ಬೆಂಗಳೂರು, ಅ.23– ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಸಾಕ್ಷಿದಾರರಾಗಿರುವವರು ಜೈಲಿನಲ್ಲಿರುವ ಆರೋಪಿ ನಟ ದರ್ಶನ್‌ರನ್ನು ಭೇಟಿ ಮಾಡುತ್ತಿರುವುದು ಪೊಲೀಸರ ಗಮನದಲ್ಲಿದ್ದು, ಈ ಕುರಿತು ಕಾನೂನಾತಕ ಅಂಶಗಳ ಪರಿಶೀಲನೆ ನಡೆಸಲಾಗುತ್ತಿದೆ ಎಂದು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್ ತಿಳಿಸಿದ್ದಾರೆ.
ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರು ಎಫ್‌ಎಸ್‌ಎಲ್‌ನಿಂದ ಎಲ್ಲಾ ವರದಿಗಳು ಬಂದಿವೆ. ಮತ್ತಷ್ಟು ಪೂರಕ ಮಾಹಿತಿಗಳನ್ನು ಪಡೆಯುವ ವಿಚಾರಣಾ ಪ್ರಕ್ರಿಯೆ ನಡೆಯುತ್ತಿದೆ ಎಂದರು.
ವಿದ್ಯುನಾನ (ಎಲೆಕ್ಟ್ರಾನಿಕ್‌್ಸ) ಸಲಕರಣೆಗಳನ್ನು ಹೈದರಾಬಾದ್‌ನ ಸಿಎಫ್‌ಎಸ್‌ಎಲ್‌ಗೆ ಕಳುಹಿಸಲಾಗಿತ್ತು. ಅವುಗಳ ಪರಿಶೀಲನೆ ಮುಗಿದಿದೆ ಎಂಬ ಮಾಹಿತಿ ಇದೆ. ಶೀಘ್ರವೇ ಆ ವರದಿ ನಮ ಕೈ ಸೇರಲಿದೆ. ಎರಡು ವರದಿಗಳನ್ನೂ ಕ್ರೋಢಿಕರಿಸಿ ನ್ಯಾಯಾಲಯಕ್ಕೆ ಅಂತಿಮ ದೋಷಾರೋಪಣಾ ಪಟ್ಟಿ ಸಲ್ಲಿಸಲಾಗುವುದು ಎಂದರು.
ಕೊಲೆ ಪ್ರಕರಣದಲ್ಲಿ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಲು 90 ದಿನಗಳ ಕಾಲಾವಕಾಶ ಇರಲಿದೆ. ಆ ಕಾಲಮಿತಿಯಲ್ಲೇ ನ್ಯಾಯಾಲಯಕ್ಕೆ ಅಂತಿಮ ವರದಿ ಸಲ್ಲಿಸಲಾಗುವುದು ಎಂದು ಸ್ಪಷ್ಟ ಪಡಿಸಿದರು.
ಪ್ರಕರಣದಲ್ಲಿ ಸಾಕ್ಷಿಗಳಾಗಿ ಪರಿಗಣಿಸಿರುವ ಕೆಲವರು ಜೈಲಿಗೆ ಹೋಗಿ ದರ್ಶನ್‌ರನ್ನು ಭೇಟಿ ಮಾಡಿ ಬರುತ್ತಿದ್ದಾರೆ. ಇದು ನಮ ಗಮನದಲ್ಲಿದೆ. ಕಾನೂನಾತಕ ಕ್ರಮಗಳ ಪರಿಶೀಲನೆ ನಡೆಯುತ್ತಿದೆ. ಅವರಿಗೆ ಮತ್ತೆ ನೋಟಿಸ್ ಕೊಟ್ಟು ಕರೆಸುವುದು ಸೇರಿದಂತೆ ಇರುವ ಸಾಧ್ಯಾಸಾಧ್ಯತೆಗಳ ಬಗ್ಗೆ ಸದ್ಯಕ್ಕೆ ಬಹಿರಂಗವಾಗಿ ಮಾಹಿತಿ ನೀಡಲು ಸಾಧ್ಯವಿಲ್ಲ ಎಂದು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು.
