Thursday, August 7, 2025
Homeಅಂತಾರಾಷ್ಟ್ರೀಯ | Internationalಭಾರತದ ಖಡಕ್ ಉತ್ತರದಿಂದ ಮೈಪರಚಿಕೊಳ್ಳುತ್ತಿರುವ ಟ್ರಂಪ್, ಮತ್ತಷ್ಟು ಸುಂಕದ ಬೆದರಿಕೆ

ಭಾರತದ ಖಡಕ್ ಉತ್ತರದಿಂದ ಮೈಪರಚಿಕೊಳ್ಳುತ್ತಿರುವ ಟ್ರಂಪ್, ಮತ್ತಷ್ಟು ಸುಂಕದ ಬೆದರಿಕೆ

Trump Says He'll Raise India Tariffs Over Russian Oil

ವಾಷಿಂಗ್ಟನ್‌, ಆ.5– ರಷ್ಯಾದಿಂದ ಕಚ್ಚಾ ತೈಲ ಆಮದು ಮಾಡಿ ಉಕ್ರೇನ್‌ ವಿರುದ್ಧದ ಯುದ್ಧಕ್ಕೆ ಸಹಕಾರ ನೀಡುತ್ತಿದೆ ಎನ್ನುವ ಹೇಳಿಕೆಗೆ ಭಾರತ ತಿರುಗೇಟು ಕೊಟ್ಟ ಬೆನ್ನಲ್ಲೇ ಟ್ರಂಪ್‌ ಮತ್ತಷ್ಟು ಸುಂಕ ವಿಧಿಸುವ ಬೆದರಿಕೆ ಹಾಕಿದ್ದಾರೆ. ಭಾರತದಿಂದ ಖರೀದಿಸುವ ಎಲ್ಲ ಆಮದು ವಸ್ತುಗಳ ಮೇಲೆ ಸುಂಕ ಗಣನೀಯ ಏರಿಕೆ ಮಾಡಲಾಗುವುದು ಎಂದು ಅವರು ಎಚ್ಚರಿಸಿದ್ದಾರೆ.

ಭಾರತ ರಷ್ಯಾದಿಂದ ದೊಡ್ಡ ಪ್ರಮಾಣದಲ್ಲಿ ಕಚ್ಚಾ ತೈಲ ಆಮದು ಮಾಡಿಕೊಳ್ಳುತ್ತಿದೆ. ಈ ಮೂಲಕ ದೊಡ್ಡ ಪ್ರಮಾಣದಲ್ಲಿ ಲಾಭ ಮಾಡಿಕೊಳ್ಳುತ್ತಿದೆ. ಭಾರತವು ದೊಡ್ಡ ಪ್ರಮಾಣದಲ್ಲಿ ರಷ್ಯಾದ ತೈಲ ಮಾತ್ರ ಖರೀದಿಸುತ್ತಿಲ್ಲ, ಖರೀದಿಸಿದ ತೈಲವನ್ನು ಮುಕ್ತ ಮಾರುಕಟ್ಟೆಯಲ್ಲಿ ಮಾರಾಟ ಮಾಡಿ, ದೊಡ್ಡ ಪ್ರಮಾಣದ ಲಾಭ ಮಾಡಿಕೊಳ್ಳುತ್ತಿದೆ ಎಂದು ತಮ್ಮ ಸಾಮಾಜಿಕ ಜಾಲತಾಣ ಟ್ರುಥ್‌ ಸೋಷಿಯಲ್‌ನಲ್ಲಿ ಅವರು ಬರೆದುಕೊಂಡಿದ್ದಾರೆ.

ಅತ್ತ ರಷ್ಯಾದ ಯುದ್ಧ ಟ್ಯಾಂಕರ್‌ಗಳಿಂದ ಉಕ್ರೇನ್‌ನಲ್ಲಿ ಹಲವು ಜನ ಸಾಯುತ್ತಿದ್ದರೂ ಅವರು ಹೆದರುತ್ತಿಲ್ಲ. ಈ ಕಾರಣದಿಂದಲೇ, ಭಾರತದಿಂದ ಖರೀದಿಸುವ ಎಲ್ಲ ಸರಕುಗಳಿಗೂ ಸುಂಕವನ್ನ ಗಣನೀಯವಾಗಿ ಏರಿಕೆ ಮಾಡಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.ಇದಕ್ಕೆ ಪ್ರತಿಕ್ರಿಯಿಸಿರುವ ಭಾರತ, ಸುಂಕ ಹೇರುವ ಪರಿಣಾಮಗಳ ಕುರಿತು ಪರಿಶೀಲನೆ ನಡೆಸುತ್ತಿದ್ದು, ದೇಶದ ಹಿತಾಸಕ್ತಿ ಕಾಯಲು ಎಲ್ಲ ರೀತಿಯ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಲಾಗುವುದು ಎಂದು ಹೇಳಿದೆ.

ಈಗಾಗಲೇ ಆಗಸ್ಟ್‌ 7ರಿಂದ ಅನ್ವಯವಾಗುವಂತೆ ಭಾರತದಿಂದ ಆಮದು ಮಾಡಿಕೊಳ್ಳುವ ಎಲ್ಲ ಸರಕುಗಳಿಗೂ ಶೇ.25ರಷ್ಟು ಸುಂಕ ವಿಧಿಸುವ ಆದೇಶಕ್ಕೆ ಟ್ರಂಪ್‌ ಸಹಿ ಹಾಕಿದ್ದಾರೆ. ಆದ್ರೆ ಪಾಕಿಸ್ತಾನಕ್ಕೆ ಶೇ.19 ಸುಂಕ ವಿಧಿಸಿದ್ದಾರೆ. ಬೃಹತ್‌ ಪ್ರಮಾಣದಲ್ಲಿ ರಷ್ಯಾದ ಸೇನಾ ಉಪಕರಣಗಳು, ಕಚ್ಚಾ ತೈಲ ಖರೀದಿಸುತ್ತಿರುವ ಭಾರತದ ಮೇಲೆ ದಂಡ ವಿಧಿಸಲಾಗುವುದು ಎಂದು ಹೇಳಿದ್ದರು.

RELATED ARTICLES

Latest News