Sunday, May 19, 2024
Homeಜ್ಯೋತಿಷ್ಯ-ರಾಶಿಭವಿಷ್ಯಸಮಾಜವನ್ನು ಬದಲಿಸುವ ಶಕ್ತಿ ಇರುವ ಮತದಾನದ ಮಹತ್ವ ಅರಿಯಿರಿ : ತುಷಾರ್ ಗಿರಿನಾಥ್

ಸಮಾಜವನ್ನು ಬದಲಿಸುವ ಶಕ್ತಿ ಇರುವ ಮತದಾನದ ಮಹತ್ವ ಅರಿಯಿರಿ : ತುಷಾರ್ ಗಿರಿನಾಥ್

ಬೆಂಗಳೂರು, ಮಾ.26- ಒಂದೊಂದು ಮತಕ್ಕೂ ಸಮಾಜವನ್ನು ಬದಲಿಸುವ ಶಕ್ತಿ ಇದ್ದು, ಎಲ್ಲರೂ ಮತದ ಮಹತ್ವ ಅರಿತು ಸ್ವಯಂಪ್ರೇರಣೆಯಿಂದ ಬಂದು ಮತದಾನ ಮಾಡುವಂತಾಗಬೇಕು ಎಂದು ಜಿಲ್ಲಾ ಚುನಾವಣಾಧಿಕಾರಿಯೂ ಆದ ಬಿಬಿಎಂಪಿ ಮುಖ್ಯ ಆಯುಕ್ತರಾದ ತುಷಾರ್ ಗಿರಿನಾಥ್ ಇಂದಿಲ್ಲಿ ತಿಳಿಸಿದ್ದಾರೆ.

ಸಾರ್ವತ್ರಿಕ ಲೋಕಸಭಾ ಚುನಾವಣೆ-2024ರ ಸಂಬಂಧ ಬೆಂಗಳೂರು ಕೇಂದ್ರ ಲೋಕಸಭಾ ವ್ಯಾಪ್ತಿಯಲ್ಲಿ ಮತಗಟ್ಟೆ ಮಟ್ಟದ ಅಧಿಕಾರಿಗಳು ಹಾಗೂ ಮೇಲ್ವಿಚಾರಕರಿಗೆ ಸರ್ಕಾರಿ ಕಲಾ ಕಾಲೇಜಿನಲ್ಲಿ ಹಮ್ಮಿಕೊಂಡಿದ್ದ ತರಬೇತಿ ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದ ಅವರು, ನಗರದಲ್ಲಿ ವಾಸಿಸುವ ಜನರಿಗೆ ಮತದಾನ ಮಾಡಲು ಹೆಚ್ಚು ಆಸಕ್ತಿ ಇರುವುದಿಲ್ಲ.

ಈ ಸಂಬಂಧ ಮತದಾರರಲ್ಲಿ ಮತದಾನದ ಮಹತ್ವ ಕುರಿತು ಅರಿವು ಮೂಡಿಸಿ ತಪ್ಪದೆ ಮತದಾನ ಮಾಡುವಂತೆ ಜಾಗೃತಿ ಮೂಡಿಸಿ ಎಂದು ತಿಳಿಸಿದರು.ಪ್ರಜಾಪ್ರಭುತ್ವಕ್ಕೆ ಎಲ್ಲರೂ ಮೊದಲು ಪ್ರಾಮುಖ್ಯತೆ ನೀಡಬೇಕು. ಮತದಾನದ ಹಕ್ಕು ಪ್ರತಿಯೊಬ್ಬರಿಗೂ ಸಿಕ್ಕ ಮೂಲಭೂತ ಹಕ್ಕುಗಳಲ್ಲಿ ಒಂದಾಗಿದ್ದು, ಈ ನಿಟ್ಟಿನಲ್ಲಿ ಸುಭದ್ರ ದೇಶ ಹಾಗೂ ರಾಜ್ಯ ನಿರ್ಮಾಣಕ್ಕೆ ತಪ್ಪದೆ ಮತದಾನ ಮಾಡಿ ಎಂದು ತಿಳಿಸಿದರು.

ನಗರದಲ್ಲಿ ಬರುವ ಆಯಾಯ ಮತಗಟ್ಟೆ ವ್ಯಾಪ್ತಿಯಲ್ಲಿ ಎಷ್ಟೆಷ್ಟು ಮತದಾರರಿದ್ದಾರೆ ಎಂಬ ಮಾಹಿತಿ ನಿಮ್ಮ ಬಳಿ ಇದ್ದು, ಅದರನುಸಾರ ಮನೆಮನೆಗೆ ಭೇಟಿ ನೀಡಿ ಮತದಾನ ಮಾಡುವಂತೆ ಪ್ರೇರೇಪಿಸುವ ಕೆಲಸ ಮಾಡಬೇಕೆಂದು ಬಿಎಲ್ಒಗಳಿಗೆ ತಿಳಿಸಿದರು. ಈ ವೇಳೆ ಸ್ವೀಪ್ ಮೇಲ್ವಿಚಾರಣಾ ಸಮಿತಿ ಅಧ್ಯಕ್ಷರಾದ ಕಾಂತರಾಜು, ಬೆಂಗಳೂರು ನಗರ ಜಿಲ್ಲೆಯ ಸ್ವೀಪ್ ನೋಡಲ್ ಅಧಿಕಾರಿ ಪ್ರತಿಭಾ, ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರದ ನೋಡಲ್ ಅಧಿಕಾರಿ ರಮಾಮಣಿ ಸೇರಿದಂತೆ ಮತ್ತಿತರ ಅಧಿಕಾರಿಗಳು ಪಾಲ್ಗೊಂಡಿದ್ದರು.

RELATED ARTICLES

Latest News