ಇಂಫಾಲ, ಅ 27- ಮಣಿಪುರದ ಬಿಷ್ಣುಪುರ್ ಜಿಲ್ಲೆಯಲ್ಲಿ ಇಂದು ಮುಂಜಾನೆ ಉಗ್ರರು ಭದ್ರತಾ ಪಡೆಗಳ ಶಿಬಿರದ ಮೇಲೆ ದಾಳಿ ನಡೆಸಿದ್ದು, ಇಬ್ಬರು ಸಿಆರ್‌ಪಿಎಫ್ ಯೋಧರು ಹುತಾತ್ಮರಾಗಿದ್ದು, ಇಬ್ಬರು ಗಾಯಗೊಂಡಿದ್ದಾರೆ. ಮೊಯಿರಾಂಗ್ ಪೊಲೀಸ್ ಠಾಣಾ ವ್ಯಾಪ್ತಿಯ ನರನ್ಸೇನಾದಲ್ಲಿ ಐಆರ್‌ಬಿಎನ್(ಇಂಡಿಯಾ ರಿಸರ್ವ್ ಬೆಟಾಲಿಯನ್) ಶಿಬಿರದ ಮೇಲೆ ಉಗ್ರರು ದಾಳಿ ನಡೆಸಿದ್ದಾರೆ ಎಂದು ಅವರು ಎಂದು ಪೊಲೀಸರು ತಿಳಿಸಿದ್ದಾರೆ.
ಉಗ್ರರು ಭದ್ರತಾ ಶಿಬಿರವನ್ನು ಗುರಿಯಾಗಿಸಿಕೊಂಡು ಬೆಟ್ಟದ ತುದಿಯಿಂದ ಮನಬಂದಂತೆ ಗುಂಡು ಹಾರಿಸಿದರು. ಇದು ಮಧ್ಯರಾತ್ರಿ 12.30 ರ ಸುಮಾರಿಗೆ ಪ್ರಾರಂಭವಾಗಿ 2.15 ರವರೆಗೂ ಮುಂದುವರೆಯಿತು ಎಂದು ಮೂಲಗಳು ತಿಳಿಸಿವೆ. ಉಗ್ರರು ಬಾಂಬ್‌ಗಳನ್ನು ಎಸೆದಿದ್ದು ಅವುಗಳಲ್ಲಿ ಒಂದು ಸಿಆರ್‌ಪಿಎಫ್‌ನ 128 ಬೆಟಾಲಿಯನ್‌ನ ಔಟ್‌ಪೋಸ್ಟ್‌ನಲ್ಲಿ ಸ್ಫೋಟಗೊಂಡಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಮೃತರನ್ನು ಸಿಆರ್‌ಪಿಎಫ್ ಸಬ್ ಇನ್‌ಸ್ಪೆಕ್ಟರ್ ಎನ್ ಸರ್ಕಾರ್ ಮತ್ತು ಹೆಡ್ ಕಾನ್‌ಸ್ಟೆಬಲ್ ಅರೂಪ್ ಸೈನಿ ಎಂದು ಗುರುತಿಸಲಾಗಿದೆ.ಗಾಯಗೊಂಡವರು ಇನ್‌ಸ್ಪೆಕ್ಟರ್ ಜಾದವ್ ದಾಸ್ ಮತ್ತು ಕಾನ್‌ಸ್ಟೆಬಲ್ ಅಫ್ತಾಬ್ ದಾಸ್ ಅವರಿಗೆ ಗಾಯಗಳಾಗಿವೆ. ಶಿಬಿರಕ್ಕೆ ಹೆಚ್ಚಿನ ಭದ್ರತೆ ಒದಗಿಸಲು ಸಿಬ್ಬಂದಿಯನ್ನು ನಿಯೋಜಿಸಲಾಗಿತ್ತು. ದಾಳಿ ನಡೆಸಿದ ದುಷ್ಕರ್ಮಿಗಳ ಪತ್ತೆಗೆ ವ್ಯಾಪಕ ಶೋಧ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.