ತುಮಕೂರು,ಜ.29- ಬಾಯ್ಲರ್ ಸ್ಫೋಟಗೊಂಡು ಇಬ್ಬರು ಕಾರ್ಮಿಕರು ಮೃತಪಟ್ಟು ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಗರದ ಹೊರವಲಯದ ಅಂತರಸನಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ ನಡೆದಿದೆ.
ಬಿಹಾರದ ಬೇಹು ಸರಾಯ್ ಜಿಲ್ಲೆಯ ಸಂತೋಷ್ (27), ಚಂದನ್ ಶರ್ಮ (24) ಮೃತಪಟ್ಟ ಕಾರ್ಮಿಕರು. ಫೀಡ್ ಕಾರ್ಖಾನೆಯಲ್ಲಿ 40 ಅಡಿ ಎತ್ತರದ ಆಯಿಲ್ ಬಾಯ್ಲರ್ ಒಳಗಿನ ಒತ್ತಡದಿಂದ ಸ್ಫೋಟಗೊಂಡಿದ್ದು, ಛಿಮಣಿ ಮೇಲಿಂದ ಕುದಿಯುತ್ತಿದ್ದ ಆಯಿಲ್ ಕಾರ್ಮಿಕರ ಮೇಲೆ ಬಿದ್ದಿದ್ದು, ಗಂಭೀರವಾಗಿ ಗಾಯಗೊಂಡ ಇಬ್ಬರು ಕಾರ್ಮಿಕರು ಸ್ಥಳದಲ್ಲೇ ಮೃತಟ್ಟಿದ್ದಾರೆ ಎನ್ನಲಾಗಿದೆ.
ಉಳಿದ ಮೂವರಿಗೆ ಗಂಭೀರ ಗಾಯಗಳಾಗಿದ್ದು ಚಿಕಿತ್ಸೆಗಾಗಿ ಜಿಲ್ಲಾಸ್ಪತ್ರೆಗೆ ಸಾಗಿಸಲಾಗಿದೆ.ಸುದ್ದಿ ತಿಳಿಯುತ್ತಿದ್ದಂತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ವಿ.ಅಶೋಕ್, ಜಿಲ್ಲಾ ಕಾರ್ಮಿಕ ಅಧಿಕಾರಿ ತೇಜೋವತಿ ಹಾಗೂ ಗ್ರಾಮಾಂತರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಘಟನೆ ಸಂಬಂಧ ಕಾರ್ಖಾನೆಯ ಇಬ್ಬರು ಮೇಲ್ವಿಚಾರಕರನ್ನು ವಶಕ್ಕೆ ಪಡೆದು ವಿಚಾರಣೆಗೊಳಪಡಿಸಲಾಗಿದೆ.