ಗೌರಿ ಗಣೇಶ ಹಬ್ಬದ ಪ್ರಯುಕ್ತ ಈಗಾಗಲೇ ಬಿಬಿಎಂಪಿ ಮತ್ತು ಪೊಲೀಸ್ ಇಲಾಖೆಯು ಸಮನ್ವತೆಯಿಂದ ಏಕಗವಾಕ್ಷಿ ಪದ್ಧತಿಯನ್ನು ಜಾರಿಗೆ ತರಲಾಗುತ್ತಿದೆ. ಕಳೆದ ವಾರ ಈ ಕುರಿತು ಸಭೆಗಳನ್ನು ನಡೆಸಲಾಗಿದೆ. ಹಬ್ಬದ ಸಂದರ್ಭದಲ್ಲಿ ಅನುಸರಿಸಬೇಕಾದ ಕ್ರಮಗಳ ಕುರಿತು ಶೀಘ್ರದಲ್ಲಿ ಮಾರ್ಗಸೂಚಿ ಪ್ರಕಟಿಸಲಾಗುವುದು ಎಂದು ತಿಳಿಸಿದ್ದಾರೆ.
ಜಿಲ್ಲಾಧಿಕಾರಿಗಳ ನೇತೃತ್ವದಲ್ಲೂ ಸಭೆ ನಡೆಯಲಿದೆ. ಶಾಂತಿ ಸೌಹಾರ್ಧತೆಯಲ್ಲಿ ಹಬ್ಬ ಆಚರಣೆಗೆ ಗಣೇಶ ಮಂಡಳಿಗಳೊಂದಿಗೆ ಚರ್ಚೆ ನಡೆಸಲಾಗಿದೆ. ಬಿಬಿಎಂಪಿ ಪ್ರತ್ಯೇಕ ಸಭೆ ನಡೆಸಿ ಸಣ್ಣಪುಟ್ಟ ವಿಚಾರಗಳನ್ನು ಬಗೆ ಹರಿಸಲಿದೆ. ಮುಂದಿನ ವಾರ ಹಬ್ಬಕ್ಕಾಗಿ ಮಾರ್ಗಸೂಚಿಗಳನ್ನು ಪ್ರಕಟಿಸಲಾಗುವುದು ಎಂದರು.
ರಸ್ತೆಗಳಲ್ಲಿನ ಜಗಳದಲ್ಲಿ ಪದೇ ಪದೇ ಭಾಗಿಯಾಗುವ ಆರೋಪಿಗಳ ವಿರುದ್ಧ ಗೂಂಡಾ ಕಾಯ್ದೆ ಅಡಿ ಪ್ರಕರಣ ದಾಖಲಿಸಲಾಗುವುದು. ರಸ್ತೆ ಜಗಳದ ನೆಪದಲ್ಲಿ ಸುಲಿಗೆ ಹಾಗೂ ಡಕಾಯಿತಿ ಮಾಡುವವರನ್ನು ನಿಯಂತ್ರಿಸಲು ಕಠಿಣ ಕ್ರಮ ಜರುಗಿಸಲಾಗುತ್ತದೆ ಎಂದು ಸ್ಪಷ್ಟ ಪಡಿಸಿದರು.ಯಲಹಂಕದಲ್ಲಿ ರೌಡಿಗಳ ನಡುವೆ ನಡೆದ ಗ್ಯಾಂಗ್ ವಾರ್‌ಗೆ ಸಂಬಂಧ ಪಟ್ಟಂತೆ ಕೆಲವರನ್ನು ಬಂಧಿಸಲಾಗಿದೆ ಎಂದು ತಿಳಿಸಿದರು.