ಇಬ್ಬರ ಬಂಧನ : 18 ಲಕ್ಷ ಮೌಲ್ಯದ 30 ದ್ವಿಚಕ್ರ ವಾಹನಗಳು ಜಪ್ತಿ

Social Share

ಬೆಂಗಳೂರು,ಅ.24-ದ್ವಿಚಕ್ರ ವಾಹನಗಳನ್ನು ಕಳವು ಮಾಡುತ್ತಿದ್ದ ಇಬ್ಬರನ್ನು ಬ್ಯಾಟರಾಯನಪುರ ಠಾಣೆ ಪೊಲೀಸರು ಬಂಧಿಸಿ 18 ಲಕ್ಷ ರೂ. ಮೌಲ್ಯದ 30 ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಂಡಿದ್ದಾರೆ.
ಶ್ರೀರಾಮಪುರದ ರಾಮಚಂದ್ರಪುರ ನಿವಾಸಿ ಕೃತಿಕ್(18) ಮತ್ತು ಮಾಗಡಿ ಮುಖ್ಯರಸ್ತೆಯ ವಿಜಯ್ ಅಲಿಯಾಸ್ ಕರಿಯಾ(21) ಬಂಧಿತರು.

ಮನೆ ಹಾಗೂ ಪಾರ್ಕಿಂಗ್ ಸ್ಥಳಗಳಲ್ಲಿ ನಿಲ್ಲಿಸಿದ್ದಂತಹ ದ್ವಿಚಕ್ರ ವಾಹನಗಳ ಹ್ಯಾಂಡ್‍ಲಾಕ್ ಮುರಿದು ಕಳ್ಳತನ ಮಾಡುತ್ತಿದ್ದ ಬಗ್ಗೆ ಬ್ಯಾಟರಾಯನಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣಗಳು ದಾಖಲಾಗಿದ್ದವು. ಪತ್ತೆಯಾಗದೆ ಇರುವ ದ್ವಿಚಕ್ರ ವಾಹನ ಕಳವು ಪ್ರಕರಣಗಳಲ್ಲಿ ಮಾಲು ಮತ್ತು ಆರೋಪಿಗಳ ಪತ್ತೆಗಾಗಿ ಇನ್‍ಸ್ಪೆಕ್ಟರ್ ಶಂಕರ್ ನಾಯಕ್ ಅವರು ಪಿಎಸ್‍ಐ ಅವರನ್ನೊಳಗೊಂಡ ಸಿಬ್ಬಂದಿ ತಂಡವನ್ನು ರಚಿಸಿದ್ದರು.

ಬಿಎಂಟಿಸಿ ಬಸ್ ಹರಿದು ಸಾವನ್ನಪ್ಪಿದ ವಿದ್ಯಾರ್ಥಿನಿ ಕುಟುಂಬಕ್ಕೆ ಒಂದೂವರೆ ಕೋಟಿ ರೂ.ಪರಿಹಾರ ನೀಡಿ

ಈ ತಂಡ ಕಾರ್ಯಾಚರಣೆ ಕೈಗೊಂಡು ಇಬ್ಬರು ಆರೋಪಿಗಳನ್ನು ಪತ್ತೆಹಚ್ಚಿ ಬಂಧಿಸಿ ವಿಚಾರಣೆಗೊಳಪಡಿಸಿ ಸ್ವ ಇಚ್ಛಾ ಹೇಳಿಕೆ ಮೇರೆಗೆ ಬ್ಯಾಟರಾಯನಪುರ ಠಾಣೆಯ 5 ಪ್ರಕರಣ, ಚಂದ್ರಲೇಔಟ್ 2, ವಿವೇಕನಗರ, ಕಾಟನ್‍ಪೇಟೆ, ಕೆಂಗೇರಿ, ಯಲಹಂಕ ನ್ಯೂಟೌನ್, ಕಾಮಾಕ್ಷಿಪಾಳ್ಯ, ಚಾಮರಾಜಪೇಟೆ, ಮಾಗಡಿ ರಸ್ತೆ, ತಿಲಕ್‍ನಗರ ಠಾಣೆಯ ತಲಾ 1 ಪ್ರಕರಣಗಳು ಹಾಗೂ ಕೆಜಿನಗರ ಪೊಲೀಸ್ ಠಾಣೆಯ 2 ಪ್ರಕರಣಗಳು ಪತ್ತೆಯಾಗಿರುತ್ತವೆ.

ಉಳಿದ 13 ದ್ವಿಚಕ್ರ ವಾಹನಗಳ ಪ್ರಕರಣಗಳು ತನಿಖೆ ಪ್ರಗತಿಯಲ್ಲಿರುತ್ತದೆ. ಈ ಹಿಂದೆ ಆರೋಪಿ ವಿಜಯ್ ವಿರುದ್ದ ಹನುಮಂತನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.

ತಕ್ಕ ಉತ್ತರ ನೀಡಲು ನಮ್ಮ ಯೋಧರು ಸಮರ್ಥರಿದ್ದಾರೆ : ಪ್ರಧಾನಿ ಮೋದಿ

ಈ ಕಾರ್ಯಾಚರಣೆಯನ್ನು ಪಶ್ಚಿಮ ವಿಭಾಗದ ಡಿಸಿಪಿ ಲಕ್ಷ್ಮಣ ನಿಂಬರ್ಗಿ ಅವರ ಮಾರ್ಗದರ್ಶನದಲ್ಲಿ ಕೆಂಗೇರಿ ಗೇಟ್ ಉಪವಿಭಾಗದ ಎಸಿಪಿ ಕೋದಂಡರಾಮ್ ನೇತೃತ್ವದಲ್ಲಿ ಇನ್‍ಸ್ಪೆಕ್ಟರ್ ಶಂಕರನಾಯಕ್, ಪಿಎಸ್‍ಐಗಳಾದ ರಾಹುಲ್ ರೆಡ್ಡಿ, ಶ್ರೀಶೈಲ ಜುಲುಪಿ, ಎಎಸ್‍ಐ ರಘು ಅವರನ್ನೊಳಗೊಂಡ ಸಿಬ್ಬಂದಿ ತಂಡ ಆರೋಪಿಗಳನ್ನು ಬಂಧಿಸಿ 30 ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದೆ.

Articles You Might Like

Share This Article