ಬೆಲ್ಟ್ ಹಾಗೂ ದೊಣ್ಣೆಯಿಂದ ವಸತಿ ಶಾಲೆಯ ಮಕ್ಕಳ ಮೇಲೆ ಹಲ್ಲೆ

Social Share

ತುಮಕೂರು, ನ. 25- ವಸತಿ ಶಾಲೆಯ ಮಕ್ಕಳ ಮೇಲೆ ಶಾಲೆಯ ಕಾರ್ಯದರ್ಶಿಯ ಮಗ ಹಲ್ಲೇ ನಡೆಸಿರುವ ಆರೋಪ ಕೇಳಿ ಬಂದಿದೆ. ಮಲ್ಲಸಂದ್ರದ ವಿಶ್ವಭಾರತಿ ಶಾಲೆಯಲ್ಲಿ ಮಕ್ಕಳ ಮೇಲೆ ಹಲ್ಲೆ ನಡೆದಿದೆ ಎನ್ನಲಾಗಿದೆ.

ಶಾಲೆಯ ಕಾರ್ಯದರ್ಶಿ ಎನ್.ಮೂರ್ತಿ ಅವರ ಪುತ್ರ ಭರತ್ ಈ ಕೃತ್ಯವೆಸಗಿದ್ದು, ಕುಡಿದ ಅಮಲಿನಲ್ಲಿ ವಸತಿ ಶಾಲೆಯ 42 ಮಕ್ಕಳನ್ನು ಸಾಲಾಗಿ ನಿಲ್ಲಿಸಿ ಬೆಲ್ಟ ಹಾಗೂ ದೊಣ್ಣೆಯಿಂದ ಮನಬಂದಂತೆ ಹೊಡೆದಿದ್ದಾನೆ ಎಂದು ತಿಳಿದು ಬಂದಿದೆ.

ಶಾಲಾ ಕಾರ್ಯದರ್ಶಿಯ ಮಗನ ದರ್ಪದಿಂದ 42 ಮಕ್ಕಳ ಪೈಕಿ ಒಂದು ಮಗುವಿನ ಕೈ ಮುರಿದಿದೆ, ಬೆಳವಣಿಗೆ ಹಂತದಲ್ಲಿರುವ ಮಕ್ಕಳ ಮೇಲೆ ನಡೆದಿರುವ ರಾಕ್ಷಸಿ ಕೃತ್ಯದ ಬಗ್ಗೆ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸ್ಥಳಕ್ಕೆ ಬಿಇಒ ಹನುಮಾನಾಯ್ಕ್, ಸಮಾಜ ಕಲ್ಯಾಣಾಧಿಕಾರಿ ಪ್ರೇಮಾ, ಮಕ್ಕಳ ರಕ್ಷಣಾಕಾರಿ ಪ್ರೇಮ ಭೇಟಿ ಪರಿಶೀಲನೆ ನಡೆಸಿದ್ದು, ಗಾಯಗೊಂಡಿರುವ ಮಕ್ಕಳನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ, ಹಲ್ಲೇ ಘಟನೆಯನ್ನು ಶಾಲಾ ಆಡಳಿತ ಮಂಡಳಿ ಮುಚ್ಚಿಟ್ಟಿ ಹೀನ ಕೃತ್ಯವನ್ನು ಮುಚ್ಚಿಹಾಕಲು ಯತ್ನಿಸಲಾಗಿತ್ತು ಎಂಬ ಆರೋಪ ಕೇಳಿ ಬಂದಿದೆ.

ಘಟನೆ ನಡೆದ ಮೂರು ದಿನಗಳ ಬಳಿಕ ಹಲ್ಲೇಗೊಳಗಾದ ಮಕ್ಕಳು ತಮ್ಮ ಪೋಷಕರಿಗೆ ಮಾಹಿತಿ ನೀಡಿದ್ದಾರೆ. ವಿಚಾರ ತಿಳಿಯುತ್ತಿದ್ದಂತೆ ಪೋಷಕರು ಶಾಲೆಗೆ ಧಾವಿಸಿದ್ದಾರೆ. ಆರೋಪಿ ಭರತ್ ಪರಾರಿಯಾಗಿದ್ದಾನೆ.
ಪ್ರಕರಣ ದಾಖಲಿಸಿಕೊಂಡಿರುವ ತುಮಕೂರು ಗ್ರಾಮಾಂತರ ಠಾಣೆ ಪೊಲೀಸರು ಆರೋಪಿ ಭರತ್‍ಗಾಗಿ ಹುಡುಕಾಟ ನಡೆಸಿದ್ದಾರೆ.

Tumkur, residential, school, children,

Articles You Might Like

Share This Article