಕಂಗೇಡಿಸಿದೆ.
ತ್ರಿಲೋಕ್ ಚಂದ್ ಅವರು ಪ್ರತಿನಿತ್ಯ ವಾರ್ ರೂಮ್ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದು ದಿನಂಪ್ರತಿ ಅಧಿಕಾರಿಗಳ ಜತೆ ಸಭೆ ನಡೆಸುತ್ತಿದ್ದರು. ಹೀಗಾಗಿ ಸಭೆಯಲ್ಲಿ ಪಾಲ್ಗೊಂಡ ಅಧಿಕಾರಿಗಳಿಗೂ ಸೋಂಕು ಹರಡಿರುವ ಭೀತಿ ಎದುರಾಗಿದೆ. ತ್ರಿಲೋಕ್ಚಂದ್ ಅವರು ಖಾಸಗಿ ಆಸ್ಪತ್ರೆಯಲ್ಲಿ ಕ್ವಾರಂಟೈನ್ ಆಗಿದ್ದು. ತಮ್ಮೊಂದಿಗೆ ಸಂಪರ್ಕವಿರಿಸಿಕೊಂಡಿದ್ದವರು ಸ್ವಯಂ ಕ್ವಾರಂಟೈನ್ಗೆ ಒಳಗಾಗುವಂತೆ ಮನವಿ ಮಾಡಿಕೊಂಡಿದ್ದಾರೆ.
