ಬೆಂಗಳೂರು, ಫೆ.19 – ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ಮಹಾ ಕುಂಭಮೇಳಕ್ಕೆ ಬೆಂಗಳೂರಿನಿಂದ ತೆರಳುತಿದ್ದ ಟಿಟಿ ಮಧ್ಯಪ್ರದೇಶ ಕಟ್ಟಾ ಬಳಿ ಅಪಘಾತ ಸಂಬವಿಸಿ ಮಹಿಳೆ ಮೃತಪಟ್ಟು ಐವರಿಗೆ ಗಂಭೀರ ಗಾಯವಾಗಿದೆ.
ಮಹಾ ಕುಂಭಮೇಳಕ್ಕೆ ಬೆಂಗಳೂರಿನಿಂದ ಟಿಟಿ ವಾಹನದಲ್ಲಿ ತೆರಳುತ್ತಿದ್ದರು. ಮಾರ್ಗ ಮಧ್ಯೆ ಲಾರಿ ಹಾಗೂ ಟಿಟಿ ವಾಹನ ನಡುವೆ ಅಪಘಾತ ಸಂಭವಿಸಿದೆ.ಗಾ ಯಾಳುಗಳನ್ನು ಕಟನಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಗಾಯಾಳುಗಳನ್ನು ಬೆಂಗಳೂರಿಗೆ ಸ್ಥಳಾಂತರಿಸುವಂತೆ ಕುಟುಂಬಸ್ಥರು ಮನವಿ ಮಾಡಿದ್ದು, ಅಧಿಕಾರಿಗಳು ಮಾಹಿತಿ ಕಲೆಹಾಕುತ್ತಿದ್ದಾರೆ. ಕಳೆದ ರಾತ್ರಿ ಈ ದುರಂತ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.