ಕಾಂಗ್ರೆಸ್ ಮುಖಂಡನ ಮೇಲೆ ಹಲ್ಲೆ ಮಾಡಿದ ಪೊಲೀಸ್ ಅಧಿಕಾರಿಗಳ ತಲೆದಂಡ

Social Share

ನವದೆಹಲಿ,ಜ.21- ತ್ರಿಪುರಾದಲ್ಲಿ ಕಾಂಗ್ರೆಸ್ ಮುಖಂಡ ಅಜೋಯ್ ಕುಮಾರ್ ಅವರ ಮೇಲಿನ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಚುನಾವಣಾ ಆಯೋಗವು ಹಲವು ಹಿರಿಯ ಪೊಲೀಸ್ ಅಧಿಕಾರಿಗಳನ್ನು ಸೇವೆಯಿಂದ ಅಮಾನತುಗೊಳಿಸಿದೆ.

ಹಲ್ಲೆ ಪ್ರಕರಣಕ್ಕೆ ಅಸಮಾಧಾನ ವ್ಯಕ್ತಪಡಿಸಿರುವು ಆಯೋಗವು ತನ್ನ ಅಸಮಾಧಾನವನ್ನು ರಾಜ್ಯ ಮುಖ್ಯ ಕಾರ್ಯದರ್ಶಿ ಮತ್ತು ಪೊಲೀಸ್ ಮುಖ್ಯಸ್ಥರಿಗೆ ತಿಳಿಸಿ ಸಾಕಷ್ಟು ಸಂಖ್ಯೆಯ ಕೇಂದ್ರ ಪಡೆಗಳ ಉಪಸ್ಥಿತಿಯ ಹೊರತಾಗಿಯೂ ಪರಿಸ್ಥಿತಿ ಏಕೆ ಉಲ್ಬಣಗೊಂಡಿತು ಎಂಬುದನ್ನು ವಿವರಿಸುವಂತೆ ಕೇಳಿದೆ. ಮಾತ್ರವಲ್ಲ, ಸಕಾಲದಲ್ಲಿ ಸೂಕ್ತ ಕ್ರಮ ಕೈಗೊಳ್ಳದ ಕೆಲವು ಅಧಿಕಾರಿಗಳ ವಿರುದ್ಧವೂ ಕಠಿಣ ಕ್ರಮ ಕೈಗೊಂಡಿದೆ.

ಜಿರಾನಿಯಾ ಉಪವಿಭಾಗ, ಪಶ್ಚಿಮ ತ್ರಿಪುರಾ ಉಪವಿಭಾಗದ ಪೊಲೀಸ್ ಅಧಿಕಾರಿ, ರಾಣಿಬಜಾರ್ ಪೊಲೀಸ್ ಠಾಣೆಯ ಪ್ರಭಾರಿ ಅಧಿಕಾರಿ ಮತ್ತು ಜಿರಾನಿಯಾ ಪೊಲೀಸ್ ಠಾಣೆಯ ಪ್ರಭಾರಿ ಅಧಿಕಾರಿಯನ್ನು ತಕ್ಷಣವೇ ತೆಗೆದುಹಾಕುವಂತೆ ಚುನಾವಣಾ ಆಯೋಗ ಸೂಚಿಸಿದೆ.

ಕುಸ್ತಿ ಫೆಡರೇಷನ್‍ಗೆ ಉಸ್ತುವಾರಿ ಸಮಿತಿ ರಚನೆ : 3 ದಿನಗಳ ಧರಣಿ ಅಂತ್ಯ

ರಾಜ್ಯದ ವಿವಿಧ ರಾಜಕೀಯ ಪಕ್ಷಗಳ ಮುಖಂಡರಿಗೆ ಬಂದಿರುವ ಬೆದರಿಕೆ ಕರೆಗಳನ್ನು ಗಂಭೀರವಾಗಿ ಪರಿಗಣಿಸಬೇಕು. ಹಾಗೂ ಅದಕ್ಕೆ ಅನುಗುಣವಾಗಿ ಭದ್ರತೆಯನ್ನು ಒದಗಿಸುವಂತೆ ಮುಖ್ಯ ಕಾರ್ಯದರ್ಶಿ ಮತ್ತು ಪೊಲೀಸ್ ಮಹಾನಿರ್ದೇಶಕರಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ. ತ್ರಿಪುರಾದಲ್ಲಿ ಫೆಬ್ರವರಿ 16 ರಂದು ಮತದಾನ ನಡೆಯಲಿದ್ದು, ಮಾರ್ಚ್ 2 ರಂದು ಮತ ಎಣಿಕೆ ನಡೆಯಲಿದೆ.

Tripura, Police Officers, Removed, Attack, Congress, Leader, Ajay Kumar,

Articles You Might Like

Share This Article