Thursday, February 29, 2024
Homeರಾಜ್ಯತುಮಕೂರು ನೂತನ ಜಿಲ್ಲಾಧಿಕಾರಿಯಾಗಿ ಶುಭ ಕಲ್ಯಾಣ್ ಅಧಿಕಾರ ಸ್ವೀಕಾರ

ತುಮಕೂರು ನೂತನ ಜಿಲ್ಲಾಧಿಕಾರಿಯಾಗಿ ಶುಭ ಕಲ್ಯಾಣ್ ಅಧಿಕಾರ ಸ್ವೀಕಾರ

ತುಮಕೂರು,ಡಿ.16- ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಶುಭಕಲ್ಯಾಣ್ ಅವರು ಅಧಿಕಾರ ಸ್ವೀಕರಿಸಿದರು. ಆರ್‍ಡಿಪಿಆರ್-ಇ ಆಡಳಿತದ ನಿರ್ದೇಶಕರಾಗಿದ್ದ ಶುಭಕಲ್ಯಾಣ್ ಅವರನ್ನು ತುಮಕೂರು ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ವರ್ಗಾವಣೆ ಮಾಡಲಾಗಿದೆ.2014ನೇ ಬ್ಯಾಚ್‍ನ ಐಎಎಸ್ ಅಧಿಕಾರಿ ಶುಭಕಲ್ಯಾಣ್ ಅವರು ತುಮಕೂರು ಜಿಲ್ಲೆಗೆ ಚಿರಪರಿಚಿತರು. ಈ ಹಿಂದೆ ತುಮಕೂರು ಜಿಲ್ಲಾ ಪಂಚಾಯಿತಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾಗಿ ಕಾರ್ಯ ನಿರ್ವಹಿಸಿದ್ದರು.

ಭೌಗೋಳಿಕವಾಗಿ ರಾಜ್ಯದ ಎರಡನೇ ಅತಿ ದೊಡ್ಡ ಜಿಲ್ಲೆಯಾಗಿರುವ ತುಮಕೂರು ತಾಲೂಕುಗಳನ್ನು ಒಳಗೊಂಡಿದ್ದು, ತೀವ್ರ ಬರಪೀಡಿತ ಪ್ರದೇಶವಾಗಿದ್ದು, ಪ್ರಸ್ತುತ ಬರಗಾಲ ಆವರಿಸಿದ್ದು, ಕುಡಿಯುವ ನೀರು , ಜಾನುವಾರುಗಳ ಮೇವು ಸೇರಿದಂತೆ ಅಗತ್ಯ ಮೂಲಭೂತ ಸೌಲಭ್ಯ ನಿರ್ವಹಣೆಯ ಜವಾಬ್ದಾರಿ ಸೇರಿದಂತೆ ಹಲವಾರು ಹೊಣೆಗಾರಿಕೆ ಇವರ ಮೇಲಿದೆ.

ಸುಪ್ರೀಂ ಕೋರ್ಟ್ ಚಾಟಿ ಬೀಸಿದ ಬೆನ್ನಲ್ಲೇ ಪಾಕ್ ಚುನಾವಣೆ ದಿನಾಂಕ ಘೋಷಣೆ

ಈ ಹಿಂದೆ ಜಿಲ್ಲೆಯಲ್ಲಿ ಕಾರ್ಯ ನಿರ್ವಹಿಸಿದ ಅನುಭವವಿದ್ದು, ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಉತ್ತಮವಾಗಿ ಕಾರ್ಯ ನಿರ್ವಹಿಸಲಿದ್ದಾರೆ. ನಿರ್ಗಮಿತ ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್‍ರಿಂದ ನಿನ್ನೆ ಸಂಜೆ ಜಿಲ್ಲಾಧಿಕಾರಿ ಕಚೇರಿಯಲ್ಲಿ ಅಧಿಕಾರ ಸ್ವೀಕರಿಸಿದರು. ನೂತನ ಜಿಲ್ಲಾಧಿಕಾರಿಗೆ ಜಿಲ್ಲಾ ತಾಲೂಕು ಪಂಚಾಯಿತಿ ಅಧಿಕಾರಿಗಳು ಶುಭ ಕೋರಿದ್ದಾರೆ.

RELATED ARTICLES

Latest News